ಸೋತವರಿಗೆ ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರ:ಎಂ.ಸಿ.ರಘುಚಂದನ್ ಕಿಡಿ

 

ಚಿತ್ರದುರ್ಗ🙁chitradurga) ಚಿತ್ರದುರ್ಗ ಲೋಕಸಭಾ ಕ್ಷೇತ್ರ ಆಶ್ರಯ ಇಲ್ಲದವರಿಗೆ ನಿರಾಶ್ರಿತರ ಕೇಂದ್ರ ಆಗಿದೆ. ಮೂಡಿಗೆರೆ, ಆನೇಕಲ್‌ ಸೋತವರನ್ನು ಕರೆ ತಂದು ಸಂಸದರನ್ನಾಗಿ ಮಾಡಲಾಗಿತ್ತು.ಆದರೆ ಈ ಬಾರಿ ಸಹ ಮುಧೋಳನಲ್ಲಿ 40 ಸಾವಿರಕ್ಕಿನ ಹೆಚ್ಚ ಮತಗಳಿಂದ ಸೋತ ವ್ಯಕ್ತಿಯನ್ನು ಕರೆತಂದು ಅಭ್ಯರ್ಥಿ ಮಾಡಿದ್ದಾರೆ. ಗಂಡು ಮೆಟ್ಟಿದ ನಾಡಲ್ಲಿ ಗಂಡಸರೇ ಇಲ್ಲವಾ?’ ಎಂದು ಅವರು ಪ್ರಶ್ನಿಸುವ ಮೂಲಕ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಪುತ್ರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಎಂ.ಸಿ.ರಘುಚಂದನ್ ಅಸಮಾಧಾನ ಹೊರ ಹಾಕಿದ್ದಾರೆ.

 

ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ ನಮ್ಮ ಪಕ್ಷದ ತೀರ್ಮಾನ ನಿಜಕ್ಕೂ ಮನಸ್ಸಿಗೆ ತುಂಬಾ ನೋವು ತಂದಿದೆ. ಪಕ್ಷ ಯಾರಿಗೆ ಟಿಕೆಟ್ ಕೊಟ್ಟರು ಸ್ಥಳೀಯ ಅಭ್ಯರ್ಥಿಗೆ ಮನ್ನಣೆ ನೀಡಬೇಕಿತ್ತು. ಮತ ಹಾಕಲು ಮಾತ್ರ ಕಾರ್ಯಕರ್ತರು ಬೇಕು ಆದರೆ ಅಧಿಕಾರಕ್ಕೆ ಮಾತ್ರ ಬೇಡ್ವಾ?. ಇದು ಚಿತ್ರದುರ್ಗ ಸ್ವಾಭಿಮಾನದ ಪ್ರಶ್ನೆ, ಸಭೆ ಬಳಿಕ ಮುಂದಿನ ಹೆಜ್ಜೆ ಇಡುತ್ತೇವೆ’ ಎಂದರು.

ರಾಜ್ಯದಲ್ಲಿ ಕೊನೆಯಾವರೆಗೂ ಭಾರೀ ಕುತೂಹಲ ಕೆರಳಿಸಿದ್ದ ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಘೋಷಣೆಯಾದ ಬೆನ್ನಲ್ಲೇ ಕ್ಷೇತ್ರದಲ್ಲಿ ಅಸಮಾಧಾನ ಭುಗಿಲೆದ್ದಿದೆ.

ಟಿಕೆಟ್‌ ಸಿಗುವ ಹುಮ್ಮಸ್ಸಿನಲ್ಲಿದ್ದ ಶಾಸಕ ಎಂ.ಚಂದ್ರಪ್ಪ ಅವರ ಪುತ್ರ ಎಂ.ಸಿ.ರಘುಚಂದನ್‌ ಗುರುವಾರ ಬಹಿರಂಗವಾಗಿ ಪಕ್ಷದ ನಡೆ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:ಸಚಿವ ಶಿವರಾಜ್ ತಂಗಡಗಿ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ಯುವ ಮೋರ್ಚಾ ಆಗ್ರಹ

‘ಪಕ್ಷದ ಹೈಕಮಾಂಡ್ ಗೋವಿಂದ ಕಾರಜೋಳ ಅವರನ್ನು ಕಣಕ್ಕಿಳಿಸಿರುವುದು ಖಂಡನೀಯ. ಶುಕ್ರವಾರ ಬೆಂಬಲಿಗರ ಸಭೆ ಕರೆದು ಮುಂದಿನ ತೀರ್ಮಾನ ಪ್ರಕಟಿಸಲಾಗುತ್ತದೆ’ ಎಂದು ತಿಳಿಸಿದರು.

[t4b-ticker]

You May Also Like

More From Author

+ There are no comments

Add yours