ಮನವಿಗೆ ಸ್ಪಂದಿಸಿದ ಸರಕಾರಕ್ಕೆ ಕ್ಷೇತ್ರದ ಪರಿವಾಗಿ ಅಭಿನಂದನೆ: ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಮಳೆಹಾನಿ ಪರಿಹಾರಕ್ಕೆ ರಾಜ್ಯ ಸರಕಾರ ರೂ. 10.67 ಕೋಟಿ ಅನುದಾನ ಬಿಡುಗಡೆಗೊಳಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು, ತಾಲೂಕಿನ ವಿವಿಧ ಗ್ರಾಮಗಳ ವ್ಯಾಪ್ತಿಗಳಲ್ಲಿ ನಿರಂತರವಾಗಿ ಸುರಿದ ಬೀಕರ ಮಳೆಯಿಂದಾಗಿ ಪ್ರವಾಹ ಸ್ಥಿತಿ ಏರ್ಪಟ್ಟಿದ್ದು ಸಾರ್ವಜನಿ ಸಂಪರ್ಕ ರಸ್ತೆಗಳು, ಸೇತುವೆಗಳು, ಕಾಲು ಸಂಕಗಳು, ವಿದ್ಯುತ್ ಸಂಪರ್ಕಗಳು, ಶಾಲಾ ಕಟ್ಟಡಗಳು ಹಾನಿಯಾಗಿರುವ ಬಗ್ಗೆ ಅನುದಾನ ಒದಗಿಸುವಂತೆ ಸರಕಾರದ ಕಂದಾಯ ಇಲಾಖೆಯ ಕಾರ್ಯದರ್ಶಿಗಳಿಗೆ ಮನವಿಯನ್ನು ನೀಡಿದ್ದು ಮನವಿಗೆ ಸ್ಪಂದಿಸಿದ ರಾಜ್ಯ ಸರಕಾರ ರೂ. 10.67 ಕೋಟಿ ಅನುದಾನವನ್ನು ಮಂಜೂರುಗೊಳಿಸಿರುತ್ತದೆ ಎಂದಿದ್ದಾರೆ.
ಈ ಸಂದರ್ಭದಲ್ಲಿ ಅನುದಾನವನ್ನು ಮಂಜೂರುಗೊಳಿಸಿದ ರಾಜ್ಯ ಸರಕಾರಕ್ಕೆ ತಾಲೂಕಿನ ಜನತೆಯ ಪರವಾಗಿ ಧನ್ಯವಾದಗಳನ್ನು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.









