ಶೈಕ್ಷಣಿಕ ಪ್ರಗತಿಗೆ ಖಾಸಗಿ ವಿದ್ಯಾಸಂಸ್ಥೆಗಳ ಸಹಕಾರ ಮುಖ್ಯ:ಟಿ.ರಘುಮೂರ್ತಿ.

 

ಚಳ್ಳಕೆರೆ: ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಆಸಕ್ತಿ ಮೂಡುವಂತ ಶಿಕ್ಷಣ ಎಲ್ಲರಿಗೂ ದೊರೆಯಬೇಕಿದೆ. ತಾಲ್ಲೂಕಿನ ಶೈಕ್ಷಣಿಕ ಪ್ರಗತಿ ಉತ್ತಮವಾಗಿದ್ದು, ಖಾಸಗಿ ವಿದ್ಯಾಸಂಸ್ಥೆಗಳ ಕೊಡುಗೆಯೂ ಅಪಾರವಾಗಿದೆ. ಸಮಾಜದ ಅಭಿವೃದ್ದಿಗೆ ಶಿಕ್ಷಣವೇ ತಳಹದಿ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಸಂದರ್ಭದಲ್ಲಿ ಶಿಕ್ಷಕರು ಹೆಚ್ಚು ಜಾಗೃತರಾಗಿ ಮಕ್ಕಳ ಮನೋವಿಕಾಸಕ್ಕೆ ಉಪಯುಕ್ತವಾಗುವ ಶಿಕ್ಷಣ ನೀಡಬೇಕೆಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.

ಅವರು, ನಗರದ ಕುವೆಂಪು ಶಾಲೆಯಲ್ಲಿ ಶಾಲಾ ಆಡಳಿತ ಮಂಡಳಿ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವ ಮತ್ತು ಕುವೆಂಪು ಜನ್ಮದಿನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕಳೆದ ಹಲವಾರು ವರ್ಷಗಳಿಂದ ಕುವೆಂಪು ವಿದ್ಯಾಸಂಸ್ಥೆಯ ಪ್ರಗತಿಯನ್ನು ವೀಕ್ಷಿಸಿದ್ದೇನೆ. ಶಾಲಾ ಆಡಳಿತ ಮಂಡಳಿ ಮತ್ತು ಶಾಲಾ ಬೋಧಕವರ್ಗ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ಅಭಿವೃದ್ದಿ ಪಡಿಸಲು ಸಾಕಷ್ಟು ಪರಿಶ್ರಮವಹಿಸುತ್ತಿದೆ ಎಂದರು.

ನಿವೃತ್ತ ಮುಖ್ಯ ಅಭಿಯಂತರ ಎಂ.ರವೀಂದ್ರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಯಾವುದೇ ಶಿಕ್ಷಣ ಸಂಸ್ಥೆ ಪ್ರಗತಿಹೊಂದಬೇಕಾದರೆ ವಿದ್ಯಾರ್ಥಿಗಳು ಶಿಕ್ಷಕರ ಜೊತೆಯಲ್ಲಿ ಪೋಷಕರ ಸಹಕಾರವೂ ಸಹ ಮುಖ್ಯವಾಗುತ್ತದೆ. ಶಾಲೆಯಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳಿಗೆ ಪೋಷಕರು ನಮಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಎಲ್ಲರ ಸಹಕಾರದಿಂದ ಇನ್ನೂ ಹೆಚ್ಚಿನ ಅಭಿವೃದ್ದಿಯನ್ನು ಸಾಧಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯ ‘ತಾಲೂಕುಗಳಿಗೆ ಉಸ್ತುವಾರಿಗೆ ‘KAS ಅಧಿಕಾರಿ’ಗಳ ನೇಮಕ

ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ, ನಿವೃತ್ತ ಪ್ರಾಂಶುಪಾಲ ಮೀರಸಾಬಿಹಳ್ಳಿ ಶಿವಣ್ಣ, ಸಿ.ಶಿವಲಿಂಗಪ್ಪ, ಶ್ರೀರಾಮರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್, ನಗರಸಭಾ ಸದಸ್ಯರಾದ ಪಾಲಮ್ಮ, ಸುಮ, ಎನ್.ಎಂ.ಕೃಷ್ಣಮೂರ್ತಿ, ಮುಖ್ಯ ಶಿಕ್ಷಕ ತಿಪ್ಪೇಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours