ಕೋಟೆ ನಾಡಲ್ಲಿ ಕಾಂಗ್ರೆಸ್ ಕಿಡಿ, ಕೇಂದ್ರ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ

 

 

 

 

ಚಿತ್ರದುರ್ಗ ಜೂ. ೧೭: ಕೇಂದ್ರ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣದ ಫಲವಾಗಿ ಇ.ಡಿ ಮೂಲಕ ಎಐಸಿಸಿ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿ ಹಾಗೂ ಮುಖಂಡರಾದ ರಾಹುಲ್ ಗಾಂಧಿ ಅವರಿಗೆ ಕಿರುಕುಳ ದೌರ್ಜನ್ಯದ ಬಗ್ಗೆ ಖಂಡಿಸಿ ಹಾಗೂ ನವದೆಹಲಿಯ ಎಐಸಿಸಿ ಕಚೇರಿಗೆ ಕಾಂಗ್ರೆಸ್ ನಾಯಕರ ಪ್ರವೇಶಕ್ಕೆ ನಿಷೇಧಿಸಿರುವ ದೆಹಲಿ ಪೊಲೀಸರ ನಡೆಯನ್ನು ಖಂಡಿಸಿ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿರುವ ಪ್ರತಿಭಟನೆ ಹಾಗೂ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಎಂ.ಕೆ ತಾಜ್‌ಪೀರ್ ಅಧ್ಯಕ್ಷತೆಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕಾಂಗ್ರೆಸ್ ಕಛೇರಿಯಿಂದ ಪ್ರಾರಂಭವಾದ ಮೆರವಣಿಗೆ ಅಂಬೇಡ್ಕರ್ ರವರಿಗೆ ಮಾಲಾರ್ಪಣೆ ಮಾಡಿ ತದ ನಂತರ ಪ್ರವಾಸಿ ಮಂದಿರ ಬಳಿ ಹೋಗುತ್ತಿದ್ದ ಗುಂಪೊಂದನ್ನು ಪೋಲಿಸರು ಬಂಧಿಸಿ ಕರೆದೊಯ್ಯುದರು. ನಂತರ ಜಿಲ್ಲಾಧಿಕಾರಿಗಳ ಕಛೇರಿ ಬಳಿ ಬಂದಾಗ ಪೋಲಿಸರು ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ಪ್ರತಿಭಟನಾಕಾರರನ್ನು ಬಿಡದೇ ಸತಾಯಿಸಿದಾಗ ಅಲ್ಲಿ ಸ್ವಲ್ಪ ಸಮಯ ತಳ್ಳು ನೂಕಾಟ ನಡೆಯಿತು. ಈ ಸಂದರ್ಭದಲ್ಲಿ ಪೋಲಿಸರು ಹಾಕಿದ ಬ್ಯಾರಿಕೇಟಿಂಗ್‌ನ್ನು ತಳ್ಳಿಕೊಂಡು ಪ್ರತಿಭಟನಾಕಾರರು ಒಳಗಡೆ ಆಗಮಿಸಿದರು. ನಂತರ ಆಗಮಿಸಿದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

 

 

ಈ ಮಧ್ಯೆ ಪೋಲಿಸರು ಬಂದಿಸಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸ್ವಲ್ಪ ಸಮಯದವರೆಗೂ ನಗರಠಾಣೆಯ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಪ್ರತಿಭಟನೆಯನ್ನು ನಡೆಸಿ ಸರ್ಕಾರ ಮತ್ತು ಪೋಲಿಸರ ವಿರುದ್ದ ಘೋಷಣೆಗಳನ್ನು ಕೂಗಲಾಯಿತು.

ಈ ಸಂದರ್ಭದಲ್ಲಿ  ಶಾಸಕರಾದ ಟಿ.ರಘುಮೂರ್ತಿ,  ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪ ಅಸಂಘಟಿತ ರಾಜ್ಯಾಧ್ಯಕ್ಷರಾದ ಜಿ.ಎಸ್.ಮಂಜುನಾಥ್ , ಮಾಜಿ ಶಾಸಕರಾದ ತಿಪ್ಪೇಸ್ವಾಮಿ ವಿಧಾನಪರಿಷತ್ ಮಾಜಿ ಸದಸ್ಯರಾದ ರಘು ಆಚಾರ್ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಂ.ರಾಮಪ್ಪ ಜಿಲ್ಲಾ ಕಾರ್ಯಾಧ್ಯಕ್ಷರಾದ ಹಾಲಸ್ವಾಮಿ ಮುಖಂಡರಾದ ಭೀಮಸಮುದ್ರ ಜಿ.ಎಸ್.ಮಂಜುನಾಥ್ ,ಹನುಮಲಿ ಷಣ್ಮುಖಪ್ಪ, ಸೋಮಣ್ಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೀತಾ ನಂದಿನಿ ಗೌಡ, ಮಹಿಳಾ ಮುಖಂಡರಾದ ಮನಿರಾ ಮುಖದಾರ್, ಗೀತಾ ನಾಗರಾಜ್, ಹಿರಿಯೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಸುರೇಖಾ ಮಣಿ ಹಿರಿಯೂರು ನಗರಸಭಾ ಸದಸ್ಯರಾದ ಶಿವರಂಜನಿ ನಾಗರತ್ನಮ್ಮ ಹಾಗೂ ವಿವಿಧ ಘಟಕಗಳ ಜಿಲ್ಲಾಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು ಸೇರಿದಂತೆ ಅನೇಕ ಕಾಂಗ್ರೆಸ್ ಪಕ್ಷದ ನಾಯಕರು, ಯುವ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

 

[t4b-ticker]

You May Also Like

More From Author

+ There are no comments

Add yours