ಜಿಲ್ಲೆಯಲ್ಲಿ 219 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 5,816ಕ್ಕೆ ಏರಿಕೆ

 


ಚಿತ್ರದುರ್ಗ, ಸೆಪ್ಟೆಂಬರ್19:
   ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಶನಿವಾರದ ವರದಿಯಲ್ಲಿ 219 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5,816ಕ್ಕೆ ಏರಿಕೆಯಾದಂತಾಗಿದೆ
 ಚಿತ್ರದುರ್ಗ ತಾಲ್ಲೂಕಿನಲ್ಲಿ 136, ಚಳ್ಳಕೆರೆ 38, ಹಿರಿಯೂರು 05, ಹೊಸದುರ್ಗ 08, ಮೊಳಕಾಲ್ಮುರು 16 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 16 ಸೇರಿದಂತೆ ಒಟ್ಟು 219 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
 ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶನಿವಾರ 348 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಶನಿವಾರ ಒಟ್ಟು 829 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 219 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 5,816ಕ್ಕೆ ಏರಿಕೆಯಾಗಿದ್ದು, ಇದುವರೆಗೆ 35 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 4409 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1372 ಸಕ್ರಿಯ ಪ್ರಕರಣಗಳು ಇವೆ.
  ಸದ್ಯ ಜಿಲ್ಲೆಯಲ್ಲಿ ಒಟ್ಟು 1396 ಕಂಟೈನ್ಮೆಂಟ್ ವಲಯಗಳಿವೆ.  ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 38759 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

  ಈವರೆಗೆ 54278 ಜನರ ಮಾದರಿ ಸಂಗ್ರಹಿಸಲಾಗಿದ್ದು, 46298 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 1711 ಜನರ ವರದಿ ಬರುವುದು ಬಾಕಿ ಇದೆ. 453 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours