ಕೋವಿಡ್ ಹೈಸ್ಪಿಡ್ ಜಿಲ್ಲೆಯಲ್ಲಿ ಇಂದು 838 ಹೊಸ ಪ್ರಕರಣಕ್ಕೆ ಜನ ಶಾಕ್ .

 

ಜಿಲ್ಲೆಯಲ್ಲಿ 838 ಜನರಿಗೆ ಕೋವಿಡ್ ಸೋಂಕು ದೃಢ: 190 ಮಂದಿ ಬಿಡುಗಡೆ


ಚಿತ್ರದುರ್ಗ,ಮೇ.21:
ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ 838 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 23,401 ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 397, ಚಳ್ಳಕೆರೆ 106, ಹಿರಿಯೂರು 88, ಹೊಳಲ್ಕೆರೆ 51, ಹೊಸದುರ್ಗ 117, ಮೊಳಕಾಲ್ಮುರು ತಾಲ್ಲೂಕಿನಲ್ಲಿ 62 ಹಾಗೂ ಹೊರ ಜಿಲ್ಲೆಯ 17 ಪ್ರಕರಣಗಳು ಸೇರಿದಂತೆ ಒಟ್ಟು 838 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶುಕ್ರವಾರ 190 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಶುಕ್ರವಾರ ಒಟ್ಟು 2243 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 838 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 23,401 ಕ್ಕೆ ಏರಿಕೆಯಾಗಿದೆ. ಕೋವಿಡ್‍ನಿಂದ ಇಂದು ಇಬ್ಬರು ಮೃತರಾಗಿದ್ದು ಇದುವರೆಗೆ ಒಟ್ಟು 123 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 18,480 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 4,798 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 193813 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

ಈವರೆಗೆ 4,60,586 ಜನರ ಮಾದರಿ ಸಂಗ್ರಹಿಸಲಾಗಿದ್ದು, 4,36,227 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 182 ಜನರ ವರದಿ ಬರುವುದು ಬಾಕಿ ಇದೆ. 776 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours