ಕುಕ್ಕೇಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಗರ್ಡಾಡಿ ವಲಯ ನಿಟ್ಟಡೆ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ – ನವಗುಳಿಗ ಕ್ಷೇತ್ರದಲ್ಲಿ ಶ್ರದ್ಧಾ ಕೇಂದ್ರ ಶುಚಿತ್ವ ಕಾರ್ಯಕ್ರಮದಡಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.

ಕ್ಷೇತ್ರದ ಧರ್ಮದರ್ಶಿ ರಮೇಶ್ ಪೂಜಾರಿ, ಗುಲಾಬಿ ಆದಪ್ಪ ಪೂಜಾರಿ, ವಿಪತ್ತು ನಿರ್ವಹಣಾ ಘಟಕದ ಅಧ್ಯಕ್ಷ ಹರೀಶ್ ಕುಲಾಲ್, ಸೇವಾಪ್ರತಿನಿಧಿ ವನಿತಾ ಪಿ., ವಿಪತ್ತು ಘಟಕದ ಸದಸ್ಯರು ಪಾಲ್ಗೊಂಡಿದ್ದರು.






