ಕೋವಿಡ್ ಆರ್ಭಟಕ್ಕಿಲ್ಲ ಬ್ರೇಕ್ ಜಿಲ್ಲೆಯಲ್ಲಿ 407 ಜನರಿಗೆ ಕೋವಿಡ್ ಸೋಂಕು ದೃಢ: 138 ಮಂದಿ ಬಿಡುಗಡೆ

 

 

 

 


ಚಿತ್ರದುರ್ಗ,ಮೇ.17:
ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 407 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 21,137 ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 216, ಚಳ್ಳಕೆರೆ 44, ಹಿರಿಯೂರು 70, ಹೊಳಲ್ಕೆರೆ 28, ಹೊಸದುರ್ಗ 24, ಮೊಳಕಾಲ್ಮುರು ತಾಲ್ಲೂಕಿನಲ್ಲಿ 21, ಇತರೆ 4 ಪ್ರಕರಣ ಸೇರಿದಂತೆ ಒಟ್ಟು 407 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಸೋಮವಾರ 138 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಸೋಮವಾರ ಒಟ್ಟು 1055 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 407 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 21,137 ಕ್ಕೆ ಏರಿಕೆಯಾಗಿದೆ. ಕೋವಿಡ್‍ನಿಂದ ಇಂದು ಒಬ್ಬರು ಮೃತರಾಗಿದ್ದು ಇದುವರೆಗೆ ಒಟ್ಟು 113 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 17,842 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 3,182 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,71,641 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

 

 

ಈವರೆಗೆ 4,51,132 ಜನರ ಮಾದರಿ ಸಂಗ್ರಹಿಸಲಾಗಿದ್ದು, 4,28,276 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 966 ಜನರ ವರದಿ ಬರುವುದು ಬಾಕಿ ಇದೆ. 753 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours