ಜಿಲ್ಲೆಯಲ್ಲಿ 85 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 10318 ಕ್ಕೆ ಏರಿಕೆ

 

ಚಿತ್ರದುರ್ಗ, ಅಕ್ಟೋಬರ್14:
ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ 85 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10318ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಗುರುವಾರ 358 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಗುರುವಾರ ಒಟ್ಟು 1548 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 85 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 10318 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 46 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 9964 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 307 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 81291 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

ಈವರೆಗೆ 83786 ಜನರ ಮಾದರಿ ಸಂಗ್ರಹಿಸಲಾಗಿದ್ದು, 72902 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 79 ಜನರ ವರದಿ ಬರುವುದು ಬಾಕಿ ಇದೆ. 487 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours