ವೇಣೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾರ್ಯದ ನಿಮಿತ್ತ ಮುಂದುವರಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜ. ೧೪ರಂದು ಬೆಳಿಗ್ಗೆ 11-00 ಗಂಟೆಗೆ ಭಕ್ತಾಧಿಗಳ ಸಮಾಲೋಚನ ಸಭೆ ನಡೆಯಲಿದ್ದು, ಅದರ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದಲ್ಲಿ ಅನಾವರಣಗೊಳಿಸಲಾಯಿತು.
ಬಾಕಿ ಉಳಿದಿರುವ ಕೆಲಸ ಕಾರ್ಯಗಳ ಪೈಕಿ ಮುಖ್ಯವಾಗಿ ದೇವಸ್ಥಾನ ಎದುರು ಭಾಗದಲ್ಲಿ ರಾಜಗೋಪುರ ಹಾಗೂ ಒಳಾಂಗಣಕ್ಕೆ ಚಪ್ಪರ ನಿರ್ಮಾಣ ಕಾರ್ಯವು ಶೀಘ್ರವಾಗಿ ನಡೆಸಲು ಚಿಂತಿಸಲಾಗಿದೆ ಎಂದು ವ್ಯವಸ್ಥಾಪನ ಸಮಿತಿ ತಿಳಿಸಿದೆ.






