ಸ್ವಯಂ ಉದ್ಯೋಗದಿಂದ ಸರ್ಕಾರಕ್ಕೆ ಉದ್ಯೋಗ ಸೃಷ್ಠಿಗೆ ಸಹಕಾರಿ: ನಿರ್ದೇಶಕ ಬಸವರಾಜ್ ಎಂ ಗೋಟೂರ್

 

 

 

 

ಉದ್ಯಮಶೀಲತಾ ಅರಿವು ಕಾರ್ಯಕ್ರಮದಲ್ಲಿ ಸಿಡಾಕ್ ನಿರ್ದೇಶಕ ಬಸವರಾಜ್ ಎಂ ಗೋಟೂರ್

 

 

************
ಚಿತ್ರದುರ್ಗ (ಕರ್ನಾಟಕ ವಾರ್ತೆ) ಸೆಪ್ಟೆಂಬರ್ 07:
ಸ್ವಂತ ಉದ್ಯೋಗ ಪ್ರಾರಂಭಿಸುವವರು ಸ್ವಯಂ ಉದ್ಯೋಗಿಗಳಾಗುವುದರ ಜೊತೆಗೆ ನಾಲ್ಕೈದು ಜನರಿಗೆ ಉದ್ಯೋಗ ಕೊಡಬಹುದಾಗಿದ್ದು, ಸರ್ಕಾರಕ್ಕೆ ಉದ್ಯೋಗ ಸೃಷ್ಟಿಸುವಲ್ಲಿ ಸಹಕರಿಸಬಹುದಾಗಿದೆ. ಹಾಗಾಗಿ ಸರ್ಕಾರ ಸ್ವಂತ ಉದ್ಯೋಗಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ ಎಂದು ಧಾರವಾಡದ ಸಿಡಾಕ್ ನಿರ್ದೇಶಕ ಬಸವರಾಜ್ ಎಂ ಗೋಟೂರ್ ಹೇಳಿದರು.
ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬಾಲಭವನದಲ್ಲಿ ಮಂಗಳವಾರ  ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ  ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಜಿಲ್ಲಾ ಕೈಗಾರಿಕಾ ಕೇಂದ್ರ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ “ಒಂದು ದಿನದ ಉದ್ಯಮಶೀಲತಾ ಅರಿವು ಕಾರ್ಯಕ್ರಮ”ದ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕದಲ್ಲಿ ಉದ್ಯಮಶೀಲತೆ ಅಭಿವೃದ್ಧಿ ಪಡಿಸುವುದು ಸಿಡಾಕ್ ಸಂಸ್ಥೆಯ ಮುಖ್ಯ ಉದ್ದೇಶ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲ ಕಡೆಗಳಲ್ಲಿಯೂ ಉದ್ಯಮಶೀಲತಾ ತರಬೇತಿ ಕಾರ್ಯಕ್ರಮಗಳನ್ನು ಸಂಘಟಿಸುತ್ತಿದೆ. ನಮ್ಮ ರಾಷ್ಟ್ರವನ್ನು ಬಹಳ ಕಾಡುತ್ತಿರುವ ನಿರುದ್ಯೋಗ ಸಮಸ್ಯೆ ನಿವಾರಣೆಗಾಗಿ ಸರ್ಕಾರ ಸ್ವಂತ ಉದ್ಯೋಗಕ್ಕೆ ಹೆಚ್ಚು ಪ್ರೋತ್ಸಾಹ ನೀಡುತ್ತಿದೆ ಎಂದು ಹೇಳಿದರು.
ಉದ್ಯಮದಾರರಾಗುವ ಹಂತದಲ್ಲಿ ಎದುರಿಸಬೇಕಾದ ಪ್ರಮುಖ ವಿಚಾರಗಳ ಬಗ್ಗೆ ತಿಳಿಸಿ ಸಲಹೆ ನೀಡಿದರು ಹಾಗೂ ಬ್ಯಾಂಕಿನಿಂದ ಸಾಲ ಸೌಲಭ್ಯ ಪಡೆಯುವಲ್ಲಿ ಎದುರಿಸಬೇಕಾದ ವಿವಿಧ ಹಂತಗಳ ಬಗ್ಗೆ ಮಾಹಿತಿ ಹಾಗೂ ಸಲಹೆ ನೀಡುವ ಮೂಲಕ ಶಿಬಿರಾರ್ಥಿಗಳನ್ನು ಪ್ರೋತ್ಸಾಹಿಸಿದ ಅವರು, ಒಂದು ದಿನದ ಉದ್ಯಮಶೀಲತಾ ಅರಿವು ಕಾರ್ಯಕ್ರಮ ತರಬೇತಿಯಲ್ಲಿ ಉತ್ಸಾಹದಿಂದ ಭಾಗವಹಿಸಿ ತರಬೇತಿಯ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಿಬಿರಾರ್ಥಿಗಳಿಗೆ ಕಿವಿಮಾತು ಹೇಳಿದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ.ಆನಂದ್ ಮಾತನಾಡಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ಮತು ಜೀವನೋಪಾಯದ ಮಹತ್ವ ಮತ್ತು ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಸಿಗುವ ಯೋಜನೆ ಹಾಗೂ ಬ್ಯಾಂಕಿನಿಂದ ಸಾಲ ಸೌಲಭ್ಯ ಪಡೆಯುವಲ್ಲಿ ಎದುರಿಸಬೇಕಾದ ವಿವಿಧ ಹಂತಗಳ ಬಗ್ಗೆ ಶಿಬಿರಾರ್ಥಿಗಳಿಗೆ ಮಾಹಿತಿ ಹಾಗೂ ಸಲಹೆ ನೀಡಿದರು.
ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸಿ.ಬಿ.ಹಿರೇಮಠ್ ಮಾತನಾಡಿ, ಬ್ಯಾಂಕಿನಿಂದ ಸಾಲ ಸೌಲಭ್ಯ ಪಡೆಯುವಲ್ಲಿ ಎದುರಿಸಬೇಕಾದ ವಿವಿಧ ಹಂತಗಳ ಬಗ್ಗೆ ಮಾಹಿತಿ ಹಾಗೂ  ಸಲಹೆಗಳನ್ನು ನೀಡುವ ಮೂಲಕ ಶಿಬಿರಾರ್ಥಿಗಳನ್ನು ಪ್ರೋತ್ಸಾಹಿಸಿದರು.
ಕಾರ್ಯಕ್ರಮದಲ್ಲಿ ದಾವಣಗೆರೆ ಸಿಡಾಕ್ ಜಂಟಿನಿರ್ದೇಶಕ ಆರ್.ಪಿ.ಪಾಟೀಲ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎನ್.ಸುಧಾ, ಜನ ಶಿಕ್ಷಣ ಸಂಸ್ಥಾನ ನಿವೃತ್ತ ನಿರ್ದೇಶಕ ಬಿ.ಮುಕುಂದಪ್ಪ, ಸಿಡಾಕ್ ತರಬೇತುದಾರರಾದ ಜಿ.ಬಿ.ಬಸವರಾಜ, ಪಿ.ವಿಜಯಕುಮಾರ ಇದ್ದರು.

[t4b-ticker]

You May Also Like

More From Author

+ There are no comments

Add yours