ವ್ಯಕ್ತಿತ್ವ ರೂಪಿಸಲು ಪುಸ್ತಕಗಳ ಪಾತ್ರ ಅಮೂಲ್ಯ: ಡಾ.ಆರ್.ರಂಗಪ್ಪ

 

ಅಮೃತ ಪುಸ್ತಕ ಮಾರಾಟ ಅಭಿಯಾನ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಚಾಲನೆ
*******
ಚಿತ್ರದುರ್ಗ(ಕರ್ನಾಟಕ ವಾರ್ತೆ)ಆಗಸ್ಟ್ 24:
ಉತ್ತಮ ವ್ಯಕ್ತಿತ್ವ ರೂಪಿಸಲು ಪುಸ್ತಕಗಳ ಪಾತ್ರ ಅಮೂಲ್ಯವಾದುದು ಎಂದು ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲ ಡಾ.ಆರ್.ರಂಗಪ್ಪ ಹೇಳಿದರು.
ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ಬುಧವಾರ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕರ್ನಾಟಕ ಸಾಹಿತ್ಯ ಅಕಾಡೆಮಿ, ಚಿತ್ರದುರ್ಗ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಇವರ ಸಹಯೋಗದಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಅಂಗವಾಗಿ ಅಮೃತ ಪುಸ್ತಕ ಮಾರಾಟ ಅಭಿಯಾನ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪುಸ್ತಕ ಓದಿನ ಹವ್ಯಾಸ ರೂಢಿಸಿಕೊಂಡ ವ್ಯಕ್ತಿಗೆ ಪುಸ್ತಕ ಆತನ ಬದುಕಿನ ಅವಿಭಾಜ್ಯ ಅಂಗವಾಗುತ್ತದೆ. ಪುಸ್ತಕಗಳ ಅಧ್ಯಯನದಿಂದ ಜೀವನದಲ್ಲಿ ಲವಲವಿಕೆ ಮೂಡುವುದರ ಜೊತೆಗೆ ಜ್ಞಾನಾರ್ಜನೆಯನ್ನು ಹೆಚ್ಚಿಸುತ್ತದೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸಮಗ್ರ ಪುಸ್ತಕಗಳು ಶೇ.50 ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯವಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಗುಡ್ಡದೇಶ್ವರಪ್ಪ ಸಾಕ್ಷ್ಯಚಿತ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪುಸ್ತಕ ಪ್ರೇಮಿಗಳಾಗಬೇಕು. ಓದಿನಲ್ಲಿ ಸದಾ ಅಧ್ಯಯನಶೀಲರಾಗಬೇಕು. ಇದರಿಂದ ವ್ಯವಸ್ಥೆಯನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿದೆ. ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಜ್ಞಾನಿಗಳಾಗಬೇಕು. ಓದಿನಿಂದ ಮದ, ಮತ್ಸರ, ಕೌರ್ಯ ಸರ್ವನಾಶವಾಗಲಿದ್ದು, ಓದಿನ ಹವ್ಯಾಸದಿಂದ ಪ್ರಬುದ್ಧತೆ ಬೆಳೆಯಲಿದೆ. ಹಾಗಾಗಿ ಪ್ರತಿಯೊಬ್ಬರು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸರ್ಕಾರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಗೋಪಾಲಪ್ಪ ಮಾತನಾಡಿ, ಪುಸ್ತಕಗಳನ್ನು ಕೊಂಡು ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ರೀಡರ್ ಇಸ್ ಲೀಡರ್ ಹಾಗಾಗಿ ಓದುವವರು ಸದಾ ಮುಂದೆ ಬರಲು ಸಾಧ್ಯ ಎಂದು ಹೇಳಿದರು.
ಸರ್ಕಾರಿ ಕಲಾ ಕಾಲೇಜು ಸ್ನಾತಕೋತ್ತರ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಮಾತನಾಡಿ, ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಸ್ವಾತಂತ್ರ್ಯ ಹೋರಾಟಕ್ಕೆ ಶ್ರಮಿಸಿದ ರಾಜ್ಯದ 75 ಜನ ಸ್ವಾತಂತ್ರ್ಯ ಹೋರಾಟಗಾರರ ಕುರಿತು 75 ಪುಸ್ತಕಗಳನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರಕಟಿಸಿದ್ದು, “ಸ್ವಾತಂತ್ರ್ಯ ಚಳುವಳಿಗೆ ಕರ್ನಾಟಕದ ಕೊಡುಗೆ” ಎಂಬ ಪುಸ್ತಕಗಳು ಮಾರಾಟಕ್ಕೆ ಲಭ್ಯವಿದೆ. ಜೊತೆಗೆ ಸಾಹಿತ್ಯ ಅಕಾಡೆಮಿ ಈವರೆಗೆ ಪ್ರಕಟ ಮಾಡಿದ ಎಲ್ಲಾ ಪುಸ್ತಕಗಳನ್ನು ಶೇ.50ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕು ಎಂದರು.
ಪುಸ್ತಕದ ಒಡನಾಟ ವ್ಯಕ್ತಿಯ ವ್ಯಕ್ತಿತ್ವವನ್ನು ಬದಲಾವಣೆ ಮಾಡುವ ಅಸ್ತ್ರ. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ಪುಸ್ತಕಗಳು ಸಂಶೋಧನೆ, ವಿಮರ್ಶೆ, ವೈಚಾರಿಕತೆಗೆ ಸಾಕ್ಷಿಯಾದ ಪುಸ್ತಕಗಳಾಗಿವೆ. ಶೈಕ್ಷಣಿಕ ಗುಣಮಟ್ಟ ಪಾಠಕ್ಕಿಂತ ಪುಸ್ತಕಗಳಲ್ಲಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕರ್ನಾಟಕ (ತ್ಯಾಗ ಬಲಿದಾನಗಳ ಕಥಾನಕ) ಎಂಬ 28 ನಿಮಿಷಗಳ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸರ್ಕಾರಿ ಕಲಾ ಕಾಲೇಜಿನ ನಾಗರಾಜ್, ದಾವಣಗೆರೆ ವಿಶ್ವವಿದ್ಯಾನಿಲಯದ ಡಾ.ವಿಜಯಕುಮಾರ್ ಸೇರಿದಂತೆ ಸರ್ಕಾರಿ ಕಲಾ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.
ಫೋಟೋ ವಿವರ: ಚಿತ್ರದುರ್ಗ ಸರ್ಕಾರಿ ಕಲಾ ಕಾಲೇಜಿನಲ್ಲಿ ಬುಧವಾರ ಅಮೃತ ಪುಸ್ತಕ ಮಾರಾಟ ಅಭಿಯಾನಕ್ಕೆ ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲ ಡಾ.ಆರ್.ರಂಗಪ್ಪ ಚಾಲನೆ ನೀಡಿದರು. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಗುಡ್ಡದೇಶ್ವರಪ್ಪ, ಸರ್ಕಾರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಎಚ್. ಗೋಪಾಲಪ್ಪ, ಸಹಾಯಕ ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಇದ್ದರು.

[t4b-ticker]

You May Also Like

More From Author

+ There are no comments

Add yours