ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಸೆಪ್ಟಂಬರ್ 29:
ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಗುಂತಕೋಲಮ್ಮನಹಳ್ಳಿ ಎಸ್.ಟಿ ಕಾಲೋನಿ ಹಾಗೂ ಹೊಳಲ್ಕೆರೆ ತಾಲ್ಲೂಕಿನ ಸಿಹಿನೀರಕಟ್ಟೆ ಗ್ರಾಮಗಳಿಗೆ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲಿರುವ ಚಳ್ಳಕೆರೆ ತಾಲ್ಲೂಕಿನ ಗುಂತಕೋಲಮ್ಮನಹಳ್ಳಿ ಎಸ್.ಟಿ ಕಾಲೋನಿ ಕೇಂದ್ರಸ್ಥಾನದಲ್ಲಿ ಒಟ್ಟು 259 ಪಡಿತರ ಚೀಟಿಗಳು, ಹೊಳಲ್ಕೆರೆ ತಾಲ್ಲೂಕಿನ ಸಿಹಿನೀರಕಟ್ಟೆ ಕೇಂದ್ರ ಸ್ಥಾನದಲ್ಲಿ ಒಟ್ಟು 121 ಪಡಿತರ ಚೀಟಿಗಳಿವೆ.
ಅರ್ಜಿಗಳನ್ನು ಅಗತ್ಯ ಧೃಡೀಕೃತ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿನದೊಳಗೆ ಜಂಟಿ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಿಲ್ಲಾಧಿಕಾರಿಗಳ ಕಚೇರಿ ಚಿತ್ರದುರ್ಗ ಇವರಿಗೆ ಸಲ್ಲಿಸಲು ತಿಳಿಸಿದೆ. ನಿಗಧಿತ ಅವಧಿಯ ನಂತರ ಸಲ್ಲಿಕೆಯಾಗುವ ಅಥವಾ ಬೇರೆ ಕಚೇರಿಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಚಳ್ಳಕೆರೆ, ಹೊಳಲ್ಕೆರೆ ತಾಲ್ಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ಅರ್ಜಿಗಳನ್ನು ಪಡೆಯಬಹುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours