18 ವರ್ಷ ಮೇಲ್ಪಟ್ಟ ಎಲ್ಲಾ ವಿಕಲಚೇತನರಿಗೆ ಕೋವಿಡ್ ಲಸಿಕೆ

 


ಚಿತ್ರದುರ್ಗ,ಮೇ.24:
ಕೋವಿಡ್-19 ವೈರಸ್ ಸೋಂಕು ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿರುವ 18 ವರ್ಷ ಮೇಲ್ಪಟ್ಟ ಎಲ್ಲಾ ವಿಕಲಚೇತನರಿಗೆ ಆದ್ಯತೆಯ ಮೇರೆಗೆ ಕೋವಿಡ್-19 ಲಸಿಕೆ ನೀಡಲು ರಾಜ್ಯಮಟ್ಟದ ಮಾರ್ಗಸೂಚಿ ಅನುಸಾರ ಪ್ರಾರಂಭಿಸಲಾಗಿದೆ.
ಲಸಿಕಾ ಕೇಂದ್ರಗಳಲ್ಲಿ ಪ್ರತಿ ದಿನ 18 ವರ್ಷ ಮೇಲ್ಪಟ್ಟ ವಿಕಲಚೇತನರಿಗೆ ಕಡ್ಡಾಯವಾಗಿ ಲಸಿಕೆಗಳನ್ನು ಕಾಯ್ದಿರಿಸಲಾಗಿದೆ.
ಜಿಲ್ಲಾಸ್ಪತ್ರೆಯ ಲಸಿಕಾ ಕೇಂದ್ರದಲ್ಲಿ 100 ಡೋಸ್, ಸಮುದಾಯ ಆರೋಗ್ಯ ಕೇಂದ್ರದಲ್ಲಿ 50 ಡೋಸ್, ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ 50 ಡೋಸ್, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 10 ಡೋಸ್ ಲಸಿಕೆ ಕಾಯ್ದಿರಿಸಲಾಗಿದೆ.
ಜಿಲ್ಲೆಯಲ್ಲಿರುವ 18 ವರ್ಷ ಮೇಲ್ಪಟ್ಟ ಎಲ್ಲಾ ವಿಕಲಚೇತನರು ತಮ್ಮ ಅಂಗವಿಕಲತೆ ಗುರುತಿನ ಚೀಟಿ, ಯುಡಿಐಡಿ  ಕಾರ್ಡ್, ಹಾಗೂ ಆಧಾರ್ ಕಾರ್ಡ್ ಅನ್ನು ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಜಿಲ್ಲಾ ಆಸ್ಪತ್ರೆ ಲಸಿಕಾ ಕೇಂದ್ರಗಳಲ್ಲಿ ತೆಗೆದುಕೊಂಡು ಹೋಗಿ ಕೋವಿಡ್ ಲಸಿಕೆ ಪಡೆಯಲು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ನೋಡಲ್ ಅಧಿಕಾರಿಗಳಾಗಿ ನೇಮಿಸಿರುವ ಸಹಾಯಕ ಶಿಶುಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದು. ಚಿತ್ರದುರ್ಗ ಎಂಆರ್‍ಡ್ಲ್ಯೂ ಮೈಲಾರಪ್ಪ-9880821934,ಚಳ್ಳಕೆರೆ ನರಸಿಂಹಮೂರ್ತಿ-9611266930, ಹಿರಿಯೂರು ಬಸವರಾಜ್-9902898901, ಹೊಳಲ್ಕೆರೆ ರಾಘವೇಂದ್ರ-9740030227, ಹೊಸದುರ್ಗ ಫಯಾಜ್-9741829990, ಮೊಳಕಾಲ್ಮುರು  ದಾದಾಪೀರ್-9742725576 ಅವರಿಂದ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಅಂಗವಿಕಲರ  ಕಲ್ಯಾಣಾಧಿಕಾರಿ ವೈಶಾಲಿ.ಜೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours