ನಾಳೆ ಹಿರಿಯ ನಾಗರಿಕರಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಸೆಪ್ಟಂಬರ್ 26:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘ, ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಹಿರಿಯ ನಾಗರಿಕರ ಸಪ್ತಾಹ ಕಾರ್ಯಕ್ರಮದಲ್ಲಿ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳನ್ನು ಇದೇ ಸೆಪ್ಟಂಬರ್ 27 ರಂದು ಬೆಳಗ್ಗೆ 10 ಗಂಟೆಗೆ ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘದ ಅಧ್ಯಕ್ಷ ವೈ.ಚಂದ್ರಶೇಖರಯ್ಯ ಅಧ್ಯಕ್ಷತೆ ವಹಿಸುವರು.  ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಡಾ.ಕೆ.ನಂದಿನಿ ದೇವಿ, ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ,  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಕೆ.ಮಂಜುನಾಥ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಭಾರತಿ ಆರ್.ಬಣಕಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮೀ, ಹಿರಿಯ ನಾಗರಿಕರ ಜಿಲ್ಲಾ ಸಂಘದ ಅಧ್ಯಕ್ಷ ರಂಗಪ್ಪ ರೆಡ್ಡಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours