ಬೆಸ್ಕಾಂ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ:ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ

 

ಉಜ್ವಲ ಭಾರತ, ಉಜ್ವಲ ಭವಿಷ್ಯ ಕಾರ್ಯಕ್ರಮದಲ್ಲಿ ದೇಶದ ವಿದ್ಯುತ್ ಕ್ಷೇತ್ರದ ಕ್ರಾಂತಿಯ ಅನಾವರಣ*
ಚಿತ್ರದುರ್ಗ(ಕರ್ನಾಟಕ ವಾರ್ತೆ)ಜು.26:
ಭಾರತ ಸರ್ಕಾರ ವಿದ್ಯುತ್ ಕ್ಷೇತ್ರದಲ್ಲಿ ಮಹತ್ತರ ಕ್ರಾಂತಿಕರ ಬದಲಾವಣೆ ತಂದಿದೆ. ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿದೆ.  ವಿತರಣಾ ವ್ಯವಸ್ಥೆ ಹಾಗೂ ಗ್ರಾಹಕರ ಸೇವೆಯಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಬೆಸ್ಕಾಂ ನೌಕರರು ನಿರಂತರ ಹಗಲು ರಾತ್ರಿ, ಜೀವದ ಹಂಗು ತೊರೆದು ಸೇವೆ ಸಲ್ಲಿಸುತ್ತಿದ್ದಾರೆ. ಬೆಸ್ಕಾಂ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ ಹೇಳಿದರು.
ಕೇಂದ್ರ ಸರ್ಕಾರದ ಹೊಸ ಮತ್ತು ನವೀಕರಿಸಬಹುದಾದ ಇಂಧನಗಳ ಸಚಿವಾಲಯ, ವಿದ್ಯುತ್ ಸಚಿವಾಲಯ ಹಾಗೂ ಬೆಸ್ಕಾಂ ಸಂಯುಕ್ತ ಆಶ್ರಯದಲ್ಲಿ ನಗರದ ತರಾಸು ರಂಗಮAದಿರದಲ್ಲಿ ಮಂಗಳವಾರ ಆಯೋಜಿಸಲಾದ ಉಜ್ವಲ ಭಾರತ, ಉಜ್ವಲ ಭವಿಷ್ಯ, ವಿದ್ಯುತ್ @ 2047 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸ್ವಾತಂತ್ರೋತ್ಸವ 75 ವರ್ಷಾಚರಣೆ ಸಂದರ್ಭದಲ್ಲಿ ಸರ್ಕಾರ ಪ್ರತಿ ಇಲಾಖೆಗಳ ಸಾಧನೆಯನ್ನು ಆಜಾದಿ ಕಾ ಅಮೃತ ಮಹೋತ್ಸ ಕಾರ್ಯಕ್ರಮ ಆಯೋಜಿಸಿ ಅನಾವರಣ ಗೊಳಿಸಲಾಗುತ್ತಿದೆ. ಕಳೆದ 8 ವರ್ಷದಲ್ಲಿ ವಿದ್ಯುತ್ ಸಂಪರ್ಕ ಹೊಂದಿರದ 18374 ಹಳ್ಳಿಗಳಿಗೆ ಹೊಸದಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ನಿರಂತರವಾಗಿ ದೊರಕುತ್ತಿದೆ. ಇದರಿಂದ ಕೃಷಿ ಹಾಗೂ ಕೈಗಾರಿಕೆಗಳ ಉತ್ತೇಜನೆಗೆ ಇಂಬು ದೊರೆತಿದೆ. ಇಂಗಾಲ ರಹಿತ, ನವೀಕರಿಸಬಹುದಾದ ಇಂಧನ ಮೂಲಗಳ ಮೂಲಕ ವಿದ್ಯುತ್ ಉತ್ಪಾದನೆ ಸರ್ಕಾರ ಸಾಕಷ್ಟು ಸವಲತ್ತುಗಳನ್ನು ನೀಡುತ್ತಿದೆ. ಇವುಗಳನ್ನು ಜನರಿಗೆ ತಲುಪಿಸುವ ಕಾರ್ಯ ಬೆಸ್ಕಾಂ ಮಾಡಬೇಕು ಎಂದರು.
*ವಿದ್ಯುತ್ ಸಂಪರ್ಕ ಸಾಧನೆ ಕಿರುಚಿತ್ರ ಪ್ರದರ್ಶನ*
ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳಾದ ಯುನಿವರ್ಸಲ್ ಹೌಸ್‌ಹೋಲ್ಡ್ ಎಲೆಕ್ಟ್ರೀಫಿಕೇಶನ್, ಗ್ರಾಮವಿದ್ಯುದೀಕರಣ, ವಿತರಣಾ ವ್ಯವಸ್ಥೆಯನ್ನು ಬಲಪಡಿಸುವುದು. ಫಿಲ್ಮ್ ಆನ್ ಸಾಮರ್ಥ್ಯ ಸೇರ್ಪಡೆ, ಒನ್ ನೇಷನ್ ಒನ್ ಗ್ರಿಡ್, ನವೀಕರಿಸಬಹುದಾದ ಶಕ್ತಿ ಮೂಲಗಳು, ರಾಜ್ಯ ಸರ್ಕಾರದ ಯೋಜನೆಗಳಾದ ವಿದ್ಯುತ್ ಚಾಲಿತ ವಾಹನಗಳ ಬಳಕೆದಾರರಿಗೆ ಅರಿವು, ಬೆಳಕು ಯೋಜನೆ, ವಿತರಣಾ ಪರಿವರ್ತಕಗಳ ನಿರ್ವಹಣಾ ಅಭಿಯಾನ, ವಿವಿಧ ಫಲಾನುಭವಿಗಳು ಹಾಗೂ ಗ್ರಾಹಕರ ಹಕ್ಕುಗಳ ಕುರಿತು ಕಿರು ಚಲನಚಿತ್ರ ಪ್ರದರ್ಶಿಸಲಾಯಿತು.
*ನಾಟಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ವಿದ್ಯುತ್ ಸ್ವಾವಲಂಭನೆಯ ಮನವರಿಕೆ*
ಹಿರಿಯೂರಿನ ಪಾಲನ ಕಲಾತಂಡ ಗ್ರಾಮೀಣ ಭಾಗದಲ್ಲಿ ಉಂಟಾಗಿರುವ ವಿದ್ಯುತ್ ಕ್ಷೇತ್ರದಲ್ಲಿನ ಬದಲಾವಣೆ ಅದರ ಪರಿಣಾಮವಾಗಿ ಗ್ರಾಮೀಣ ಜನರ ಜೀವನದಲ್ಲಿ ಉಂಟಾದ ಪರಿವರ್ತನೆ ಕುರಿತು ನುಕ್ಕಡ್-1 ಹಾಗೂ ಇಂಧನ ಇಲಾಖೆಯ ಯೋಜನೆಗಳ ಕುರಿತಾದ ನುಕ್ಕಡ್-2 ನಾಟಕ ಪ್ರದರ್ಶಿಸಿದರು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನೆಡೆಸಿಕೊಟ್ಟರು.
ಜಿ.ಪಂ.ಸಿಇಓ ಡಾ.ನಂದಿನಿದೇವಿ ಕಾರ್ಯಕ್ರಮದಲ್ಲಿ ವಂದನಾ ಅರ್ಪಣೆ ಮಾಡಿದರು. ಹಿರಿಯೂರಿನ ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾದ ಜನರಲ್ ಮ್ಯಾನೇಜರ್ ಹರೀಶ್ ಕುಮಾರ್ ನಾಯರ್ ಪ್ರಾಸ್ತಾವಿಕವಾಗಿ ಮಾತನಾದರು. ಗಂಗಾಧರ ತಂಡ ಗೀತೆಗಳು, ನಾಡಗೀತೆ ಹಾಗೂ ರೈತಗೀತೆಯನ್ನು ಪ್ರಸುತ ಪಡಿಸಿದರು. ಪ್ರದೀಪ್ ಕುಮಾರ್ ನಿರೂಪಿಸಿದರು.  ಬೆಸ್ಕಾಂ ಅಧೀಕ್ಷಕ ಇಂಜಿನಿಯರ್‌ಗಳಾದ ಬಿ.ಎಸ್.ಜಗದೀಶ್, ಶ್ರೀನಿವಾಸ್, ಕಾರ್ಯ ನಿರ್ವಾಹಕ ಇಂಜಿನಿಯರ್ ಡಿ.ಜಯಣ್ಣ ಸೇರಿದಂತೆ ಬೆಸ್ಕಾಂ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
[t4b-ticker]

You May Also Like

More From Author

+ There are no comments

Add yours