ಮಂಗಳೂರು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಿನ್ನೆ ಶನಿವಾರ ರಾತ್ರಿ ಬೆಳ್ತಂಗಡಿ ತಾಲೂಕು ತಾಲೂಕಿನ ಅಲ್ಲಲ್ಲಿ ಸಾಧಾರಣ ಮಳೆ ಬಂದಿದೆ. ಇಂದು ರವಿವಾರ ಮುಂಜಾನೆಯಿಂದಲೇ ಮೋಡಕವಿದ ವಾತಾವರಣ ಇದ್ದು, ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.
ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ?
ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ,ಶಿವಮೊಗ್ಗ ಮತ್ತು ತುಮಕೂರು ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಯಾವೆಲ್ಲಾ ಪ್ರದೇಶಗಳಲ್ಲಿ ಒಣ ಹವೆ
ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಸಂಪೂರ್ಣವಾಗಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣಹವೆಯ ವಾತಾವರಣ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ.





