ಗಂಗಾ ಕಲ್ಯಾಣ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಸೆಪ್ಟೆಂಬರ್ 07:
ಪ್ರಸಕ್ತ ಸಾಲಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸಾಲ ಸೌಲಭ್ಯ ಒದಗಿಸಲು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 20 ಅರ್ಜಿ ಸಲ್ಲಿಸಲು ಕೊನೆಯದಿನಾಂಕವಾಗಿದೆ.
ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು ಹೊಂದಿರಬೇಕಾದ ಅರ್ಹತೆಗಳು: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಜಾತಿ, ಸಮುದಾಯಗಳಿಗೆ ಸೇರಿದ ಸಣ್ಣ ಮತ್ತು ಅತೀ ಸಣ್ಣ ರೈತರಾಗಿರಬೇಕು, ಖುಷ್ಕಿ  ಜಮೀನು ಹೊಂದಿರಬೇಕು. ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 60 ವರ್ಷದ ಒಳಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/- ಹಾಗೂ ಪಟ್ಟಣ ಪ್ರದೇಶದವರಿಗೆ ರೂ.1,20,000/- ಗಳ ಒಳಗಿರಬೇಕು. ಅರ್ಜಿದಾರರು ಒಂದೇ ಸ್ಥಳದಲ್ಲಿ ಕನಿಷ್ಟ 02 ಎಕರೆ ಜಮೀನು ಹೊಂದಿರಬೇಕು, ಉಡುಪಿ, ದಕ್ಷಿಣ ಕನ್ನಡ, ಕೊಡಗು,ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಟ 01 ಎಕರೆ ಜಮೀನು ಹೊಂದಿರಬೇಕು. ವೈಯಕ್ತಿಕ ಕೊಳವೆ ಬಾವಿ ಯೋಜನೆಯಡಿ ಘಟಕ ವೆಚ್ಚ ರೂ.2.50 ಲಕ್ಷಗಳು, ಇದರಲ್ಲಿ ರೂ.2 ಲಕ್ಷ ಸಹಾಯಧನ ಹಾಗೂ ರೂ.50,000/- ನಿಗಮದಿಂದ ಶೇ.4ರ ಬಡ್ಡಿದರದಲ್ಲಿ  ಸಾಲ ನೀಡಲಾಗುತ್ತದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಿಗೆ ವೈಯಕ್ತಿಕ ಕೊಳವೆ ಬಾವಿ ಘಟಕ ವೆಚ್ಚ ರೂ.4 ಲಕ್ಷಗಳು ಇದರಲ್ಲಿ ರೂ.3.50ಲಕ್ಷ ಸಹಾಯಧನ ಹಾಗೂ ರೂ.50,000/-ನಿಗಮದಿಂದ ಶೇ.4ರ ಬಡ್ಡಿದರದಲ್ಲಿ ನೀಡುವ ಸಾಲದ ಮೊತ್ತ ಒಳಗೊಂಡಿದೆ. ರೈತರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್‍ನಲ್ಲಿರುವಂತೆ ರೈತರ ಹೆಸರು  ಬ್ಯಾಂಕ್ ಖಾತೆಯ ಪುಸ್ತಕ, ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿ ಇರಬೇಕು. ಈ ಹಿಂದೆ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ https://www.dbcdc.karnataka.gov.in ಅಥವಾ ನಿಗಮದ ದೂರವಾಣಿ ಸಂಖ್ಯೆ: 080-22374832, 9606066389, 8824300400ಗೆ  ಸಂಪರ್ಕಿಸಬಹುದೆಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours