ನಾಳೆ ಪವರ್ ಕಟ್ ಎಲ್ಲಿ ಇಂದೇ ನೋಡಿ.

 

 

 

 

ಸೆ.24 ರಂದು ವಿದ್ಯುತ್ ವ್ಯತ್ಯಯ
************
ಚಿತ್ರದುರ್ಗ(ಕರ್ನಾಟಕ ವಾರ್ತೆ) ಸೆಪ್ಟಂಬರ್ 23:
ರಸ್ತೆ ಅಗಲಿಕರಣ ಕಾಮಗಾರಿಗೆ ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 66/11 ಕೆ.ವಿ, ಚಿತ್ರದುರ್ಗ ವಿದ್ಯುತ್ ವಿತರಣಾ ಕೇಂದ್ರದಲ್ಲಿ 03, ಸಂಖ್ಯೆಯ 11 ಕೆವಿ ಮಾರ್ಗಗಳ ಮಾರ್ಗ ಮುಕ್ತತೆಯನ್ನು ನೀಡಬೇಕಾಗಿರುವುದರಿಂದ ಸೆಪ್ಟಂಬರ್ 24 ರಂದು ಚಿತ್ರದುರ್ಗ ನಗರ, ಕೆಳಕೋಟೆ, ಜೆಸಿಆರ್ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಾಯವಾಗಲಿದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು : 66/11 ಕೆವಿ ಚಿತ್ರದುರ್ಗ ವಿವಿ ಕೇಂದ್ರದಿಂದ ಸರಬರಾಜಾಗುವ 03 ಸಂಖ್ಯೆಯ 11 ಕೆವಿ ಮಾರ್ಗಗಳಲ್ಲಿ ವಿದ್ಯುತ್ ಅಡಚಣೆಯಾಗುತ್ತದೆ.
ಚಿತ್ರದುರ್ಗ ನಗರ, ಕೆಳಕೋಟೆ, ಜೆಸಿಆರ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours