ವೇಣೂರು: ಇಲ್ಲಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವೇಣೂರಿನ ಪ್ರಗತಿ ಬಂಧು ಒಕ್ಕೂಟ ಹಾಗೂ ಸ್ವಸಹಾಯ ಸಂಘಗಳ ವತಿಯಿಂದ ಸ್ವಚ್ಛತಾ ಕಾರ್ಯ ನಡೆಯಿತು.


ಈ ಸಂದರ್ಭದಲ್ಲಿ ಯೋಜನೆಯ ಮೇಲ್ವಿಚಾರಕರು ಹಾಗೂ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು. ಪೂಜ್ಯ ಖಾವಂದರರ ಮಾರ್ಗದರ್ಶನದಂತೆ ಪ್ರತಿ ವರ್ಷವೂ ಸ್ವಚ್ಛ ಶ್ರದ್ಧಾ ಕೇಂದ್ರದ ಅಡಿಯಲ್ಲಿ ದೇವಸ್ಥಾನಗಳ ಶುಚಿತ್ವ ಕಾರ್ಯವನ್ನು ನಿರ್ವಹಿಸುವುದು ಮತ್ತು ವಿಶೇಷ ಸಂದರ್ಭದಲ್ಲಿ ಹಾಗೂ ಜಾತ್ರೋತ್ಸವದ ಸಮಯದಲ್ಲಿಯೂ ಸಂಪೂರ್ಣ ಸಹಕಾರವನ್ನು ನೀಡುತ್ತಿದ್ದಾರೆ. ಇವರ ಈ ಸೇವೆಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಎ. ಜಯರಾಮ ಶೆಟ್ಟಿ ಕೃತಜ್ಞತೆ ಸಲ್ಲಿಸಿದ್ದಾರೆ.



