ಮಹಾತ್ಮರ ತತ್ವಾದರ್ಶಗಳ ಪಾಲನೆ ಹಾಗೂ ಆಚರಣೆಯಾಗಬೇಕು :ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಅಕ್ಟೋಬರ್.02:
ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ದೇಶಕಂಡ ಅಪ್ರತಿಮ ನೇತಾರರು. ಇವರ ತತ್ವಾದರ್ಶಗಳನ್ನು ಜೀವನದಲ್ಲಿ ರೂಢಿಸಿಕೊಂಡು ಪಾಲನೆ ಹಾಗೂ ಆಚರಣೆ ಮಾಡವುದು ಅವರಿಗೆ ಸಲ್ಲಿಸುವ ನಿಜವಾದ ಗೌರವಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಮಹಾತ್ಮ ಗಾಂಧೀಜಿಯವರ 154ನೇ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ 119ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬ ನಾಗರಿಕರು ಅಹಿಂಸಾ ತತ್ವ ಪಾಲಿಸುವುದರ ಜತೆಗೆ ಸತ್ಯ, ಧರ್ಮದ ಹಾದಿಯಲ್ಲಿ ನಡೆಯಬೇಕು. ಇಂದು ತಂತ್ರಜ್ಞಾನದ ಬಳಕೆ ಹೆಚ್ಚಾಗಿದೆ. ಪ್ರತಿಯೊಬ್ಬರು ಸ್ಮಾರ್ಟ್ ಪೆÇೀನ್ ಬಳಸುತ್ತಾರೆ. ಸುಳ್ಳು ಮಾಹಿತಿ ಹರಡುವ ಸಂದೇಶಗಳು ವಾಟ್ಸಪ್ ಮೂಲಕ ಎಲ್ಲರ ಮೊಬೈಲ್‍ಗಳಲ್ಲಿ ಹರಿದಾಡುತ್ತವೆ. ಪ್ರತಿಯೊಬ್ಬರು ವಾಟ್ಸಪ್ ಸಂದೇಶಗಳ ಸತ್ಯಾಸತ್ಯೆ ಶೋಧಿಸಿ, ಅರಿತು ಫಾರ್ವಡ್ ಮಾಡಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಮಾತನಾಡಿ, ಅಹಿಂಸಾ ತತ್ವದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ಲಭಿಸಿಕೊಟ್ಟರು. ಇಂದು ಭಾರತ ಸಾರ್ವಭೌಮ ಪ್ರಜಾಸತ್ತಾತ್ಮಕ ರಾಷ್ಟ್ರವಾಗಿ ಪ್ರಪಂಚದಲ್ಲಿ ತಲೆ ಹೆತ್ತಿ ನಿಂತಿದೆ. ಹಿಂಸೆಗೆ ಪ್ರತಿಯಾಗಿ ಅಹಿಂಸೆ, ಸತ್ಯದ ಆಯುಧವನ್ನು ಗಾಂಧೀಜಿ ಬಳಸಿದರು. ಅಹಿಂಸೆ ದುರ್ಬಲರ ಆಯುಧವಲ್ಲ. ಸಬಲರ ಆಯುಧ, ಅಸಹಕಾರ, ಸ್ವದೇಶಿ, ಕ್ವಿಟ್ ಇಂಡಿಯಾ ಚಳುವಳಿಗಳನ್ನು ಸಂಘಟಿಸುವುದರ ಮೂಲಕ ಬ್ರಿಟೀಷರನ್ನು ಭಾರತದಿಂದ ಓಡಿಸಿದರು. ಲಾಲ್ ಬಹದ್ದೂರ್ ಶಾಸ್ತ್ರಿಯವರು ದೇಶ ಸಂಕಷ್ಟದಲ್ಲಿದ್ದಾಗ ಪ್ರಧಾನಿ ಅಧಿಕಾರದ ಚುಕ್ಕಾಣಿ ಹಿಡಿದು ಸಮರ್ಥವಾಗಿ ಆಡಳಿತ ನಡೆಸಿದರು ಎಂದರು.
ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ ಮಾತನಾಡಿ, ಮಹಾತ್ಮ ಗಾಂಧೀಜಿ ಸ್ವಾತಂತ್ರ್ಯ ಹೋರಾಟಗಾರ, ರಾಜಕೀಯ ಧುರಿಣ, ಸಾಮಾಜಿಕ ಹಾಗೂ ಅರ್ಥಿಕ ಚಿಂತಕ, ಸುಧಾರಣವಾದಿ, ಆಧ್ಯಾತ್ಮಿಕ ಸಾಧಕ. ದೇಶದಲ್ಲಿ ಸ್ವಾತಂತ್ರ್ಯ ಪಡೆಯಲು ಹಲವಾರು ಹೋರಾಟಗಾರರು ವಿವಿಧ ಮಾರ್ಗಗಳನ್ನು ಅನುಸರಿಸುತ್ತಿದ್ದರು. ಇದರಲ್ಲಿ ಮಂದಗಾಮಿಗಳು, ತೀವ್ರಗಾಮಿಗಳು, ಶಸ್ತ್ರಾಸ್ತ್ರ ಹೋರಾಟಗಾರರು ಪಾಲ್ಗೊಂಡಿದ್ದರು. ಗಾಂಧೀಜಿ ಅಹಿಂಸೆ, ಸತ್ಯದ ದಾರಿ ಹಿಡಿದು ಅಸಹಕಾರ ಸತ್ಯಾಗ್ರಹದ ಮೂಲಕ ಸ್ವಾತಂತ್ರ್ಯ ಹೋರಾಟ ಸಂಘಟಿಸಿದರು. ದೇಶದ ಸ್ವಾತಂತ್ರ್ಯ ಹೋರಾಟದ ಜೊತೆ ಸಮಾಜ ಸುಧಾರಣೆ, ಸರ್ವಧರ್ಮಗಳು ಸಹಬಾಳ್ವೆಯಿಂದ ಬಾಳಿ ದೇಶದಲ್ಲಿ ಶಾಂತಿ ನೆಲೆಸುವಂತೆ ಮಾಡಿದರು. ಲಾಲ್ ಬಹದ್ದೂರ್ ಶಾಸ್ತ್ರಿಜಿ ನೈತಿಕ ಮೌಲ್ಯಾಧಾರಿತ ರಾಜಕಾರಣಕ್ಕೆ ಹೆಸರಾದವರು. ನಿಸ್ವಾರ್ಥ ಸೇವೆ ಹಾಗೂ ರಾಜಕೀಯ ಪಾವಿತ್ರತೆಯನ್ನು ಈ ಇಬ್ಬರು ನೇತಾರ ಜೀವನದಲ್ಲಿ ಅಳವಡಿಕೊಂಡಿದ್ದರು ಎಂದು ಸ್ಮರಿಸಿದರು.
ಭಜನೆ ಹಾಗೂ ಸರ್ವಧರ್ಮ ಪ್ರಾರ್ಥನೆ: ಸಂತ ಜೋಸೆಫ್ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಗಾಂಧೀಜಿ ಪ್ರಿಯ ಭಜನೆಗಳಾದ ವೈಷ್ಣವ ಜನತೋ, ರಘುಪತಿ ರಾಘವ ರಾಜಾರಾಮ್ ಹಾಡಿದರು. ಮೀನಾಕ್ಷಿ ಭಟ್ ಮತ್ತು ಸಂಗಡಿಗರು ರಾಮ್ ರತನ್ ಧನ್ ಪಾಯೋ ಗೀತೆಯನ್ನು ಪ್ರಸ್ತುತ ಪಡಿಸಿದರು. ವಿದ್ಯಾರ್ಥಿಗಳಾದ ಸಾನ್ವಿ ಭಗದ್ಗೀತೆ, ತುಬಾನ್ ರೆಹಮಾನ್ ಕುರಾನ್ ಹಾಗೂ ಅಮೃತಾ ಬೈಬಲ್ ಪಠಿಸಿದರು.
ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ರಂಗ ನಿರ್ದೇಶಕ ಕೆ.ಪಿ.ಎಂ ಗಣೇಶಯ್ಯ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours