July 7, 2026

ಧರ್ಮಸ್ಥಳ

ಧರ್ಮಸ್ಥಳ: ಮಂಗಳೂರಿನ ಕುಳಾಯಿ ಚಿತ್ರಾಪುರದಲ್ಲಿರುವ ವಿಜಯಧ್ವಜತೀರ್ಥ ಪೀಠದ ಪೂಜ್ಯ ವಿದ್ಯೇಂದ್ರತೀರ್ಥ ಶ್ರೀಪಾದರು ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಅವರನ್ನು ಭವ್ಯ ಮೆರವಣಿಗೆಯ ಮೂಲಕ ಆತ್ಮೀಯವಾಗಿ ಸ್ವಾಗತಿಸಲಾಯಿತು. ಬಳಿಕ ಧರ್ಮಾಧಿಕಾರಿಗಳ ನಿವಾಸವಾದ ಬೀಡಿನಲ್ಲಿ ಸ್ವಾಮೀಜಿಯವರ ಪಾದಪೂಜೆ ನೆರವೇರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಕ್ಷೇತ್ರದ ಪರವಾಗಿ ಪೂಜ್ಯ ಶ್ರೀಪಾದರನ್ನು ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಹಾಗೂ ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ಅನಂತರ ಪೂಜ್ಯ ವಿದ್ಯೇಂದ್ರತೀರ್ಥ ಶ್ರೀಪಾದರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೆ, ಅನ್ನಪೂರ್ಣ ಭೋಜನಾಲಯ ಹಾಗೂ ಸರದಿ ಸಾಲು ವ್ಯವಸ್ಥೆಯಾದ “ಶ್ರೀ ಸಾನ್ನಿಧ್ಯ”ವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಧರ್ಮಸ್ಥಳ: ಯೋಜನೆ ಮತ್ತು ಸಾಂಖಿಕ ಸಚಿವರಾಗಿದ್ದ ಡಿ. ಸುಧಾಕರ್ ಚಳ್ಳಕೆರೆ ಅವರು ನಿಧನರಾದ ವಿಚಾರ ತಿಳಿದು ವಿಷಾದವಾಯಿತು. ಅಲ್ಪಕಾಲದ ಅನಾರೋಗ್ಯದಿಂದ ಅಗಲಿದ ಡಿ....
March 3 Lunar Eclipse: ಮಾರ್ಚ್ 3ರ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಕರ್ನಾಟಕದಾದ್ಯಂತ ಪ್ರಮುಖ ದೇವಾಲಯಗಳ ದರ್ಶನ ಹಾಗೂ ಪೂಜಾ ಸಮಯದಲ್ಲಿ ಮಹತ್ವದ ಬದಲಾವಣೆಗಳಾಗಿವೆ....
ಉಜಿರೆ: ಬೆಂಗಳೂರಿನ ವಿಶ್ವ ಚೈತನ್ಯ ಕ್ವಾಂಟಮ್ ಫೌಂಡೇಶನ್ ನೇತೃತ್ವದಲ್ಲಿ ಜ. 22 ರಿಂದ 25ರ ವರೆಗೆ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ “ಧ್ಯಾನ ಮಹಾಯಜ್ಞ”...
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಡಿಯಲ್ಲಿ ಶಾಲಾಕೊಠಡಿ, ಆಟದಮೈದಾನ, ಕುಡಿಯುವರು, ಶೌಚಾಲಯ, ರಂಗಮಂದಿರ, ಬೋಧನಾಸಾಮಾಗ್ರಿಗಳ ವಿತರಣೆ ಇತ್ಯಾದಿ...
ಧರ್ಮಸ್ಥಳ: ವಿಶ್ವ ವನಿತಾ ಕಬಡ್ಡಿಯಲ್ಲಿ ಚಾಂಪಿಯನ್ ಶಿಪ್ ಪಡೆದ ಭಾರತ ತಂಡವನ್ನು ಪ್ರತಿನಿಧಿಸಿ ರಾಜ್ಯಕ್ಕೆ ಕೀರ್ತಿ ತಂದ ಕು. ಧನಲಕ್ಷ್ಮೀ ಪೂಜಾರಿ ಇಡ್ಯಾ...
ಹಣ ಮತ್ತು ಬಹುಮಾನಕ್ಕಾಗಿ ಸಾಹಿತ್ಯ ರಚನೆ ಸಲ್ಲದು. ಸಮಾಜ ಕಲ್ಯಾಣಕ್ಕಾಗಿ ಪ್ರೀತಿಯಿಂದ ಸಾಹಿತ್ಯ ರಚನೆ ಮಾಡಬೇಕು: ಹಿರಿಯ ಸಾಹಿತಿ ಪ್ರೊ. ಪ್ರೇಮಶೇಖರಉಜಿರೆ: ಹಣ...
ಉಜಿರೆ: ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹದಿಂದ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಹಾಗೂ ಕುಟುಂಬವರ್ಗದವರ ಆಶೀರ್ವಾದ ಮತ್ತು...
ಉಜಿರೆ: ಧರ್ಮಸ್ಥಳದ ವತಿಯಿಂದ ಉಜಿರೆಯಲ್ಲಿ ಈ ವರ್ಷ ನರ್ಸಿಂಗ್ ಕಾಲೇಜು ಪ್ರಾರಂಭಿಸಲಾಗುವುದು. ನೂರು ಎಕರೆ ಪ್ರದೇಶದಲ್ಲಿ ಕೃಷಿ ಕಾಲೇಜು ಆರಂಭಿಸಲು ಉದ್ದೇಶಿಸಲಾಗಿದೆ ಎಂದು...