ಡಾ.ಬಿ.ಆರ್.ಅಂಬೇಡ್ಕರ್ ಕೊಟ್ಟ ಸಂವಿಧಾನದಿಂದ ಭವ್ಯ ಭಾರತ ನಿರ್ಮಾಣ:ಶಾಸಕ ಟಿ.ರಘುಮೂರ್ತಿ

 

ಚಳ್ಳಕೆರೆ: ದೇಶದ  ಜನಕ್ಕೆ ಸೆ.15  ಪವಿತ್ರತೆಯಿಂದ ಕೂಡಿದ ಹಾಗೂ ನಮ್ಮ ಪ್ರಜಾಪ್ರಭುತ್ವವವನ್ನು ಸಂರಕ್ಷಣೆ ಮಾಡುವ ಸಂಕಲ್ಪದೊಂದಿಗೆ ನಾವೆಲ್ಲರೂ ಅಂತರಾಷ್ಟೀಯ ಪ್ರಜಾಪ್ರಭುತ್ವದಿನವನ್ನು ಆಚರಣೆ ಮಾಡುತ್ತಿದ್ದೇವೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ನೀಡಿದ ಸಂವಿಧಾನ ನಮಗೆ ಸರ್ವಸ್ವವನ್ನೂ ನೀಡಿದೆ ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.

ಇದನ್ನು ಓದಿ: ಮುರುಘಾ ಶರಣರಿಗೆ ಆರೋಗ್ಯದಲ್ಲಿ ಏರುಪೇರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ

ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಎಚ್‌ಪಿಪಿಸಿ ಪ್ರಥಮ ದರ್ಜೆ ಕಾಲೇಜು ಬಯಲು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ರಾಷ್ಟ್ರದ  ಸ್ವಾತಂತ್ರ್ಯ  ಮಹೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ನಾವು ಹೆಮ್ಮೆಯಿಂದ ನಮ್ಮ ಸಂವಿಧಾನದ ಪೀಠಿಕೆಯನ್ನು ಓದೋಣ ಬನ್ನಿ ಕಾರ್ಯಕ್ರಮದ ಮೂಲಕ ಈ ಕಾರ್ಯವನ್ನು ಯಶಸ್ವಿಗೊಳಿಸುತ್ತಿದ್ದೇವೆ. ಭವ್ಯಭಾರತವನ್ನು ಸರ್ವಧರ್ಮ, ಸಮಭಾವ, ಸಾರ್ವಭೌಮ, ಪ್ರಜಾಸ್ತಾತ್ಮಕ ಗಣರಾಜ್ಯವನ್ನಾಗಿ ಮಾಡಲು ನಮಗೆ ನಮ್ಮ ಸಂವಿಧಾನ ಆಧಾರಸ್ತಂಭವಾಗಿದೆ. ದೇಶದ ಆಡಳಿತ ಸರ್ವತೋಮುಖ ಪ್ರಗತಿ, ಸಾಧನೆ ಎಲ್ಲವನ್ನೂ ನಮ್ಮ ಸಂವಿಧಾನದ ಮೂಲಕವೇ ನಾವು ಪಡೆಯಬೇಕಿದೆ. ವಿಶೇಷವಾಗಿ ನಾಡಿನ ಜನತೆಗೆ ಮತದಾನದ ಮೂಲಕ ಸರ್ಕಾರವನ್ನು ರಚಿಸುವಂತಹ ಶಕ್ತಿಯನ್ನು ನಮ್ಮ ಸಂವಿಧಾನ ನಮಗೆ ನೀಡಿದೆ. ಇಂತಹ ಸಂವಿಧಾನ ಪಡೆದ ನಾವು ಧನ್ಯರು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಮಾಜ ಕಲ್ಯಾಣಾಧಿಕಾರಿ ಮಂಜುನಾಥ, ರಾಜ್ಯ ಸರ್ಕಾರದ ನಿರ್ದೇಶನದಂತೆ ಇಂದು ನಾವೆಲ್ಲರೂ ಸೇರಿ ಅಂತರಾಷ್ಟೀಯ ಪ್ರಜಾಪ್ರಭುತ್ವ ದಿನವನ್ನು ಸಂವಿಧಾನ ಪೀಠಿಕೆ ಓದುವ ಮೂಲಕ ಪ್ರಾರಂಭ ಮಾಡುತ್ತಿದ್ದೇವೆ. ಇದು ಪ್ರತಿಯೊಬ್ಬ ಭಾರತೀಯರಿಗೂ ಹೆಚ್ಚು ಸಂತಸ ಪಡುವ ದಿನವಾಗಿದೆ. ನಮ್ಮ ಸಂವಿಧಾನ ನಮ್ಮೆಲ್ಲರ ಪ್ರಗತಿಗೆ ಪೂರಕವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ರೇಹಾನ್ ಪಾಷ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜೆ.ಕೆ.ಹೊನ್ನಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್, ಡಿವೈಎಸ್ಪಿ ರಾಜಣ್ಣ, ವೃತ್ತ ನಿರೀಕ್ಷಕ ಕೆ.ಸಮೀವುಲ್ಲಾ, ಬಿಸಿಎಂ ಅಧಿಕಾರಿ ದಿವಾಕರ್, ಸಿಡಿಪಿಒ ಹರಿಪ್ರಸಾದ್, ಎಸ್ಟಿ ಅಧಿಕಾರಿ ಶಿವರಾಜ್, ಪೌರಾಯುಕ್ತ ಸಿ.ಚಂದ್ರಪ್ಪ, ಪ್ರಾಂಶುಪಾಲ ಡಾ.ಆರ್.ರಂಗಪ್ಪ, ನಗರಸಭಾ ಸದಸ್ಯರಾದ ಕೆ.ವೀರಭದ್ರಪ್ಪ, ಬಿ.ಟಿ.ರಮೇಶ್‌ಗೌಡ, ಸುಮಾ, ಕವಿತಾ, ವೈ.ಪ್ರಕಾಶ್ ಮತ್ತು ಪ್ರಾಧ್ಯಾಪಕ ವರ್ಗ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೂ ಮುನ್ನ ಶಾಸಕ ಟಿ.ರಘುಮೂರ್ತಿ ಮತ್ತು ತಾಲ್ಲೂಕು ಅಧಿಕಾರಿಗಳ ತಂಡ ಅಂಬೇಡ್ಕರ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸಂವಿಧಾನ ಶಿಲ್ಪಿಗೆ ನಮನ ಸಲ್ಲಿಸಿದರು.

[t4b-ticker]

You May Also Like

More From Author

+ There are no comments

Add yours