ಮೀನುಗಾರಿಕೆಗಾಗಿ ಪೋತ್ರಾಹಧನ 20 ಸಾವಿರ ರೂ.ಗೆ ಏರಿಕೆ .ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆಯಲ್ಲಿ ಮೀನು ಮಾರುಕಟ್ಟೆ ಸ್ಥಾಪನೆ
ಕರ್ನಾಟಕ ಬಜೆಟ್ 2026: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 17ನೇ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಮಾರ್ಚ್ 06ರಿಂದ ಮಾರ್ಚ್ 27ರವರೆಗೆ ಕರ್ನಾಟಕ ಬಜೆಟ್ ಅಧಿವೇಶನ ನಡೆಯಲಿದೆ.
ರಾಜ್ಯದ ರಸ್ತೆ, ಸೇತುವೆ, ಕಟ್ಟಡಗಳ ನಿರ್ಮಾಣಕ್ಕೂ ಒತ್ತು: ಸಿದ್ದರಾಮಯ್ಯ
ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಯಲ್ಲಿ ರಾಜ್ಯದ ರಸ್ತೆ, ಸೇತುವೆ, ಕಟ್ಟಡಗಳ ನಿರ್ಮಾಣಕ್ಕೂ ನಮ್ಮ ಸರ್ಕಾರ ಆದ್ಯತೆ ನೀಡುತ್ತಿದೆ. ಇಲಾಖಾವಾರು ನೀಡುವ ಅನುದಾನಗಳನ್ನು ಹೊರತುಪಡಿಸಿ ಕಳೆದ ವರ್ಷ ರಸ್ತೆ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ ವನ್ನು ಜಾರಿಗೊಳಿಸಿ 8,600 ಕೋಟಿ ರೂ. ಗಳ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ. ಇದರ 2ನೇ ಹಂತವಾಗಿ 2026-27ನೇ ಸಾಲಿನಲ್ಲಿ 4,000 ಕೋಟಿ ರೂ. ಮೊತ್ತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Karnataka Budget LIVE: ವಿವಿಧ ಇಲಾಖೆಗಳಿಗೆ ಬಜೆಟ್ನಲ್ಲಿ ಮೀಸಲಿಟ್ಟ ಅನುದಾನವೆಷ್ಟು?
- ಶಿಕ್ಷಣ ಇಲಾಖೆಗೆ 47,224 ಕೋಟಿ ರೂ. ಅನುದಾನ ಹಂಚಿಕೆ
- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 34,929 ಕೋಟಿ ರೂ.
- ಇಂಧನ ಇಲಾಖೆಗೆ 29,947 ಕೋಟಿ ರೂ. ಅನುದಾನ ಹಂಚಿಕೆ
- ಗ್ರಾಮೀಣಾಭಿವೃದ್ಧಿ ಇಲಾಖೆಗೆ 26,559 ಕೋಟಿ ರೂ. ಅನುದಾನ
- ಜಲಸಂಪನ್ಮೂಲ ಇಲಾಖೆಗೆ 22,436 ಕೋಟಿ ರೂ. ಅನುದಾನ
- ನಗರಾಭಿವೃದ್ಧಿ ಮತ್ತು ವಸತಿ ಇಲಾಖೆಗೆ 22,203 ಕೋಟಿ ರೂ.
- ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ 23,100 ಕೋಟಿ ರೂ.
- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 17,817 ಕೋಟಿ ರೂ.
- ಕಂದಾಯ ಇಲಾಖೆಗೆ 19,843 ಕೋಟಿ ರೂ. ಅನುದಾನ ಹಂಚಿಕೆ
- ಸಮಾಜ ಕಲ್ಯಾಣ ಇಲಾಖೆಗೆ 18,612 ಕೋಟಿ ರೂ. ಅನುದಾನ
- ಲೋಕೋಪಯೋಗಿ ಇಲಾಖೆಗೆ 11,424 ಕೋಟಿ ರೂ. ಹಂಚಿಕೆ
- ಆಹಾರ ಇಲಾಖೆಗೆ 7,942 ಕೋಟಿ ರೂ. ಅನುದಾನ ಹಂಚಿಕೆ
- ಕೃಷಿ ಇಲಾಖೆಗೆ 8,373 ಕೋಟಿ ರೂ. ಅನುದಾನ ಹಂಚಿಕೆ
- ಪಶುಸಂಗೋಪನೆ, ಮೀನುಗಾರಿಕೆ ಇಲಾಖೆಗೆ 4,084 ಕೋಟಿ ರೂ.
- ಇತರೆ ಇಲಾಖೆಗಳಿಗೆ ಒಟ್ಟು 1,72,757 ಕೋಟಿ ರೂ. ಅನುದಾನ.
- Karnataka Budget LIVE: ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ 13,000 ಕೋಟಿ ರೂ. ಅನುದಾನಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ 13,000 ಕೋಟಿ ರೂ. ಅನುದಾನ ನೀಡಲಾಗುವುದು, ಮೂರು ವರ್ಷಗಳಲ್ಲಿ ಅವಧಿಯಲ್ಲಿ 13,000 ಕೋಟಿಗಳ ಅನುದಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
- 06 Mar 2026 11:13 AM (IST)Karnataka Budget LIVE: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಹೆಸರು ಬದಲಾವಣೆ ಮಾಡಿ ಸಿಎಂ ಘೋಷಣೆವಿಕ್ಟೋರಿಯಾ ಆಸ್ಪತ್ರೆ ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಮರುನಾಮಕರಣಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾರವಾರ, ಯಾದಗಿರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ತಲಾ 100 ಕೋಟಿ ರೂ. ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದೆ. ಮುನಿರಾಬಾದ್-ಟಿ.ಬಿ ಡ್ಯಾಂ ಬಳಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ನಿರ್ಧರಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
- 06 Mar 2026 11:09 AM (IST)Karnataka Budget LIVE: ಮೀನುಗಾರಿಕೆಗಾಗಿ ಪೋತ್ರಾಹಧನ 20 ಸಾವಿರ ರೂ.ಗೆ ಏರಿಕೆಮೀನುಗಾರಿಕೆಗಾಗಿ ಪೋತ್ರಾಹಧನ 20 ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ. ಮಂಗಳೂರು ಮೀನುಗಾರಿಕಾ ವಿವಿಯಲ್ಲಿ ಸೆಂಟರ್ ಆಫ್ ಎಕ್ಸ್ಲೆನ್ಸ್,ಮೀನು ಮಾರಾಟ ಮಾಡಲು ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆಯಲ್ಲಿ ಸ್ಥಾಪನೆ ಮಾಡಲಾಗುವುದು. 38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 30 ಸಾವಿರ ಕೋಟಿ ಕೃಷಿ ಸಾಲ ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
- 06 Mar 2026 11:07 AM (IST)Karnataka Budget LIVE: ಮಲೆನಾಡು, ಕರಾವಳಿಯಲ್ಲಿ ಕಾಲು ಸಂಕ ನಿರ್ಮಾಣರಾಜ್ಯದ ಮಲೆನಾಡು ಹಾಗೂ ಕರಾವಳಿ ಪ್ರದೇಶಗಳಲ್ಲಿ ಸಂಪರ್ಕ ರಹಿತ ಹಾಗೂ ಜನವಸತಿ ಪ್ರದೇಶಗಳಿಗೆ ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಗಾಗಿ 300 ಕಾಲುಸಂಕಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
- 06 Mar 2026 11:06 AM (IST)Karnataka Budget LIVE: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧಹದಿನಾರು ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ, ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನಲೆಯಲ್ಲಿ ಹಾಗೂ ಅಡ್ಡಪರಿಣಾಮ ತಡೆಗಟ್ಟುವ ಹಿನ್ನೆಲೆಯಲ್ಲಿ 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧ ಮಾಡಲಾಗಿದೆ. ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಬಿ ಆರ್ ಸಿ ಕೇಂದ್ರಗಳಲ್ಲಿ ಓರ್ವ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರ ನೇಮಕ ಮಾಡಲಾಗುವುದು ಎಂದು ಬಜೆಟ್ನಲ್ಲಿ ಸಿಎಂ ಘೋಷಿಸಿದ್ದಾರೆ.
- 06 Mar 2026 11:01 AM (IST)Karnataka Budget LIVE: ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ ಜಾರಿಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ ಜಾರಿ ಮಾಡಲಾಗುತ್ತದೆ. ಮುಂದಿನ ಮೂರು ವರ್ಷದಲ್ಲಿ ಸಸ್ಯ ಸಂಜೀವಿನಿ ಯೋಜನೆ ಜಾರಿ ಮಾಡಲಾಗುತ್ತದೆ. ಕೃಷಿ ಮಾಹಿತಿಗಾಗಿ ಎಐ ತಂತ್ರಜ್ಞಾನ ಆಧಾರಿತ ರೈತ ಕರೆ ಕೇಂದ್ರ ಆರಂಭಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
- 06 Mar 2026 10:59 AM (IST)Karnataka Budget LIVE: ಪಶು ವೈದ್ಯ ಸಂಸ್ಥೆಗಳಿಗಾಗಿ ಹೊಸದಾಗಿ 100 ಕಟ್ಟಡ ನಿರ್ಮಾಣ : ಸಿದ್ದರಾಮಯ್ಯಪಶು ವೈದ್ಯ ಸಂಸ್ಥೆಗಳಿಗಾಗಿ ಹೊಸದಾಗಿ 100 ಕಟ್ಟಡ ನಿರ್ಮಾಣ ಮಾಡಲಾಗುತ್ತದೆ, ಬೆಳಗಾವಿ, ಕಲಬುರಗಿಯಲ್ಲಿ ಕುರಿ ಸಾಕಾಣಿಕೆಗೆ ಪೋತ್ಸಾಹ ನೀಲಡಾಗುತ್ತದೆ. ಹಸು, ಎಮ್ಮೆ ಖರೀದಿಸಲು ಪ್ರೋತ್ಸಾಹ ಧನಕ್ಕೆ 40 ಕೋಟಿ ರೂ. ಮೀಸಲಿಡಲಾಗುವುದು, 20 ತಾಲೂಕು ಪಶು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ.10 ಕೋಟಿ ರೂ. ವೆಚ್ಚದಲ್ಲಿ 15 ಪಶು ಆಸ್ಪತ್ರೆಗಳು ಮೇಲ್ದರ್ಜೆಗೆ ಏರಿಸಲಾಗುವುದು. ಮೈಸೂರಿನಲ್ಲಿ ಬೊಯರ್ ಮೇಕೆ ತಳಿ ಸಂವರ್ಧನಾ ಕೇಂದ್ರ ಸ್ಥಾಪಿಸಲಾಗುವುದು. ಬಂಡೂರು ಕುರಿ ಸಂವರ್ಧನಾ ಕೇಂದ್ರ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
- 06 Mar 2026 10:57 AM (IST)ಅಡಿಕೆ ಬೆಳೆಗಾರರು, ತೆಂಗು ಬೆಳೆಗಾರರ ಸಮಸ್ಯೆ ನಿವಾರಣೆಗೆ 10 ಕೋಟಿ ರೂ. ಮೀಸಲು: ಸಿದ್ದರಾಮಯ್ಯಅಡಿಗೆ ಬೆಳೆಗಾರರು ಅನುಭವಿಸುತ್ತಿರುವ ಎಲೆಚುಕ್ಕಿ, ಹಳದಿ ಚುಕ್ಕಿ ರೋಗ ನಿವಾರಣೆ ಹಾಗೂ ತೆಂಗು ಬೆಳೆಗಾರರ ಸಮಸ್ಯೆಯನ್ನು ನಿವಾರಿಸಲು 10 ಕೋಟಿ ರೂ. ಮೀಸಲಿಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
- 06 Mar 2026 10:52 AM (IST)Karnataka Budget LIVE: ಆರೋಗ್ಯ ಕ್ಷೇತ್ರಕ್ಕೆ ಕರ್ನಾಟಕ ಬಜೆಟ್ನಲ್ಲಿ ಸಿಕ್ಕಿದ್ದೇನು?ಆರೋಗ್ಯ ಇಲಾಖೆ ಮೂಲ ಸೌಕರ್ಯ ಅಭಿವೃದ್ಧಿಗೆ 900 ಕೋಟಿ ರೂ. ಮೀಸಲಿಡಲಾಗುವುದು, ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ ಟ್ರಾಮಾ ಕೇರ್ ಸೆಂಟರ್ ತೆರೆಯಲಾಗುವುದು. ಐಸಿಯುಗಳಿಗೆ ಉಪಕರಣ ಮೇಲ್ದರ್ಜೆಗೇರಿಸಲು 45 ಕೋಟಿ ರೂಪಾಯಿ ಮೀಸಲಿಡಲಾಗುವುದು. ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಪೌಷ್ಟಿಕ ಪುನಶ್ಚೇತನ ಕೇಂದ್ರ ತೆರೆಯಲಾಗುವುದು. 18 ವರ್ಷದವರೆಗಿನ ಮಧುಮೇಹ ರೋಗಿಗಳಿಗೆ ಉಚಿತ ಇನ್ಸುಲಿನ್ ಪೆನ್ ನೀಡಲಾಗುವುದು. ಮಾರಣಾಂತಿಕ ಕಾಯಿಲೆ ರೋಗಿಗಳಿಗೆ ಕೇರಳ ಮಾದರಿ ಗೃಹಾಧಾರಿತ ಆರೈಕೆ ಒದಗಿಸಲಾಗುವುದು. ಇಸ್ಕಾನ್ ಮೂಲಕ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಆಹಾರ ಪೂರೈಕೆ ಮಾಡಲಾಗುವುದು. ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2,500 ಹುದ್ದೆಗಳ ಶೀಘ್ರ ಭರ್ತಿ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
- 06 Mar 2026 10:48 AM (IST)Karnataka Budget LIVE: ಸಿರಿಧಾನ್ಯ ಉತ್ಪನ್ನ ಉತ್ತೇಜನಕ್ಕಾಗಿ ಮಿಲೆಟ್ ಹಬ್ ನಿರ್ಮಾಣಸಿರಿಧಾನ್ಯ ಉತ್ಪನ್ನ ಉತ್ತೇಜನಕ್ಕಾಗಿ ಮಿಲೆಟ್ ಹಬ್ ನಿರ್ಮಿಸಲಾಗುತ್ತದೆ. 100 ಕೋಟಿ ರೂಪಾಯಿ ವೆಚ್ಚದಲ್ಲಿ ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ ಜಾರಿ ಮಾಡಲಾಗುತ್ತದೆ. ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ ಜಾರಿ ಮಾಡಲಾಗುತ್ತದೆ. ಮುಂದಿನ ಮೂರು ವರ್ಷದಲ್ಲಿ ಸಸ್ಯ ಸಂಜೀವಿನಿ ಯೋಜನೆ ಜಾರಿ ಮಾಡಲಾಗುತ್ತದೆ. ಕೃಷಿ ಮಾಹಿತಿಗಾಗಿ AI ತಂತ್ರಜ್ಞಾನ ಆಧಾರಿತ ರೈತ ಕರೆ ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ. ಚಿತ್ರದುರ್ಗದಲ್ಲಿ ಕೃಷಿ ಉದ್ದಿಮೆ ತರಬೇತಿ ಕೇಂದ್ರ ಉನ್ನತೀಕರಣಗೊಳಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ 2026ರ ಬಜೆಟ್ನಲ್ಲಿ ಘೋಷಿಸಿದ್ದಾರೆ.
- 06 Mar 2026 10:46 AM (IST)Karnataka Budget LIVE: ಬೆಂಗಳೂರಲ್ಲಿ ಸ್ತನ, ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರ ಸ್ಥಾಪನೆಬೆಂಗಳೂರಲ್ಲಿ ಸ್ತನ, ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರ ಸ್ಥಾಪನೆ ಮಾಡುವುದಾಗಿ ರಾಯಚೂರು, ಬಾಗಲಕೋಟೆ, ವಿಜಯಪುರ, ಬೀದರ್, ಕೊಪ್ಪಳ ಚಿತ್ರದುರ್ಗ, ಮಂಡ್ಯ, ಭದ್ರಾವತಿ, ಕೆಜಿಎಫ್ನಲ್ಲಿ ESI ಆಸ್ಪತ್ರೆ ಉನ್ನತೀಕರಣಗೊಳಿಸುವುದಾಗಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
- 06 Mar 2026 10:45 AM (IST)Karnataka Budget LIVE: ಈ ವರ್ಷ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ. ಹಣ ಮೀಸಲುಈ ವರ್ಷ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ. ಹಣ ಮೀಸಲಿಡಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
- 06 Mar 2026 10:43 AM (IST)Karnataka Budget LIVE: 60 ಕೋಟಿ ರೂ. ವೆಚ್ಚದಲ್ಲಿ ನೂತನ 10 GTTC ಕೇಂದ್ರಗಳ ಸ್ಥಾಪನೆ60 ಕೋಟಿ ರೂ. ವೆಚ್ಚದಲ್ಲಿ ನೂತನ10 GTTC ಕೇಂದ್ರಗಳ ಸ್ಥಾಪನೆ ಮಾಡಲಾಗುತ್ತದೆ, ಕಾರ್ಮಿಕರ ಮಕ್ಕಳಿಗಾಗಿ ನೂತನ 62 ವಸತಿ ಶ್ರಮಿಕ ಶಾಲೆ ಆರಂಭಿಸಲಾಗುತ್ತದೆ. ಒಟ್ಟು 104 ಶಾಲೆಗಳ ಆರಂಭಕ್ಕೆ ಆದ್ಯತೆ ನೀಡಲಾಗುತ್ತದೆ. ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಕೌಶಲ್ಯ ತರಬೇತಿ ಅಕಾಡೆಮಿ ತೆರೆಯಲಾಗುತ್ತದೆ. 200 ಕೋಟಿ ರೂಪಾಯಿ ವೆಚ್ಚದಲ್ಲಿ ಅಕಾಡೆಮಿ ಸ್ಥಾಪನೆ ಮಾಡಲಾಗುತ್ತದೆ. ಕಾರ್ಮಿಕರ ವಿಮಾ ಸೊಸೈಟಿಯಿಂದ ಹುಬ್ಬಳ್ಳಿ, ಇಂದಿರಾನಗರ , ಮೈಸೂರು, ದೊಡ್ಡ ಬಳ್ಳಾಪುರದಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ಆರಂಭಿಸಲಾಗುತ್ತದೆ ಎಂದು ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
- 06 Mar 2026 10:41 AM (IST)Karnataka Budget LIVE: ಸಾರಿಗೆ ಇಲಾಖೆಗೆ 15,500 ಕೋಟಿ ರೂ. ತೆರಿಗೆ ಸಂಗ್ರಹಣೆ ಗುರಿಸಾರಿಗೆ ಇಲಾಖೆಗೆ 15,500 ಕೋಟಿ ರೂ. ತೆರಿಗೆ ಸಂಗ್ರಹಣೆ ಗುರಿ ನೀಡಲಾಗಿದೆ. ನೊಂದಣಿ ಹಾಗೂ ಮುದ್ರಾಂಕ ಇಲಾಖೆಗೆ 29 ಸಾವಿರ ಕೋಟಿ ರಾಜಸ್ವ ಗುರಿ, ಅಬಕಾರಿ ಇಲಾಖೆ ಇಲಾಖೆಯಲ್ಲಿ 45,000 ಕೋಟಿ ರೂ. ಆದಾಯ ಗುರಿ ನೀಡಲಾಗಿದೆ.
- 06 Mar 2026 10:39 AM (IST)Karnataka Budget LIVE: 56,432 ಉದ್ಯೋಗ ಭರ್ತಿ: ಸಿದ್ದರಾಮಯ್ಯಈ ವರ್ಷ 56,432 ಉದ್ಯೋಗ ಭರ್ತಿಗೆ ಚಾಲನೆ ನೀಡಲಾಗುತ್ತಿದೆ. ನೇಮಕಾತಿಗೆ ವಯೋಮಿತಿ 5 ವರ್ಷಗಳ ಸಡಿಲಿಕೆ ನೀಡಿದ್ದೇವೆ . ಕರ್ನಾಟಕ 45 ಉತ್ಪನ್ನಗಳಿಗೆ GI ಮಾನ್ಯತೆ ದೊರೆತಿದೆ.ಮುಜರಾಯಿ ಇಲಾಖೆ ವ್ಯಾಪ್ತಿಯ 259 ಕಲ್ಯಾಣಿಗಳ ಪುನರುಜ್ಜೀವನ ಮಾಡಲಾಗುತ್ತದೆ. ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆಗೆ 100 ಕೋಟಿ ರೂ. ಅನುದಾನ ನೀಡಲಾಗುತ್ತದೆ.
- 06 Mar 2026 10:35 AM (IST)Karnataka Budget LIVE: ಕರ್ನಾಟಕದ ಒಟ್ಟು ಸಾಲ 8 ಲಕ್ಷ 24,000 389 ಕೋಟಿ ರೂ. ಇದೆ: ಸಿದ್ದರಾಮಯ್ಯಕರ್ನಾಟಕದ ಒಟ್ಟು ಸಾಲ 8 ಲಕ್ಷ 24,000 389 ಕೋಟಿ ರೂ. ಇದೆ, ಗಣಿಗಾರಿಕೆಯಿಂದ 11,000 ಕೋಟಿ ರೂಪಾಯಿ ಶುಲ್ಕ ಅಂದಾಜು ಬರಬಹುದೆಂದು ಅಂದಾಜಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
- 06 Mar 2026 10:34 AM (IST)Karnataka Budget LIVE: ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ರೋಪ್ ವೇಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ರೋಪ್ ವೇ ನಿರ್ಮಾಣ ಮಾಡಲಾಗುತ್ತದೆ. ಪಿಪಿಪಿ ಮಾದರಿಯಲ್ಲಿ ರೋಪ್ ವೇ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
- 06 Mar 2026 10:31 AM (IST)Karnataka Budget LIVE: ಯು.ಆರ್ ಅನಂತ ಮೂರ್ತಿ ಹೆಸರಿನಲ್ಲಿ ಅಧ್ಯಯನ ಪೀಠಯು.ಆರ್ ಅನಂತ ಮೂರ್ತಿ ಹೆಸರಿನಲ್ಲಿ ಅಧ್ಯಯನ ಪೀಠ ತೆರೆಯಲಾಗುತ್ತದೆ, ಕುವೆಂಪು ವಿವಿಯಲ್ಲಿ ಅಧ್ಯಯನ ಪೀಠ ಸ್ಥಾಪನೆ ಮಾಡಲಾಗುವುದು ಎಂದು 2026-27ನೇ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
- 06 Mar 2026 10:29 AM (IST)Karnataka Budget LIVE: ಹಾಲು ಕೊಡುವ ಹಸುಗಳ ಆರೈಕೆ ಬಗ್ಗೆ ಸಿದ್ದರಾಮಯ್ಯ ಮಾತುಆರ್ಥಿಕ ಅಭಿವೃದ್ಧಿಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ, ಹೆಚ್ಚು ಹಾಲು ಕೊಡುವ ಹಸುಗಳಿಗೆ ಹೆಚ್ಚು ಆರೈಕೆ ಮಾಡಬೇಕು, ಒಕ್ಕೂಟ ಸರ್ಕಾರವೂ ಸಂವೇದನಾ ಶೀಲತೆಯಿಂದ ವರ್ತಿಸಬೇಕು, ಗ್ಯಾರಂಟಿ ಯೋಜನೆಗಳ ಮೂಲಕ ಜನರ ಆರ್ಥಿಕ ಸುಧಾರಣೆ ಆಗ್ತಿದೆ, ಸೌಕರ್ಯ ಅಭಿವೃದ್ದಿಗೂ ನಾವು ಗಮನ ಹರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
- 06 Mar 2026 10:27 AM (IST)Karnataka Budget LIVE: ರಾಜ್ಯದಲ್ಲಿ ಗ್ಯಾರಂಟಿ ಮೂಲಕ ದೊಡ್ಡ ಸಾಧನೆ ಮಾಡಿದ್ದೇವೆ: ಸಿದ್ದರಾಮಯ್ಯರಾಜ್ಯದಲ್ಲಿ ಗ್ಯಾರಂಟಿ ಮೂಲಕ ದೊಡ್ಡ ಸಾಧನೆ ಮಾಡಿದ್ದೇವೆ ಎಂದು ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
- 06 Mar 2026 10:21 AM (IST)Karnataka Budget LIVE: ಬಜೆಟ್ ಮಂಡನೆ ಆರಂಭಿಸಿದ ಸಿದ್ದರಾಮಯ್ಯಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಆರಂಭಿಸಿದ್ದಾರೆ.
- 06 Mar 2026 09:58 AM (IST)Karnataka Budget LIVE: ಬಜೆಟ್ಗೆ ಅನುಮೋದನೆಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆದಿದೆ. ಬಜೆಟ್ಗೆ ಅನುಮೋದನೆ ಸಿಕ್ಕಿದೆ.
- 06 Mar 2026 09:50 AM (IST)Karnataka Budget LIVE: ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಆರಂಭಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಿದೆ, ಬಜೆಟ್ ಮಂಡನೆಗೆ ಅನುಮೋದನೆ ಪಡೆಯಲಿದ್ದಾರೆ.
- 06 Mar 2026 09:34 AM (IST)Karnataka Budget LIVE: ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯಕೆಂಪು ಸೂಟ್ಕೇಸ್ನೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧಕ್ಕೆ ಬಂದಿದ್ದಾರೆ. ಕೆಲವೇ ಕ್ಷಣಗಳಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಲಿದೆ.
- 06 Mar 2026 09:30 AM (IST)Karnataka Budget LIVE: ಬಸ್ ನಿಲ್ದಾಣಗಳಲ್ಲಿ ಕರ್ನಾಟಕ ಬಜೆಟ್ ನೇರ ಪ್ರಸಾರಇಂದು ಸಿದ್ದರಾಮಯ್ಯ 17ನೇ ದಾಖಲೆಯ ಬಜೆಟ್ ಮಂಡನೆ ಹಿನ್ನೆಲೆ, ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ ಇರಲಿದೆ. ರಾಜ್ಯದ ಆಯ್ದ 230 ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ ಮಾಡಲಾಗುತ್ತಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಬಜೆಟ್ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಬೆಂಗಳೂರಿನ 6 ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ ವೀಕ್ಷಿಸಬಹುದು.
- 06 Mar 2026 08:57 AM (IST)Karnataka Budget LIVE: ಕರ್ನಾಟಕ ಬಜೆಟ್, ಬೆಂಗಳೂರಿನ ನಿರೀಕ್ಷೆಗಳೇನು?ಬೆಂಗಳೂರಿನ ಅಭಿವೃದ್ಧಿಗೆ ಮತ್ತಷ್ಟು ಅನುದಾನ ಮೀಸಲಿಡಬಹುದು, ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಬಹುದು, ಮೆಟ್ರೋ ವಿಸ್ತರಣೆ, ಡಬಲ್ ಡೆಕ್ಕರ್ ಮಾರ್ಗ, ಐಟಿ ಕಾರಿಡಾರ್ ಸ್ಥಾಪನೆಗೆ ಹಣ ಮೀಸಲಿಡಬಹುದು, ಕೈಗೆಟುಕುವ ದರದಲ್ಲಿ ವಸತಿ, ಶುದ್ಧ ಕುಡಿಯುವ ನೀರು ಮತ್ತು ನಿರಂತರ ವಿದ್ಯುತ್ ಪೂರೈಕೆಯಂತಹ ಪ್ರಮುಖ ಬೇಡಿಕೆ ಈಡೇರಿಸುವ ನಿರೀಕ್ಷೆ. ವಿದ್ಯುತ್ ತೆರಿಗೆ ಇಳಿಕೆ, ಆಸ್ತಿ ತೆರಿಗೆ ರಿಯಾಯಿತಿ ನೀಡುವ ನಿರೀಕ್ಷೆ ಇದೆ.
- 06 Mar 2026 08:27 AM (IST)Karnataka Budget LIVE: ಲಕ್ಕುಂಡಿ ಅಭಿವೃದ್ಧಿಗೆ ಹಣ ಮೀಸಲುಬಜೆಟ್ ನಲ್ಲಿ ಲಕ್ಕುಂಡಿ ಅಭಿವೃದ್ಧಿಗೆ 100ಕೋಟಿ ರೂ. ನೀಡುವ ನಿರೀಕ್ಷೆ ಇದೆ. ಇತ್ತೀಚೆಗಷ್ಟೇ ಲಕ್ಕುಂಡಿಯಲ್ಲಿ ನಿಧಿ ಸಿಕ್ಕಿತ್ತು. ಲಕ್ಕುಂಡಿ ಗ್ರಾಮ ಸ್ಥಳಾಂತರಕ್ಕೆ ಗ್ರಾಮಸ್ಥರೇ ಸಜ್ಜಾಗಿದ್ದಾರೆ.
- 06 Mar 2026 08:20 AM (IST)Karnataka Budget LIVE: ತೆರಿಗೆ ಆದಾಯ2020-21ರಲ್ಲಿ ರಾಜ್ಯದ ತೆರಿಗೆ ಆದಾಯ ಕುಸಿತ ಕಂಡಿತ್ತು. ಆದರೆ 2021-22ರಿಂದ ಅದು ವೇಗವಾಗಿ ಏರಿಕೆ ಕಾಣತೊಡಗಿತು. 2022-23ರಲ್ಲಿ ತೆರಿಗೆ ಸಂಗ್ರಹಣದಲ್ಲಿ ದೊಡ್ಡ ಜಿಗಿತ ಕಂಡುಬಂದಿತು. 2023-24ರಲ್ಲಿ ಬೆಳವಣಿಗೆ ಬಹುತೇಕ ಸ್ಥಗಿತಗೊಂಡಂತಾಗಿದ್ದರೂ, 2024-25 ಮತ್ತು 2025-26ರಲ್ಲಿ ಮತ್ತೆ ವೇಗ ಪಡೆದಿದೆ. 2025-26ರಲ್ಲಿ ತೆರಿಗೆ ಆದಾಯವು 2 ಲಕ್ಷ ಕೋಟಿ ರೂ.ಗೂ ಅಧಿಕವಾಗುವ ನಿರೀಕ್ಷೆ ವ್ಯಕ್ತವಾಗಿದೆ.
- 06 Mar 2026 08:16 AM (IST)Karnataka Budget LIVE: ಬಜೆಟ್ ನಿರೀಕ್ಷೆಗಳೇನು?ರಾಜ್ಯದ ಸಮಗ್ರ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡುವ ನಿರೀಕ್ಷೆ ಇದೆ. ವೈದ್ಯಕೀಯ ಕಾಲೇಜು ಇಲ್ಲದ ಜಿಲ್ಲೆಗಳಿಗೆ ಹೊಸ ಕಾಲೇಜುಗಳ ಘೋಷಣೆ ಸಾಧ್ಯತೆ ದಟ್ಟವಾಗಿದೆ.ಬೆಳಗಾವಿ-ಹುಬ್ಬಳ್ಳಿ ರೈಲು ಮಾರ್ಗ, ಕೈಗಾರಿಕಾ ಆಧುನೀಕರಣ, ಪ್ರವಾಸೋದ್ಯಮಕ್ಕೆ ಪಿಪಿಪಿ ಮಾದರಿಯಲ್ಲಿ ಮೂಲಸೌಕರ್ಯ?,ಪ್ರಗತಿಯಲ್ಲಿರುವ ನೀರಾವರಿ ಯೋಜನೆಗಳಿಗೆ ವಿಶೇಷ ಅನುದಾನ ನಿರೀಕ್ಷೆ ಇದೆ.
- 06 Mar 2026 08:04 AM (IST)Karnataka Budget LIVE: ಬಜೆಟ್ ಅಧಿವೇಶನಬಜೆಟ್ ಅಧಿವೇಶನವು ಮಾರ್ಚ್ 6 ರಿಂದ ಮಾರ್ಚ್ 27 ರವರೆಗೆ ನಡೆಯಲಿದ್ದು, ಉಭಯ ಸದನಗಳಲ್ಲಿ 14 ದಿನಗಳ ಚರ್ಚೆ ನಡೆಯಲಿದೆ. ಮಾಡಿದ ಘೋಷಣೆಗಳು ಕರ್ನಾಟಕದ ಆರ್ಥಿಕ ದಿಕ್ಕು, ಅಭಿವೃದ್ಧಿ ಆದ್ಯತೆಗಳು ಮತ್ತು ಮುಂಬರುವ ವರ್ಷದ ಕಲ್ಯಾಣ ಬದ್ಧತೆಗಳ ಬಗ್ಗೆ ಚರ್ಚೆ ನಡೆಯಲಿದೆ.
- 06 Mar 2026 07:41 AM (IST)Karnataka Budget LIVE: ಬಜೆಟ್ ಗಾತ್ರ ಎಷ್ಟಿರಬಹುದು?ಈ ವರ್ಷದ ರಾಜ್ಯ ಬಜೆಟ್ ಗಾತ್ರ ಸುಮಾರು 4.50 ಲಕ್ಷ ಕೋಟಿ ರೂ. ತಲುಪುವ ಸಾಧ್ಯತೆ ಇದೆ ಎಂದು ಹಣಕಾಸು ಇಲಾಖೆಯ ಅಂದಾಜುಗಳು ಸೂಚಿಸುತ್ತವೆ. ಅದೇ ಸಮಯದಲ್ಲಿ ಸಾಲದ ಪ್ರಮಾಣವು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸರ್ಕಾರ ಹಣಕಾಸು ನಿರ್ವಹಣೆ ಹೇಗೆ ಮಾಡುತ್ತದೆ ಎಂದು ಕಾದು ನೋಡಬೇಕಿದೆ.
- 06 Mar 2026 07:37 AM (IST)Karnataka Budget LIVE: 2026ರ ಬಜೆಟ್ನಲ್ಲಿ ಯಾವೆಲ್ಲಾ ಕ್ಷೇತ್ರಗಳಿಗೆ ಒತ್ತು?ಈ ಬಾರಿಯ ಬಜೆಟ್ನಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ ಆದ್ಯತೆ ನೀಡುವುದರ ಜೊತೆಗೆ, ರಾಜ್ಯದ ಆರ್ಥಿಕ ಹೊರೆಯನ್ನು ತಗ್ಗಿಸಲು ಯೋಜನೆಗಳಲ್ಲಿ ಬದಲಾವಣೆಗಳನ್ನು ತರಲಾಗುತ್ತದೆಯೇ ಎಂಬ ಕುತೂಹಲವಿದೆ. ಮೂಲಸೌಕರ್ಯ, ಶಿಕ್ಷಣ, ಕೃಷಿ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಬಜೆಟ್ನಲ್ಲಿ ಹೆಚ್ಚಿನ ಒತ್ತು ನೀಡುವ ಸಾಧ್ಯತೆ ಇದೆ. ಹೀಗಾಗಿ, ಸಿದ್ದರಾಮಯ್ಯ ಮಂಡಿಸಲಿರುವ ಈ ಬಜೆಟ್ನತ್ತ ರಾಜ್ಯದ ಜನರ ಚಿತ್ತ ನೆಟ್ಟಿದೆ.
- 06 Mar 2026 07:25 AM (IST)Karnataka Budget Live: ಆರ್ ಅಶೋಕ್ ಕಿಡಿರಾಜ್ಯ ಬಜೆಟ್ ಮಂಡನೆಗೂ ಮುನ್ನ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸರ್ಕಾರ ಸುಮಾರು 1.15 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಮತ್ತು ಸಾರ್ವಜನಿಕರ ಮೇಲೆ ಹೊಸ ತೆರಿಗೆಗಳನ್ನು ವಿಧಿಸಬಹುದು ಎಂದು ಹೇಳಿದ್ದಾರೆ.





