ಮಂಗಳೂರು, ನ.27: ಮಂಗಳೂರಿನ ತಣ್ಣೀರುಬಾವಿ ಸೇತುವೆ ನಿರ್ಮಾಣ ಕಾಮಗಾರಿಯ ವೇಳೆ ಕ್ರೇನ್ ನೀರಿಗೆ ಬಿದ್ದು ಇಬ್ಬರು ಕಾರ್ಮಿಕರು ಗಾಯಗೊಂಡಿರುವ ಘಟನೆ ಶುಕ್ರವಾರ ವರದಿಯಾಗಿದೆ.

ಬೆಳಗ್ಗೆ 9.20ರ ಸುಮಾರಿಗೆ ಸೇತುವೆಯ ಸ್ಲ್ಯಾಬ್ ಜೋಡಿಸಲು ಎರಡು ಕ್ರೇನ್ಗಳನ್ನು ಬಳಸಲಾಗುತ್ತಿತ್ತು. ಈ ವೇಳೆ ಒಂದು ಕ್ರೇನ್ ನೀರಿಗೆ ಉರುಳಿದೆ.ಈ ಸಂದರ್ಭ ಸ್ಲ್ಯಾಬ್ ಬೋಟ್ ಮೇಲೆ ಬಿದ್ದ ಪರಿಣಾಮ ಬೋಟ್ ಮುಳುಗಡೆಯಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಇಬ್ಬರು ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
