ಕೋವಿಡ್ ಆಟ ಜಿಲ್ಲೆಯಲ್ಲಿ 131 ಜನರಿಗೆ ಕೋವಿಡ್ ಸೋಂಕು ದೃಢ: 55 ಮಂದಿ ಬಿಡುಗಡೆ

 


ಚಿತ್ರದುರ್ಗ,ಏಪ್ರಿಲ್28:
ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 131 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 16,990ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 59, ಚಳ್ಳಕೆರೆ 18, ಹಿರಿಯೂರು 11, ಹೊಳಲ್ಕೆರೆ 11, ಹೊಸದುರ್ಗ 27, ಮೊಳಕಾಲ್ಮುರು ತಾಲ್ಲೂಕಿನಲ್ಲಿ 04 ಹಾಗೂ ಹೊರ ಜಿಲ್ಲೆಯ 01 ಪ್ರಕರಣ ಸೇರಿದಂತೆ ಒಟ್ಟು 131 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಬುಧವಾರ  55 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಬುಧವಾರ ಒಟ್ಟು 2287 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 131 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 16,990 ಕ್ಕೆ ಏರಿಕೆಯಾಗಿದೆ. ಇದುವರೆಗೂ ಒಟ್ಟು 71 ಜನ ಕೋವಿಡ್‍ನಿಂದ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 15,937 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 982 ಸಕ್ರಿಯ ಪ್ರಕರಣಗಳು ಇವೆ.
 ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,36,979 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

  ಈವರೆಗೆ 4,11,379 ಜನರ ಮಾದರಿ ಸಂಗ್ರಹಿಸಲಾಗಿದ್ದು, 3,92,664 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 1016 ಜನರ ವರದಿ ಬರುವುದು ಬಾಕಿ ಇದೆ. 709 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours