ಅಂಧರ ಬಾಳಿಗೆ ನೇತ್ರದಾನದಿಂದ ಬೆಳಕು: ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಆಗಸ್ಟ್ 25:
ಪ್ರತಿಯೊಬ್ಬರು ನೇತ್ರದಾನ ಮಾಡುವುದರಿಂದ ಅಂಧರ ಬಾಳಿಗೆ ಬೆಳಕು ನೀಡಿದಂತಾಗುತ್ತದೆ.ಈ ನಿಟ್ಟಿನಲ್ಲಿ ನಾನು ಕೂಡ ನೇತ್ರದಾನಕ್ಕೆ ಮುಂದಾಗಿದ್ದೇನೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ರಾಷ್ಟ್ರೀಯ ಕಾರ್ಯಕ್ರಮಗಳ ಅನುಷ್ಠಾನ ಕುರಿತಂತೆ ಜಿಲ್ಲಾ ಆಸ್ಪತ್ರೆ ಸಹಕಾರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೇತ್ರದಾನ ಪಾಕ್ಷಿಕದ ಬಗ್ಗೆ ಕಾರ್ಯಕ್ರಮ ಅನುμÁ್ಠನಾಧಿಕಾರಿ ಡಾ.ರೂಪ ಸಭೆಗೆ ವರದಿ ಸಲ್ಲಿಸುತ್ತಿರುವಾಗ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನೀಕೆರಿ ಮಾತನಾಡಿ, ನಾನು ನನ್ನ ನೇತ್ರ ದಾನ ಮಾಡುತ್ತಿದ್ದೇನೆ. ತಾವುಗಳು ನೇತ್ರ ದಾನಮಾಡಿ ಮನವೀಯತೆ ಮರೆಯಿರಿ ಎಂದು ಹೇಳಿದರು.
ಜಿಲ್ಲಾ ಆಸ್ಪತ್ರೆಯಲ್ಲಿ ದಾಸ್ತಾನು ಇಲ್ಲ ಎಂಬ ಕಾರಣ ಹೇಳದೆ ಆಸ್ಪತ್ರೆಗೆ ಬರುವ ರೋಗಿಗಳ ತಪಾಸಣೆ ಚಿಕಿತ್ಸೆ ಉಚಿತವಾಗಿ ನೀಡುವುದು. ರೋಗಿಗಳನ್ನು ನಿಮ್ಮ ನಸಿರ್ಂಗ್ ಹೋಂಗಳಿಗೆ ಬರುವಂತೆ ತಿಳಿಸದೆ, ಜಿಲ್ಲಾ ಆಸ್ಪತ್ರೆಯಲ್ಲಿಯೇ ಸೇವೆ ನೀಡಬೇಕು. ತಾಯಿ ಮಕ್ಕಳ ವಾರ್ಡಗಳಲ್ಲಿ ಬೆಡ್ ಕೊರತೆಯ ಬಗ್ಗೆ ಬಹಳಷ್ಟು ದೂರುಗಳು ಬರುತ್ತಿವೆ. ಲೋಕೋಪಯೋಗಿ ಇಲಾಖೆ ಅಭಿಯಂತರರನ್ನು ಕರೆಸಿ ಅಗತ್ಯವಿರುವ ವ್ಯವಸ್ಥೆ ಮಾಡಿಕೊಂಡು ವರದಿಸಲ್ಲಿಸಿ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕರಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಕಾರ್ಯಕ್ರಮ ಅನಷ್ಟಾನ  ತಮ್ಮ ತಮ್ಮ ಕಾರ್ಯಕ್ರಮಗಳ ಬಗ್ಗೆ ವರದಿ ಸಲ್ಲಿಸಿದರು. ಪೌಷ್ಟಿಕ ಪುನಃಶ್ಚೇತನ ಕೇಂದ್ರಗಳಲ್ಲಿ ಸೇವೆಗಳನ್ನು ಬಲಪಡಿಸಿ ಎಂದು ಸೂಚನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಂಗನಾಥ್ ಮಾತನಾಡಿ,  ಎಲ್ಲಾ ಕಾರ್ಯಕ್ರಮ ಅನಷ್ಟಾನ  ಎಲ್ಲಾ ರಾಷ್ಟ್ರೀಯ ಕಾರ್ಯಕ್ರಮಗಳ ಯಶಸ್ವಿ ಅನಷ್ಟಾನ  ವಿಶೇಷವಾಗಿ ಹಿರಿಯ ನಾಗರಿಕರ ಆರೋಗ್ಯ ಕಾಪಾಡುವಲ್ಲಿ ಪ್ರತ್ಯೇಕ ವಾರ್ಡ್, ದಾಖಲಾತಿ ನಿರ್ವಾಹಣೆ, ಸಾಂಕ್ರಾಮಿಕವಲ್ಲದ ರೋಗಗಳಾದ ಡಯಾಬಿಟಿಸ್ ರಕ್ತದೊತ್ತಡ ಇತರೆ ರೋಗಗಳ ನಿಯಂತ್ರಣಕ್ಕೆ ಪ್ರತ್ಯೇಕ ವಾರ್ಡ್ ಸೌಲಭ್ಯ ಕಲ್ಪಿಸಿ. ಈ ನಿಟ್ಟಿನಲ್ಲಿ ಎಲ್ಲಾ ತಾಲ್ಲೂಕು ಆರೋಗ್ಯಾಧಿಕಾರಿಗಳು ನಿಮ್ಮ ಹಂತಗಳಲ್ಲಿ ಕಾರ್ಯಪ್ರವೃತ್ತರಾಗಿ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸವರಾಜ್,  ಜಿಲ್ಲಾ ಕಾರ್ಯಕ್ರಮ ಅನುμÁ್ಠನಾಧಿಕಾರಿಗಳಾದ ಡಾ.ಕುಮಾರಸ್ವಾಮಿ, ಡಾ.ರೇಣುಪ್ರಸಾದ್, ಡಾ.ಸುಧಾ, ಡಾ.ರೂಪ ತಾಲ್ಲೂಕು ಆರೋಗ್ಯಾಧಿಕಾರಿಳಾದ ಡಾ.ಕೃಷ್ಣಮೂರ್ತಿ, ಡಾ.ಪ್ರಜ್ವಲ್, ಡಾ.ಸತೀಶ್, ಡಾ.ಚಂದ್ರಶೇಖರ್, ಡಾ.ದೇವರಾಜ್ ಹಾಗೂ ಜಿಲ್ಲಾ ಆಸ್ಪತ್ರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours