ಸೆ.15 ರಿಂದ 24 ರವರೆಗೆ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮ

 

ಚಿತ್ರದುರ್ಗ ಕರ್ನಾಟಕ ವಾರ್ತೆ ಆಗಸ್ಟ್ 26 :
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಧಾರವಾಡದ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಸಂಸ್ಥೆಯಿಂದ 10 ದಿನಗಳ ಸ್ವಯಂ ಉದ್ಯೋಗ ತರಬೇತಿ ಕಾರ್ಯಕ್ರಮವನ್ನು ಸೆಪ್ಟಂಬರ್ 15 ರಿಂದ 24ರ ವರೆಗೆ ನಗರದ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಸಂಘಟಿಸಲು ಯೋಜಿಸಲಾಗಿದೆ.
ಸಾಮಾನ್ಯ ವ್ಯಕ್ತಿಯಿಂದ ಉದ್ಯಮಶೀಲ ವ್ಯಕ್ತಿಯಾಗಿ ಪರಿವರ್ತನೆಯಾಗಲು ಸಾಧನಾ ಪ್ರೇರಣ ತರಬೇತಿ, ಉದ್ಯಮ ಸ್ಥಾಪಿಸಲು ಅನುಸರಿಸಬೇಕಾದ ಮಜಲುಗಳು, ಉದ್ಯಮಾವಕಾಶಗಳ ಮಾಹಿತಿ, ಉದ್ಯಮ ಆಯ್ಕೆಯ ವಿಧಾನ, ಹಣಕಾಸು ನಿರ್ವಹಣೆ, ಮಾರುಕಟ್ಟೆ ನಿರ್ವಹಣೆ, ಲೆಕ್ಕಪತ್ರ ನಿರ್ವಹಣೆ, ಸಣ್ಣ ಉದ್ಯಮ ನಿರ್ವಹಣೆ ಇತ್ಯಾದಿ ವಿಷಯಗಳನ್ನು ಪರಿಣಿತ ಅತಿಥಿ ಬೋಧಕರಿಂದ ಉಪನ್ಯಾಸಗಳನ್ನು ಏರ್ಪಡಿಸಲಾಗುವುದು. ಶಿಬಿರಾರ್ಥಿಗಳು ಉದ್ಯಮ ಪ್ರಾರಂಭಿಸಲು ಬೆಂಬಲ ಸೇವೆ ಒದಗಿಸಲಾಗುವದು.
ತರಬೇತಿ ವೇಳೆಯಲ್ಲಿ ಊಟೋಪಚಾರ ಒದಗಿಸಲಾಗುವುದು. ಆಯ್ಕೆಯಾದ ಶಿಬಿರಾರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಪ್ರಯಾಣ ಮಾಡಿ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗುತ್ತದೆ.
ಆಸಕ್ತ 18 ರಿಂದ 55 ವರ್ಷ ವಯೋಮಿತಿಯ, 10ನೇ ತರಗತಿ ಪಾಸಾದ ಮಹಿಳಾ ಉದ್ಯಮಾಕಾಂಕ್ಷಿಗಳು 2 ಪಾಸ್‍ಪೋರ್ಟ್ ಅಳತೆಯ ಫೋಟೋ ಹಾಗೂ ಆಧಾರ್ ಕಾರ್ಡ್‍ನ ಪ್ರತಿಯೊಂದಿಗೆ ಚಿತ್ರದುರ್ಗದ ಜೋಗಿಮಟ್ಟಿ ರಸ್ತೆಯಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಸಿಡಾಕ್ ಜಂಟಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ತರಬೇತುದಾರ ಪಿ.ವಿಜಯ ಕುಮಾರ, ದೂರವಾಣಿ ಸಂಖ್ಯೆ: 7760270058, ಹಾಗೂ ಜಿ. ಬಿ.ಬಸವರಾಜ 9164742033 ಸಂಪರ್ಕಿಸಬಹುದು ಎಂದು ದಾವಣಗೆರೆ ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours