ಜಿಲ್ಲೆಯಲ್ಲಿ 61 ಜನರಿಗೆ ಕೋವಿಡ್ ಸೋಂಕು ದೃಢ: ಸೋಂಕಿತರ ಸಂಖ್ಯೆ 1975 ಕ್ಕೆ ಏರಿಕೆ

 


ಚಿತ್ರದುರ್ಗ, ಆಗಸ್ಟ್ 23:
ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ ಮತ್ತೆ 61 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1,975 ಕ್ಕೆ ಏರಿಕೆಯಾಗಿದ್ದು, ಭಾನುವಾರದ ವರದಿಯಲ್ಲಿ 02 ಜನರು ಮೃತಪಟ್ಟ ವರದಿಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 33, ಹಿರಿಯೂರು 03, ಹೊಸದುರ್ಗ 03, ಚಳ್ಳಕೆರೆ 20, ಮೊಳಕಾಲ್ಮುರು 01 ಹಾಗೂ ಹೊಳಲ್ಕೆರೆ 01 ಸೇರಿದಂತೆ ಒಟ್ಟು 61 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಭಾನುವಾರ 93 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಭಾನುವಾರ ಒಟ್ಟು 285 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದ್ದು, ವರದಿಯಲ್ಲಿ 61 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 1,975 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 32 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೇ 1,506 ಜನರು ಗುಣಮುಖರಾಗಿ ಬಿಡುಗಡೆಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 436 ಸಕ್ರಿಯ ಪ್ರಕರಣಗಳು ಇವೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು 516 ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 13,423 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

ಈವರೆಗೆ 33,433 ಜನರ ಮಾದರಿ ಸಂಗ್ರಹಿಸಲಾಗಿದ್ದು, 29,082 ಜನರ ವರದಿ ನೆಗೆಟೀವ್ ಬಂದಿದೆ. ಉಳಿದ 1,992 ಜನರ ವರದಿ ಬರುವುದು ಬಾಕಿ ಇದೆ. 384 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours