ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ವಿವಿಧ ಸೌಲಭ್ಯಗಳ ಅರ್ಜಿಗೆ ಅವಧಿ ವಿಸ್ತರಣೆ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಸೆಪ್ಟಂಬರ್ 19:
ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಜನರ ಆರ್ಥಿಕ ಅಭಿವೃದ್ಧಿಗಾಗಿ ನಿಗಮದ ವಿವಿಧ ಯೋಜನೆಗಳನ್ನು ಅನುμÁ್ಟನಗೊಳಿಸುವ ಸಂಬಂಧ ಪರಿಶಿಷ್ಟ ಪಂಗಡದ ಫಲಾಪೇಕ್ಷಿಗಳಿಂದ ಈ ಮೊದಲು ಸುವಿಧಾ ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು, ಆದರೆ ಪ್ರಸ್ತುತ ಸೇವಾ ಸಿಂಧೂ ಪೋರ್ಟಲ್ ಮೂಲಕ https://sevasindu.karnataka.gov.inಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಸೆಪ್ಟಂಬರ್ 30ರವರೆಗೆ ವಿಸ್ತರಿಸಲಾಗಿದೆ.
ಸ್ವಯಂ ಉದ್ಯೋಗ ಯೋಜನೆ, ಭೂ ಒಡೆತನ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಕೌಶಲ್ಯಾಭಿವೃದ್ಧಿ ತರಬೇತಿ, ವಸತಿ ಕಾರ್ಯಾಗಾರ ನಿರ್ಮಾಣ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ವಿಶೇಷ ಸೂಚನೆ: ಈ ಎಲ್ಲಾ ಯೋಜನೆಗಳಿಗೆ ಅರ್ಜಿಗಳು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in/ ನಲ್ಲಿ ಲಭ್ಯವಿರುತ್ತವೆ. ಫಲಾಪೇಕ್ಷಿಗಳು ಗ್ರಾಮಒನ್’, ‘ಬೆಂಗಳೂರುಒನ್”, ‘ಕರ್ನಾಟಕಒನ್’ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಈಗಾಗಲೇ ಸುವಿಧಾ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಿರುವವರು ಮತ್ತೆ ಅರ್ಜಿ ಸಲ್ಲಿಸಬೇಕಾಗಿಲ್ಲ. ಸರ್ಕಾರದ ಸಾಂಸ್ಥಿಕ ಕೋಟ ಮತ್ತು ಮಂಡಳಿ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾಪೇಕ್ಷಿಗಳು ಸಹ ಸೇವಾ ಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗದದ ಜಿಲ್ಲಾ ವ್ಯವಸ್ಥಾಪಕರನ್ನು ಸಂಪರ್ಕಿಸಬಹುದು ಜಿಲ್ಲಾ ವ್ಯವಸ್ಥಾಪಕರು ಎಂದು ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours