ಕ್ರೆಡಿಟ್ ಕೋ-ಆಪರೇಟಿವ್ ಸಂಘಗಳು ಹಣಕಾಸು ವ್ಯವಹಾರ ಮಾಹಿತಿ ನೀಡಬೇಕು.ಆರ್. ಚಂದ್ರಯ್ಯ

 

ಕ್ರೆಡಿಟ್ ಕೋ-ಆಪರೇಟಿವ್ ಸಂಘಗಳ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಆರ್.ಚಂದ್ರಯ್ಯ
ಹಣಕಾಸು ವ್ಯವಹಾರಗಳ ವರದಿ ನೀಡಿ
***********
ಚಿತ್ರದುರ್ಗ(ಕರ್ನಾಟಕ ವಾರ್ತೆ)ಏಪ್ರಿಲ್06:
ಚುನಾವಣಾ ನೀತಿ ಸಂಹಿತೆ ಜಾರಿ ಇರುವುದರಿಂದ ಯಾವುದೇ ಅನಿಯಮಿತ ಹಣಕಾಸು ವ್ಯವಹಾರಗಳು ಕಂಡಲ್ಲಿ ಕೂಡಲೇ ಚುನಾವಣಾಧಿಕಾರಿಗಳಿಗೆ ವರದಿ ನೀಡಬೇಕು ಎಂದು ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಆರ್.ಚಂದ್ರಯ್ಯ ಹೇಳಿದರು.
ಇಲ್ಲಿನ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕ್ರೆಡಿಟ್ ಕೋ-ಆಪರೇಟಿವ್ ಸಂಘಗಳ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ರೂ.50,000-00 ಗಳಿಗಿಂತ ಹೆಚ್ಚಿನ ಹಣಕಾಸಿನ ವ್ಯವಹಾರ ಯಾವುದೇ ವೈಯಕ್ತಿಕ ವ್ಯಕ್ತಿ ಮಾಡುವಂತಿಲ್ಲ. ಎಲ್ಲಾ ಸಹಕಾರ ಸಂಘಗಳು ಯಾವುದೇ ಪಕ್ಷದ ಅಥವಾ ವ್ಯಕ್ತಿಯ ಪರವಾಗಿ ಕಾರ್ಯನಿರ್ವಹಿಸುವಂತಿಲ್ಲ. ತಟಸ್ಥ ನೀತಿ ಅನುಸರಿಸಬೇಕು ಎಂದು ಸಹಕಾರಿ ಸಂಘಗಳ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮತದಾರರಿಗೆ ಆಮಿಷಕ್ಕೆ ಒಳಗಾಗುವ ರೀತಿ ಲೋನ್ ಇತ್ಯಾದಿ ಸೌಲಭ್ಯಗಳನ್ನು ನೀಡುವಂತಿಲ್ಲ. ತುರ್ತು ಪರಿಸ್ಥಿತಿಗಳನ್ನು ಹೊರತುಪಡಿಸಿ ಮಾದರಿ ನೀತಿ ಸಂಹಿತೆ ಮುಗಿಯುವವರೆಗೂ ಬೋರ್ಡ್ ಅಥವಾ ಮಂಡಳಿ ಸಭೆ ನಡೆಸುವಂತಿಲ್ಲ ಎಂದು ತಿಳಿಸಿದರು.
ಯಾವುದೇ ರೀತಿಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ಸಂಘಗಳ ಪದಾಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಹಾಗೂ ಸಂಘಗಳ ಮಾನ್ಯತೆ ರದ್ದು ಮಾಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ತಹಶೀಲ್ದಾರ್ ಡಾ.ನಾಗವೇಣಿ, ಮೇಲ್ವಿಚಾರಕರಾದ ಚೈತ್ರ ಹಾಗೂ ಚಿತ್ರದುರ್ಗ ತಾಲ್ಲೂಕಿನ ಸಹಕಾರ ಸಂಘಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಇದ್ದರು.
ಮದ್ಯ ಮಾರಾಟ ಅಂಗಡಿಗಳಿಗೆ ಭೇಟಿ: ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಆರ್.ಚಂದ್ರಯ್ಯ ಅವರು ಅಬಕಾರಿ ಇಲಾಖೆ ಅಧಿಕಾರಿಗಳೊಂದಿಗೆ ಬುಧವಾರ ಚಿತ್ರದುರ್ಗ ವ್ಯಾಪ್ತಿಯ ಕೆಲವು ಮದ್ಯ ಮಾರಾಟ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಡಾ.ನಾಗವೇಣಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಸತ್ಯನಾರಾಯಣ ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳು ಇದ್ದರು.
ಫೋಟೋ ವಿವರ: ಚಿತ್ರದುರ್ಗ ತಾಲ್ಲೂಕು ಕಚೇರಿಯಲ್ಲಿ ಬುಧವಾರ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಆರ್.ಚಂದ್ರಯ್ಯ ಅಧ್ಯಕ್ಷತೆಯಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕ್ರೆಡಿಟ್ ಕೋ-ಆಪರೇಟಿವ್ ಸಂಘಗಳ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆ ನಡೆಯಿತು.

[t4b-ticker]

You May Also Like

More From Author

+ There are no comments

Add yours