ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆ: ಹಸು, ಎಮ್ಮೆ ಘಟಕ ವಿತರಿಸುವ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಡಿ.23:
2022-23ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿನ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಶೇ.33.33% ಹಾಗೂ ಇತರೆ ಫಲಾನುಭವಿಗಳಿಗೆ ಶೇ.25% ರ ಸಹಾಯಧನದೊಂದಿಗೆ ಒಂದು ಮಿಶ್ರ ತಳಿ ಹಸು, ಎಮ್ಮೆ ಘಟಕ ವಿತರಿಸುವ ಕಾರ್ಯಕ್ರಮ ಸರ್ಕಾರದಿಂದ ಅನುಮೋದನೆಯಾಗಿದೆ.
ಸರ್ಕಾರದಿಂದ ಅನುಮೋದನೆಯಾಗಿರುವಂತೆ ಕಾರ್ಯಕ್ರಮವನ್ನು ಸರ್ಕಾರದ ಮಾರ್ಗಸೂಚಿಯನ್ವಯ ಹಮ್ಮಿಕೊಳ್ಳಲಾಗಿದ್ದು, ತಾಲ್ಲೂಕುವಾರು ಗುರಿ ನಿಗಧಿಪಡಿಸಲಾಗಿದೆ. ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಫಲಾನುಭವಿಗಳು ಅರ್ಜಿಗಳನ್ನು ಅಗತ್ಯ ಸೂಕ್ತ ದಾಖಲಾತಿಗಳೊಂದಿಗೆ ಆಯಾ ತಾಲ್ಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿ ಅವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ  ಚಿತ್ರದುರ್ಗ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ 9741927007, ಚಳ್ಳಕೆರೆ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ 9448816499, ಹೊಳಲ್ಕೆರೆ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ 8073900950, ಹೊಸದುರ್ಗ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ 9448005250, ಹಿರಿಯೂರು ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ 9980976980, ಮೊಳಕಾಲ್ಮೂರು ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ 9900964820 ಗಳಿಗೆ ಸಂಪರ್ಕಿಸಬೇಕೆಂದು ಪಶುಪಾಲನಾ  ಮತ್ತು ಪಶುವೈದ್ಯ ಸೇವಾ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours