ಗುಡ್ ನ್ಯೂಸ್: 19 ಅಂಗನವಾಡಿ ಕಾರ್ಯಕರ್ತೆ, 110 ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

 

 

 

 

ಚಿತ್ರದುರ್ಗ,ಜನವರಿ29:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಫೆಬ್ರುವರಿ 26 ಕೊನೆಯ ದಿನವಾಗಿದೆ.
ಭರಮಸಾಗರ, ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಹಾಗೂ ಮೊಳಕಾಲ್ಮೂರು ಸೇರಿದಂತೆ ಜಿಲ್ಲಾ ವ್ಯಾಪ್ತಿಯ ಒಟ್ಟು 07 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 19 ಅಂಗನವಾಡಿ ಕಾರ್ಯಕರ್ತೆ ಹಾಗೂ 110 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.    ಜನವರಿ 27 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಫೆಬ್ರುವರಿ 26 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, www.anganwadirecruit.kar.nic.in ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.  
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು: ಆನ್‍ಲೈನ್‍ನಲ್ಲಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಜನನ ಪ್ರಮಾಣ ಪತ್ರ ಅಥವಾ ಜನ್ಮ ದಿನಾಂಕವಿರುವ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ ್ರ, (ಕಾರ್ಯಕರ್ತೆ ಹುದ್ದೆಗೆ ಎಸ್‍ಎಸ್‍ಎಲ್‍ಸಿಗಿಂತ ಹೆಚ್ಚಿನ ವಿದ್ಯಾರ್ಹತೆ ಹೊಂದಿರುವವರು ಎಸ್‍ಎಸ್‍ಎಲ್‍ಸಿ ತೇರ್ಗಡೆ ಹೊಂದಿರುವ ಅಂಕಪಟ್ಟಿ ಮಾತ್ರ ಲಗತ್ತಿಸುವುದು, ಸಹಾಯಕಿ ಹುದ್ದೆಗೆ ಕನಿಷ್ಠ 4ನೇ ತರಗತಿ ಉತ್ತೀರ್ಣ ಗರಿಷ್ಠ 9ನೇ ತರಗತಿ ಉತ್ತೀರ್ಣ ಹೊಂದಿರುವ ಅಂಕಪಟ್ಟಿ ಲಗತ್ತಿಸುವುದು), ತಹಶೀಲ್ದಾರರು ಅಥವಾ ಉಪ ತಹಶೀಲ್ದಾರರಿಂದ ಪಡೆದ 1 ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ, ಮೀಸಲಾತಿ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ ಲಗತ್ತಿಸುವುದು, ವಿಧವೆಯಾದಲ್ಲಿ ಪತಿಯ ಮರಣ ಪ್ರಮಾಣ ಪತ್ರ (ವಿಧವಾ ವೇತನ ದೃಢೀಕರಣವನ್ನು ಪರಿಗಣಿಸುವುದಿಲ್ಲ) ಆತ್ಮಹತ್ಯೆ ಮಾಡಿಕೊಂಡಿರುವ ರೈತನ ಪತ್ನಿಯೆಂದು ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ ಹಾಗೂ ಮರಣ ಪ್ರಮಾಣ ಪತ್ರ ಲಗತ್ತಿಸುವುದು, ಅಂಗವಿಕಲತೆ ಪ್ರಮಾಣ ಪತ್ರ ಕಾರ್ಯಕರ್ತೆ ಹುದ್ದೆಗೆ ಮಾತ್ರ (ದೈಹಿಕ ಅಂಗವಿಕಲತೆ ಶೇ.60ರಷ್ಟು  ಮೀರದಂತೆ ಇರುವವರು ಮಾತ್ರ) ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು) ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ ನಡೆಸಲ್ಪಟ್ಟ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯರ ಮಕ್ಕಳು ಎಂಬುದರ ಬಗ್ಗೆ ಮಾಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಂದ ಪ್ರಮಾಣ ಪತ್ರ, ಪರಿತ್ಯಕ್ತೆ ಎಂಬುದರ ಬಗ್ಗೆ ಗ್ರಾಮ ಪಂಚಾಯತ್‍ನಿಂದ ಪಡೆದ ಪ್ರಮಾಣ ಪತ್ರ, ಇಲಾಖೆಯ ಸುಧಾರಣಾ ಸಂಸ್ಥೆ ಅಥವಾ ರಾಜ್ಯ ಮಹಿಳಾ ನಿಲಯಗಳ ನಿವಾಸಿ ಎಂಬ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ, ಯೋಜನಾ ನಿರಾಶ್ರಿತರೆಂಬ ಬಗ್ಗೆ ತಹಶೀಲ್ದಾರ್‍ರವರಿಂದ ಪಡೆದ ಪ್ರಮಾಣ ಪತ್ರ, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿ ಆಗಿದ್ದು ಕಾರ್ಯಕರ್ತೆ/ ಸಹಾಯಕಿ ಹುದ್ದೆಗೆ ಆಯ್ಕೆಯಾದಲ್ಲಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕಾಗಿರುತ್ತದೆ. ಈ ಬಗ್ಗೆ ಮುಚ್ಚಳಿಕೆ ಸಲ್ಲಿಸುವುದು, ಆನ್‍ಲೈನ್ ಅರ್ಜಿಯೊಂದಿಗೆ ಯಾವುದೇ ಅಗತ್ಯ ದಾಖಲೆ ಸಲ್ಲಿಸದೇ ಇದ್ದಲ್ಲಿ ಅಂತಹ ಅರ್ಜಿಯನ್ನು ತಿರಸ್ಕರಿಸಲಾಗುವುದು, ಅಂಗನಾವಾಡಿ ಕಾರ್ಯಕರ್ತೆ ಅಥವಾ ಸಹಾಯಕಿಯರ ಹುದ್ದೆಯು ಸಂಪೂರ್ಣವಾಗಿ ಗೌರವ ಸೇವೆಯಾಗಿದ್ದು, ಖಾಯಂ ಹುದ್ದೆಯಾಗಿರುವುದಿಲ್ಲ, ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ಸಮಸ್ಯೆ ಉದ್ಭವಿಸಿದಲ್ಲಿ ಆಯ್ಕೆ ಸಮಿತಿಯ ನಿರ್ಧಾರವೇ ಅಂತಿಮವಾಗಿರುತ್ತದೆ.
 ಹೆಚ್ಚಿನ ಮಾಹಿತಿಗಾಗಿ ಭರಮಸಾಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ 08194-231626, ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ-08194-235958, ಚಳ್ಳಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ-08195-250291, ಹಿರಿಯೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ-08193-263512, ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ-08191-275250, ಹೊಸದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ-08199-230212, ಮೊಳಕಾಲ್ಮೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ದೂರವಾಣಿ ಸಂಖ್ಯೆ 08198-229535ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours