ಮಕ್ಕಳಲ್ಲಿ ಪರಿಸರ ಪ್ರಜ್ಙೆ ಮೂಡಿಸಿ ನೈಸರ್ಗಿಕ ಸಂಪತ್ತು ಸಂರಕ್ಷಿಸಿ:ಟಿ.ರಘುಮೂರ್ತಿ

 

ಶಾಲೆಗಳಲ್ಲಿ ಗಿಡ ನೆಟ್ಟು ಪೋಷಿಸುವ ಕಾರ್ಯ ನಿರಂತರವಾಗಿರಲಿ: ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಪರಿಸರ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನೂ ಸಹ ಹಮ್ಮಿಕೊಳ್ಳಲಾಗಿದ್ದು, ವಿದ್ಯಾರ್ಥಿಗಳು ನೈಸರ್ಗಿಕ ಸಂಪತ್ತನ್ನು ಸಂರಕ್ಷಣೆ ಮಾಡುವ ಬಗ್ಗೆ ಜಾಗೃತರಾಗಬೇಕೆಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.

ಓದಿ: ಅಂಗನವಾಡಿ ಕಾರ್ಯಕರ್ತೆರು ಹಾಗೂ ಸಹಾಯಕಿಯರ ಹುದ್ದೆ ತಾತ್ಕಾಲಿಕ ಆಯ್ಕೆ ಪಟ್ಟಿ ರಿಲೀಸ್

ತಾಲ್ಲೂಕಿನ ಕೆಂಚವೀರನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶಿಕ್ಷಣ ಇಲಾಖೆ ಮತ್ತು ಸಾಮಾಜಿಕ ವಲಯ ಅರಣ್ಯಾಧಿಕಾರಿಗಳ ಸಹಯೋಗದಲ್ಲಿ ಸಸ್ಯ ಶ್ಯಾಮಲ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಭಾಗಗಳ ಸರ್ಕಾರಿ ಶಾಲೆಯ ಆವರಣದಲ್ಲಿ ವಿಶಾಲವಾದ ಮೈದಾನವಿರುತ್ತವೆ, ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ಶಾಲೆಗಳಿಗೆ ಗಿಡಗಳನ್ನು ನೀಡಲಾಗುತ್ತದೆ. ಶಾಲೆಯ ಆಡಳಿತ ಮಂಡಳಿ ಅರಣ್ಯ ಇಲಾಖೆಯಿಂದ ಗಿಡ ಪಡೆದು ಮಕ್ಕಳಿಂದಲೇ ಶಾಲಾ ಆವರಣದಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವ ಕಾರ್ಯ ಮಾಡಬೇಕು. ವಿದ್ಯಾರ್ಥಿಗಳು ಸಹ ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚು ಆಸಕ್ತಿಯಿಂದ ಭಾಗವಹಿಸಿ. ವಿದ್ಯಾರ್ಥಿಗಳು ಹಾಕಿದ ಗಿಡ ಮುಂದಿನ ದಿನಗಳಲ್ಲಿ ಎಮ್ಮರವಾಗಿ ಬೆಳೆದು ಎಲ್ಲರಿಗೂ ಉಪಯೋಗವಾಗಲಿದೆ. ವಿದ್ಯಾರ್ಥಿಗಳು ಸಹ ತಾವು ನೆಟ್ಟ ಗಿಡದ ಬಗ್ಗೆ ಹೆಚ್ಚು ವಿಶ್ವಾಸ ಹೊಂದಿರುತ್ತಾರೆ. ಈ ಕಾರ್ಯಕ್ರಮ ನಿರಂತರವಾಗಿ ನಡೆಯಲಿ ಎಂದರು.

ಓದಿ:ಸಚಿವ ಸುಧಾಕರ್ ವಿರುದ್ದ FIR ದಾಖಲು ಏಕೆ ಗೊತ್ತೆ.

ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್ ಮಾತನಾಡಿ, ನಗರ ಹಾಗೂ ಗ್ರಾಮೀಣ ಭಾಗಗಳ ಸರ್ಕಾರಿ ಶಾಲೆಗಳ ಆವರಣದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಗಳ ಸಮ್ಮುಖದಲ್ಲಿ ಗಿಡ ನೆಡುವ ಕಾರ್ಯಕ್ಕೆ ಇಂದಿನಿAದ ಚಾಲನೆ ದೊರಕಿದೆ. ಸಸ್ಯ ಶ್ಯಾಮಲ ಕಾರ್ಯಕ್ರಮವನ್ನು ತಾಲ್ಲೂಕಿನ ಎಲ್ಲಾ ಶಾಲೆಗಳಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಿದೆ. ಶಾಲೆಯ ಶಿಕ್ಷಕ ವರ್ಗ, ಆಡಳಿತ ಮಂಡಳಿ ಸದಸ್ಯರು ಮಕ್ಕಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳಿಗೆ ಹೆಚ್ಚು ಉತ್ತೇಜನ ನೀಡಬೇಕು ಎಂದರು.

ನೀವು ಓದಿ: ಗಣೇಶ್ ಮೂರ್ತಿ ಸ್ಥಾಪಿಸಲು ಏನೇನು ರೂಲ್ಸ್ ,ಡಿಸಿ ಹೇಳಿದ್ದೇನು

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟೇಶ್, ಸದಸ್ಯರಾದ ಓಂಕಾರಪ್ಪ, ಹನುಮಂತಪ್ಪ, ತಿಪ್ಪಮ್ಮ, ದೇವರಾಜು ಮುಖಂಡರಾದ ಮಹಂತೇಶ್, ವಿಶ್ವನಾಥ, ಬಸವರಾಜಪ್ಪ, ಶೇಕರಪ್ಪ, ರಾಜಣ್ಣ, ಅಶೋಕ್, ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿ ಬಾಬು, ನಗರಸಭಾ ಸದಸ್ಯ ಬಿ.ಟಿ.ರಮೇಶ್‌ಗೌಡ, ಮುಖ್ಯ ಶಿಕ್ಷಕ ಬಿ.ಜಿ.ನಾಗರಾಜು ಶಿಕ್ಷಕರಾದ ಕೆಂಚವೀರನಹಳ್ಳಿ ಮಲ್ಲೇಶ್, ಎಂ.ಪಿ.ರಾಜಶೇಖರ್, ಬಸವರಾಜು, ಎಸ್‌ಡಿಎಂಸಿ ಅಧ್ಯಕ್ಷ ಕೆ.ಟಿ.ಸಂಪತ್‌ಕುಮಾರ್, ಮುಂತಾದವರು ಉಪಸ್ಥಿತರಿದ್ದರು. ‍

[t4b-ticker]

You May Also Like

More From Author

+ There are no comments

Add yours