ಕರ್ನಾಟಕದಲ್ಲಿ ನವೆಂಬರ್ 17ರಿಂದ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಕಡೆ ಮೋಡಕವಿದ ವಾತಾವರಣವಿದ್ದು, ಚಳಿ ಸಾಮಾನ್ಯವಿದೆ. ನವೆಂಬರ್ 17ರಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.









