ಅ.9 ರಂದು ನಮ್ಮ ನಡಿಗೆ ಸ್ವಾಮೀಜಿಗಳ ಕಡೆಗೆ: ಮಾರಸಂದ್ರ ಮುನಿಯಪ್ಪ

 

ಚಿತ್ರದುರ್ಗ, ಸೆ.27: ಎಸ್ಸಿ ಎಸ್ಟಿ ಸಮುದಾಯದವರಿಗೆ ಮೀಸಲಾತಿ ಹೆಚ್ಚಾಳ ಮಾಡುವಂತೆ ಶ್ರೀ ವಾಲ್ಮಿಕಿ ಪ್ರಸನ್ನಾನಂದ ಸ್ವಾಮೀಜಿಗಳು ನಡೆಸುತ್ತಿರುವ ಧರಣಿ ಸತ್ಯಗ್ರಹಕ್ಕೆ 230 ದಿನ ಕಳೆದರು ಕೂಡ ಸ್ಪಂದಿಸದ ಸರ್ಕಾರದ ಕ್ರಮವನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಲು ಅ.9 ರಂದು ನಮ್ಮ ನಡಿಗೆ ಸ್ವಾಮೀಜಿಗಳ ಕಡೆಗೆ ಎಂಬ ಘೋಷ ವಾಕ್ಯದೊಂದಿಗೆ ಜಾಥಾ ನಡೆಸಿ, ಅ.10 ರಂದು ಹಮ್ಮಿಕೊಂಡಿರುವ ವಾಲ್ಮೀಕಿ ಜಯಂತಿಯನ್ನು ಬಹಿಷ್ಕರಿಸುವುದಾಗಿ ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಸಿ ಎಸ್ಟಿ ಸಮುದಾಯದವರಿಗೆ ಮೀಸಲಾತಿ ಹೆಚ್ಚಾಳ ಮಾಡುವುದಾಗಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ, ಯಡಿಯೂರಪ್ಪ ಹಾಗೂ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರುಗಳು ಕೇವಲ ಆಶ್ವಾಸನೆಯನ್ನು ನೀಡಿದ್ದಾರೆಯೇ ಹೊರತು ಯಾರೋಬ್ಬರು ಕೂಡ ನಮ್ಮ ಬೇಡಿಕೆಯನ್ನು ಈಡೇರಿಸಲು ಮುಂದಾಗಲಿಲ್ಲಾ. ಅಲ್ಲದೆ ಇದಕ್ಕಾ ಕಳೆದ 230 ದಿನಗಳಿಂದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಗಳು ಧರಣಿ ಸತ್ಯಗ್ರಹವನ್ನು ನಡೆಸುತ್ತಿದ್ದರು ಕೂಡ ಸರ್ಕಾರ ಮೌನ ಧೋರಣೆ ವಹಿಸಿರುವುದು ಸರಿಯಾದ ಕ್ರಮವಲ್ಲ. ಆದ್ದರಿಂದ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ ನಡೆಸಲು 9 ರಂದು ಪ್ರತಿ ಜಿಲ್ಲೆಯಿಂದ 1 ಸಾವಿರ ಜನರು ಬಹುಜನ ಸಮಾಜ ಪಕ್ಷದಿಂದ ಭಾಗವಹಿಸಲಿದ್ದು, ಇತರೆ ಜನಾಂಗದಿಂದ ಹಾಗೂ ಸಂಘಸಂಸ್ಥೆಗಳಿಂದ ಸಾವಿರಾರು ಜನರು ಭಾಗವಹಿಸಿ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಮತ್ತು ಅ.10 ರಂದು ನಡೆಯಲಿರುವ ಶ್ರೀ ವಾಲ್ಮೀಕಿ ಜಯಂತಿಯನ್ನು ಬಹಿಷ್ಕರಿಸಲಿದ್ದೆವೆ ಎಂದು ಹೇಳಿದ ಅವರು, ಕೂಡಲೇ ಸರ್ಕಾರ ಮೀಸಲಾತಿ ಹೆಚ್ಚಳ ಮಾಡದಿದ್ದರೆ 2 ನೇ ಹಂತದ ಪ್ರತಿಭಟನೆ ನಡೆಸಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿರುವುದಾಗಿ ತಿಳಿಸಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ಹೆಚ್ಚಿಸುವಂತೆ ನಿವೃತ್ತ ನ್ಯಾಯಮೂರ್ತಿಗಳಾದ ನಾಗಮೋಹನ್ ದಾಸ್‌ರವರ ಸಮಿತಿಯು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿ 2 ವರ್ಷಗಳು ಕಳೆದಿವೆ. ಆದರೆ ಪರಿಶಿಷ್ಟ ಜಾತಿ/ವರ್ಗಗಳ ವಿರೋಧಿ ಸರ್ಕಾರ ಇದೂವರೆಗೂ ಈ ವರದಿಯನ್ನು ಜಾರಿಗೊಳಿಸಿಲ್ಲ. ಆದ್ದರಿಂದ ನಾಗಮೋಹನ್ ದಾಸ್‌ರವರ ವರದಿಯನ್ನು ಯತಾವತ್ತಾಗಿ ಕೂಡಲೇ ಜಾರಿಗೊಳಿಸಬೇಕು ಎಂದು ಆಗ್ರಿಸಿದರು.
ಕಳೆದ ಎರಡು ತಿಂಗಳ ಹಿಂದೆ ಸುಮಾರು 50 ಸಾವಿರಕ್ಕೂ ಹೆಚ್ಚು ಪೌರ ಕಾರ್ಮಿಕರು ಸುಮಾರು 4-5 ದಿನಗಳ ಕಾಲ ಕರ್ನಾಟಕ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಆದರೂ ಸರ್ಕಾರ ಮೌನ ವಹಿಸಿದೆ ಎಲ್ಲರ ಆಕ್ರೋಶಕ್ಕೆ ಕಾರಣವಾಗಿದ್ದು, ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಎಲ್ಲಾ 33 ಸಾವಿರ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು ಎಂದು ಒತ್ತಾಯಿಸಿದರು.

[t4b-ticker]

You May Also Like

More From Author

+ There are no comments

Add yours