ಹೊರಗುತ್ತಿಗೆ ನೌಕರಿ’ಯಲ್ಲೂ ಮೀಸಲಾತಿ ಜಾರಿಗೆ ಚಿಂತನೆ: ಸಿಎಂ ಸಿದ್ದರಾಮಯ್ಯ ಘೋಷಣೆ

 

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ( Karnataka Government ) ಖಾಲಿ ಇರುವ ಹುದ್ದೆಗಳನ್ನು ( Jobs ) ಭರ್ತಿ ಮಾಡುವುದಾಗಿ ನಾವು ಪ್ರಣಾಳಿಕೆಯಲ್ಲಿ ಹೇಳಿದ್ದೆವು. ಅದರಂತೆ ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳುತ್ತೇವೆ. ಅಲ್ಲಿಯವರೆಗೂ ಹೊರ ಗುತ್ತಿಗೆ ನೇಮಕಾತಿಗಳಲ್ಲೂ ( Outsourced Recruitment ) ಮೀಸಲಾತಿ ತರುವ ಉದ್ದೇಶ ಹೊಂದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Chief Minister Siddaramaiah ) ತಿಳಿಸಿದ್ದಾರೆ.

ಜನಮನ ಪ್ರತಿಷ್ಠಾನ ಮತ್ತು ಸಮತಾ ಅಧ್ಯಯನ ಕೇಂದ್ರ ದೇವರಾಜ ಅರಸು ಭವನದಲ್ಲಿ ಹಮ್ಮಿಕೊಂಡಿದ್ದ ಪ್ರಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಸಭಿಕರ ಪ್ರಶ್ನೆಗಳಿಗೆ ಉತ್ತರಿಸಿದರು.

ಜಾಗತಿಕ ಮಟ್ಟದ ಬಂಡವಾಳವನ್ನು ಆಕರ್ಷಿಕಸಬೇಕು ಎಂದು ಶಾಂತಿ, ಸುವ್ಯವಸ್ಥೆ ಮತ್ತು ಉದ್ಯಮ ಸ್ನೇಹಿ ವಾತಾವರಣ ಇರಬೇಕು. ಬಂಡವಾಳ ಹೂಡಿಕೆಯಿಂದ ಉದ್ಯೋಗ ಸೃಷ್ಟಿಯಾಗಿ ಜಿಡಿಪಿ ಹೆಚ್ಚುತ್ತದೆ. ಹೀಗಾಗಿ ಜಾತಿ-ಧರ್ಮದ ಸಂಘರ್ಷ ಇಲ್ಲದ ಶಾಂತಿಯುತ ಸಮಾಜ ಇರಬೇಕು ಎಂದರು.

ನಮ್ಮ ಯುವ ಸಮೂಹದ ಶಕ್ತಿ ಮತ್ತು ಚೈತನ್ಯ ದುರುಪಯೋಗ ಆಗಬಾರದು, ಜಾತಿ-ಧರ್ಮದ ಹೆಸರಲ್ಲಿ ಗಲಭೆಗಳಿಗೆ ಯುವ ಸಮೂಹ ದುರ್ಬಳಕೆ ಆಗುವುದನ್ನು ತಪ್ಪಿಸುವ ರೀತಿಯಲ್ಲಿ ನಮ್ಮ ಸರ್ಕಾರ ನೀತಿ ರೂಪಿಸಿದೆ. ಇದಕ್ಕಾಗಿ ಕೌಶಲ್ಯ ತರಬೇತಿ ಜತೆಗೆ ನಿರುದ್ಯೋಗಿ ಯುವ ಸಮೂಹಕ್ಕೆ 24 ತಿಂಗಳ ಕಾಲ ಯುವನಿಧಿ ನೀಡಲು ನಿರ್ಧರಿಸಿದ್ದೇವೆ ಎಂದರು.

ಶರಾವತಿ ಸಂತ್ರಸ್ಥರಿಗೆ ಶಾಶ್ವತ ಪರಿಹಾರ

ಮಲೆನಾಡಿನ ಜಿಲ್ಲೆಗಳಲ್ಲಿ ಹಲವು ವರ್ಷಗಳಿಂದ ಇರುವ ಶರಾವತಿ ಸಂತ್ರಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಭರವಸೆ ನೀಡಿದರು.

ಸಮ ಸಮಾಜ ಬಂದರೆ ಶಾಂತಿಯ ತೋಟ

ಹಿಂದಿನ ಸರ್ಕಾರದಲ್ಲಿ ಅನೈತಿಕ ಪೊಲೀಸ್ ಗಿರಿ ಅತ್ಯಂತ ನಿರ್ಲಜ್ಜತನದಿಂದ ಆಚರಿಸಲ್ಪಡುತ್ತಿತ್ತು. ನಾವು ಅಧಿಕಾರಕ್ಕೆ ಬರುತ್ತಿದ್ದಂತೆ ಅನೈತಿಕ ಪೊಲೀಸ್ ಗಿರಿಗೆ ಬರೆ ಎಳೆದಿದ್ದೇವೆ. ಸಮ ಸಮಾಜ ನಿರ್ಮಾಣ ಆಗದ ಹೊರತು ದಲಿತರ, ಅಲ್ಪ ಸಂಖ್ಯಾತರ, ಹಿಂದುಳಿದವರ ಮೇಲೆ ದೌರ್ಜನ್ಯ ಹೋಗುವುದಿಲ್ಲ. ಹೀಗಾಗಿ ಕುವೆಂಪು ಅವರ ಮಾತಿನಂತೆ ರಾಜ್ಯವನ್ನು ಶಾಂತಿಯ ತೋಟ ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಹೇಳಿದರು.

ಅಕಾಡೆಮಿಗಳ ನೇಮಕಾತಿಗೆ ಸಮಿತಿ ರಚನೆ

ಅಕಾಡೆಮಿ, ಪ್ರಾಧಿಕಾರಗಳಿಗೆ ನೇಮಕ ಮಾಡಲು ಒಂದು ಆಯ್ಕೆ ಸಮಿತಿ ಮಾಡುತ್ತೇವೆ. ಈ ಆಯ್ಕೆ ಸಮಿತಿ ಮತಾಂಧ ಮತ್ತು ಸಮಾಜ ವಿಭಜಿಸುವ ಮನಸ್ಥಿತಿಯವರು ಒಳಗೆ ಪ್ರವೇಶಿಸದಂತೆ ಸ್ಕ್ರೀನಿಂಗ್ ನಡೆಸುತ್ತಾರೆ ಎಂದು ತಿಳಿಸಿದರು.

ಮುಟ್ಟಿನ ರಜೆ ಪರಿಶೀಲನೆ

ಮಹಿಳಾ ಉದ್ಯೋಗಿ ಹಾಗೂ ವಿದ್ಯಾರ್ಥಿನಿಯರಿಗೆ ರಜೆ ಘೋಷಿಸಬೇಕು ಎನ್ನುವ ಬೇಡಿಕೆಯೊಂದಕ್ಕೆ ಉತ್ತರಿಸಿದ ಸಿಎಂ ಈ ಬಗ್ಗೆ ಪರಿಶೀಲಿಸಿ ಯೋಗ್ಯ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಶೂದ್ರರಂತೆ ಮಹಿಳೆಯರೂ ಶತಮಾನಗಳ ಕಾಲ ಶಿಕ್ಷಣದಿಂದ ವಂಚಿತರಾಗಿದ್ದರು. ಸಾಮಾಜಿಕವಾಗಿ, ಆರ್ಥಿಕವಾಗಿ ಸದೃಡರಾದರೆ ಶೋಷಣೆ, ದೌರ್ಜನ್ಯ ಕಡಿಮೆಯಾಗುತ್ತದೆ. ಸರ್ಕಾರಿ ಭೂಮಿ ಒತ್ತುವರಿ ಕುರಿತು ಸಮೀಕ್ಷೆ ಮಾಡಲಾಗುವುದು. ಭೂ ಹೀನರಿಗೆ ಭೂಮಿ ಕೊಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

[t4b-ticker]

You May Also Like

More From Author

+ There are no comments

Add yours