ಸಿಹಿ ಸುದ್ದಿ: ಪೌರ ಕಾರ್ಮಿಕರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಸಚಿವ ಸಂಪುಟ ಒಪ್ಪಿಗೆ.

 

 

 

 

ಬೆಂಗಳೂರು: ಪೌರ ಕಾರ್ಮಿಕರನ್ನು ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳಲು ಸಂಪುಟ ಸಭೆ ಒಪ್ಪಿಗೆ ನೀಡಿದೆ.

 

 

ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

 ರಾಜ್ಯದ ನಗರಸಭೆ, ಪುರಸಭೆ ಮತ್ತು ಇತರೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 11,133 ಪೌರಕಾರ್ಮಿಕರನ್ನು ವಿಶೇಷ ನೇಮಕಾತಿಯಲ್ಲಿ ಸಕ್ರಮ ಮಾಡಲು ಕೂಡ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಬಿಬಿಎಂಪಿಯ 3673, ನಗರಸಭೆ ಮತ್ತು ಪುರಸಭೆಯ 5533 ಹಾಗೂ ಮಹಾನಗರ ಪಾಲಿಕೆಗಳಲ್ಲಿನ 1,927 ಗುತ್ತಿಗೆ ನೌಕರರನ್ನು ಖಾಯಂ ಮಾಡಿಕೊಳ್ಳುವುದಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿರುವುದು ಪೌರಕಾರ್ಮಿಕರನ್ನು ಖಾಯಂ ಮಾಡಿಕೊಳ್ಳುವುದಕ್ಕೆ ಮುಂದಾಗಿರುವುದು ಕಾರ್ಮಿಕರ ಮೊಗದಲ್ಲಿ  ಸಂತಸ ಮನೆ  ಮಾಡಿದೆ.

[t4b-ticker]

You May Also Like

More From Author

+ There are no comments

Add yours