ಚಿತ್ರದುರ್ಗ:ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟ ಮಹಿಳೆ ಸಾವು,ಇಬ್ಬರಿಗೆ ಗಾಯ

 

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹೊಸಹಳ್ಳಿಯಲ್ಲಿ ಎಲ್​​ಪಿಜಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ದಾರುಣ ಘಟನೆ ಭಾನುವಾರ ನಡೆದಿದೆ.

ಮೃತ ಮಹಿಳೆಯನ್ನು ಲಕ್ಷ್ಮಮ್ಮ(38) ಎಂದು ಗುರುತಿಸಲಾಗಿದ್ದು, ರೇಣುಕಮ್ಮ ಮತ್ತು ರಚನಾ ಎಂಬುವರಿಗೆ ಗಾಯಗಳಾಗಿವೆ. ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪರಮೇಶ್ ಎಂಬುವವರ ಬೀದಿ ಬದಿ ಹೋಟೆಲ್​​ಗೆ ಬೆಂಕಿ ಬಿದ್ದಿದ್ದು, ವಿಚಾರ ತಿಳಿಯುತ್ತಿದ್ದಂತೆ, ಸುತ್ತಮುತ್ತಲಿದ್ದ ಮಹಿಳಾ ಕಾರ್ಮಿಕರು ಬೀದಿ ಬದಿ ಹೋಟೆಲ್​​ನತ್ತ ಧಾವಿಸಿದ್ದಾರೆ. ಈ ವೇಳೆ ಹೋಟೆಲ್​​ನಲ್ಲಿದ್ದ ಸಿಲಿಂಡರ್​ ಸ್ಪೋಟಗೊಂಡಿದೆ.

ಸಿಲಿಂಡರ್​ ಸ್ಪೋಟದಿಂದ ಸ್ಥಳದಲ್ಲಿದ್ದ ಮಹಿಳಾ ಕಾರ್ಮಿಕ ಲಕ್ಷ್ಮಮ್ಮ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಇದನ್ನೂ ಓದಿ: ಜನವರಿ 23ರಂದು ವಿದ್ಯುತ್ ವ್ಯತ್ಯಯ

ಈ ಸಂಬಂಧ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

[t4b-ticker]

You May Also Like

More From Author

+ There are no comments

Add yours