ಭಾರತ್ ಜೋಡೋ ಕಾರ್ಯಕ್ರಮವನ್ನು ಕಾರ್ಯಕರ್ತರು ಅಭಿಮಾನಿಗಳು ಸೇರಿ ಯಶಸ್ವಿಗೊಳಿಸಿ: ಮಯೂರ್ ಕುಮಾರ್ ಜೈನ್ ಕರೆ

 

ಚಳ್ಳಕೆರೆ-22 ಭಾರತ್ ಜೋಡೋ ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಸೇರುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಎಐಸಿಸಿಯ ಕಾರ್ಯದರ್ಶಿಗಳಾದ ಶ್ರೀ ಮಯೂರ್ ಕುಮಾರ್ ಜೈನ್ ಕರೆ ನೀಡಿದರು.
ಅವರು ನಗರದ ಶಾಸಕರ ಭವನದಲ್ಲಿ ಏರ್ಪಡಿಸಿದ್ದ ಭಾರತ್ ಜೋಡೋ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಎಐಸಿಸಿ ಉಪಾಧ್ಯಕ್ಷ
ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ (ಭಾರತ್ ಜೂಡೋ) ಸೆಪ್ಟಂಬರ್ 30 ರಂದು ಕರ್ನಾಟಕ ಪ್ರವೇಶಸಲಿದೆ, ಚಳ್ಳಕೆರೆಗೆ 15-16ರಂದು ಪ್ರವೇಶಿಸಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಸಂಘಟನಾ ಶಕ್ತಿಯನ್ನು ಹೆಚ್ಚುಸುವರು. ಈ ಕುರಿತು ಈಗಾಗಲೇ ಸಕಲ ಸಿದ್ದತೆಯನ್ನು ಮಾಡಿಕೊಳ್ಳುವ ಮೂಲಕ ಅವರನ್ನು ಭವ್ಯವಾಗಿ ಸ್ವಾಗತಿಸಲು ಸಿದ್ದರಾಗಿ. ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ ರಘುಮೂರ್ತಿ ರವರ ನೇತೃತ್ವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆ ಇದ್ದು ಅದಕ್ಕೆ ಎಲ್ಲರೂ ಸಿದ್ದತೆ ಮಾಡಿಕೊಳ್ಳಿ. ಅಕ್ಟೋಬರ್ 12ನೇ ತಾರೀಖು ಚಿತ್ರದುರ್ಗ ಜಿಲ್ಲೆ ಪ್ರವೇಶಿಸಲಿದ್ದು ಈ ಐತಿಹಾಸಿಕ ಯಾತ್ರೆಯನ್ನು ಅಭೂತಪೂರ್ವಕವಾಗಿ ಯಶಸ್ವಿಯಾಗಿಸಲು ಚಳ್ಳಕೆರೆ ತಾಲೂಕಿನ ಪಕ್ಷದ ಮುಖಂಡರು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಪಾದಯಾತ್ರೆಯನ್ನು ಯಶಸ್ವಿಯಾಗಿಸಲು ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸುವುದರ ಕುರಿತು ಸಮಗ್ರ ಚರ್ಚೆ ನಡೆಸಿದರು.
ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದ ಎಐಸಿಸಿಯ ಕಾರ್ಯದರ್ಶಿ ಮಯೂರ್ ಕುಮಾರ್ ಜೈನ್ ರವರನ್ನು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಟಿ ತಿಪ್ಪೇಸ್ವಾಮಿ ಮತ್ತು ಕಿರಣ್ ಶಂಕರ್ ರವರು ಆತ್ಮೀಯವಾಗಿ ಸನ್ಮಾನಿಸಿದರು.
ಈ ಪೂರ್ವಭಾವಿ ಸಭೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಬಿ.ಎನ್. ಚಂದ್ರಪ್ಪ , ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್.ಮಂಜುನಾಥ್, ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಹಸಗೊಡು ಜಯಸಿಂಹ, ಮಾಜಿ ಸಚಿವ ಶಿವಮೂರ್ತಿ ನಾಯ್ಕ್, ಭಾರತ ಜೋಡೋ ಯಾತ್ರೆಯ ಸಂಯೋಜಕ ರಾಘವೇಂದ್ರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಾಜಪೀರ್, ಕೆಪಿಪಿಸಿ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಪಧಾ ಧಿಕಾರಿಗಳು ಪಕ್ಷದ ಮುಖಂಡರರು, ವಿವಿಧ ಘಟಕಗಳ ಜಿಲ್ಲಾ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಗೀತಾ ನಂದಿನಿ ಗೌಡ, ತಾಲ್ಲೂಕು ಮಹಿಳಾ ಅಧ್ಯಕ್ಷೆ ಗೀತಾಬಾಯಿ, ಪರಶುರಾಂಪುರ ಮಹಿಳಾ ಅಧ್ಯಕ್ಷೆ ಅನಿತಾ ವೆಂಕಟೇಶ್ ಪದಾಧಿಕಾರಿಗಳು, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಸದಸ್ಯರು, ನಗರಸಭೆ ಸದಸ್ಯರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours