ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ: ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ ಕೊನೆಯ ದಿನಾಂಕ ಘೋಷಣೆ

 

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ: ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ
ಚಿತ್ರದುರ್ಗ(ಕರ್ನಾಟಕ ವಾರ್ತೆ) ಸೆಪ್ಟಂಬರ್ 12:
ಪಿ.ಎಂ.ಕಿಸಾನ್ ಯೋಜನೆಯಡಿ ಇನ್ನೂ ಮುಂದೆ ಕೇಂದ್ರ ಸರ್ಕಾರದ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡುವುದು ಅತ್ಯಂತ ಅವಶ್ಯಕವಾಗಿರುತ್ತದೆ. ಇ-ಕೆವೈಸಿ ಮಾಡಿಸಲು ಸೆಪ್ಟೆಂಬರ್ 14 ಕೊನೆ ದಿನವಾಗಿದೆ.
ಪ್ರತಿ ಫಲಾನುಭವಿ ರೈತರು ಇ-ಕೆವೈಸಿಯನ್ನು ತಪ್ಪದೇ ಕೊನೆಯ ದಿನಾಂಕದೊಳಗಾಗಿ ಮಾಡಿಸುವುದು ಅವಶ್ಯವಾಗಿರುತ್ತದೆ.
ಪಿ.ಎಂ. ಕಿಸಾನ್ ಫಲಾನುಭವಿಗಳು pmkisan.gov.in  ವೆಬ್‍ಸೈಟ್‍ಗೆ ಭೇಟಿ ನೀಡಿ, ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆ ನಮೂದಿಸಬೇಕು. ಮೊಬೈಲ್ ಸಂಖ್ಯೆಗೆ ಬರುವ ಒಟಿಪಿಯನ್ನು  ನಮೂದಿಸಿ ಉಚಿತವಾಗಿ ಇ-ಕೆವೈಸಿ ಮಾಡಬಹುದು. ಆಧಾರ್ ಸಂಖ್ಯೆಗೆ ಮೊಬೈಲ್ ನಂಬರ್ ಜೋಡಣೆಯಾಗದ ರೈತರು ಅಥವಾ ಒಟಿಪಿ ಸೃಜನೆಯಾಗದ ರೈತರು ಹತ್ತಿರದ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರ ಅಥವಾ ಕಾಮನ್ ಸರ್ವಿಸ್ ಸೆಂಟರ್‍ಗಳಲ್ಲಿ ಇ-ಕೆವೈಸಿ ಮಾಡಲು ಅವಕಾಶವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours