ಶೈಕ್ಷಣಿಕ ಪ್ರಗತಿ ಜೊತೆಗೆ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ:ಟಿ.ರಘುಮೂರ್ತಿ ಕರೆ

 

 

 

 

ಚಿತ್ರದುರ್ಗ :ಪೈಪೋಟಿ ಯುಗದಲ್ಲಿ ಮಕ್ಕಳು ಶೈಕ್ಷಣಿಕ ಪ್ರಗತಿ ಜೊತೆಗೆ ಕ್ರೀಡೆಯೂ ಮುಖ್ಯವಾಗಿದ್ದು  ಮಕ್ಕಳು ಕ್ರೀಡೆಯಲ್ಲಿ ಹೆಚ್ಚು ಹೆಚ್ಚು ಪಾಲ್ಗೊಳ್ಳಲು  ಅಣಿಯಾಗಬೇಕು ಎಂದು  ಚಳ್ಳಕೆರೆ ಶಾಸಕ (MLA)   ಟಿ.ರಘುಮೂರ್ತಿ ಕ್ರೀಡಾಪಟುಗಳಿಗೆ ಕರೆ ನೀಡಿದರು.

ದಾವಣಗೆರೆ ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘ, ಹೆಚ್.ಪಿ.ಸಿ.ಸಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಚಳ್ಳಕೆರೆ ಇವರುಗಳ ಸಹಯೋಗದೊಂದಿಗೆ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ನಡೆದ ದಾವಣಗೆರೆ ವಿಶ್ವವಿದ್ಯಾನಿಲಯ ಅಂತರ ಕಾಲೇಜುಗಳ ಪುರುಷರ ಮತ್ತು ಮಹಿಳೆಯರ 12 ನೇ ಅಥ್ಲೆಟಿಕ್ಸ್ ಕ್ರೀಡಾಕೂಟ ಹಾಗೂ ವಿ.ವಿ. ತಂಡದ ಆಯ್ಕೆ 2023-24 ನೇ ಸಾಲಿನ ಮುಕ್ತಾಯ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.

ಕಳೆದ ಮೂರು ದಿನಗಳ ಕಾಲ ನಡೆದ ಕ್ರೀಡಾಕೂಟದಲ್ಲಿ   ಒಟ್ಟು  134 ಕಾಲೇಜುಗಳಿಂದ  800 ಕ್ಕೂ ಹೆಚ್ಚು  ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡಿರುವುದು ಸಂತೋಷದ ಸಂಗತಿ. ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಜೊತೆ ಜೊತೆಯಲ್ಲಿ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು.  ತಮ್ಮ ಸ್ವರ್ಧೆಯಲ್ಲಿ  ಸೋಲು-ಗೆಲುವು ಸಮಾನವಾಗಿ ಸ್ವೀಕರಿಸಬೇಕು‌. ಮಕ್ಕಳು ಮೊದಲು  ಕ್ರೀಡೆಯಲ್ಲಿ ಪಾಲ್ಗೊಳ್ಳವುದನ್ನು ಕಲಿಯಬೇಕು‌ ಎಂದರು

 

 

ಸರ್ಕಾರದಿಂದ ಕ್ರೀಡಾ ಕೋಟಾದಲ್ಲಿ  ಸರ್ಕಾರಿ ಕೆಲಸಕ್ಕೂ ಸಹ ತಾವುಗಳು ಹೋಗಬಹುದು. ನಮ್ಮ ಜಿಲ್ಲೆಯವರು ಶಿಕ್ಷಕರುಗಳು ಶ್ರಮಿಸಬೇಕು‌. ಕಲಿಕೆಯಷ್ಟೆ ಶ್ರದ್ದೆಯಿಂದ ಕ್ರೀಡೆಯಲ್ಲಿ  ತರಬೇತಿ ಪಡೆದರೆ ಯಶಸ್ಸು ಸಾಧ್ಯವಾಗುತ್ತದೆ. ಚಳ್ಳಕೆರೆ ಕಾಲೇಜಿನ ಸಹಯೋಗದಲ್ಲಿ ಯಶಸ್ವಿಯಾಗಿ ನಡೆದಿದೆ. ಎಲ್ಲಾರೂ ಸಹ ನಮ್ಮ ಮಕ್ಕಳು ಸೋತವರು ಗೆದ್ದವರು ಇಬ್ಬರು ಮುಂದಿನ ಹಂತಕ್ಕೆ ಹೋಗಲು ತರಬೇತಿ ಪಡೆಯಬೇಕು ಎಂದು ಹೇಳಿದರು‌.

ಇದನ್ನೂ ಓದಿ: ಡಿ.23 ರಿಂದ ಕಣ್ಮನ ಸೆಳೆಯುವ ಸಾಲು ಎತ್ತಿನ ಗಾಡಿಗಳ ಮಿಂಚೇರಿ ಜಾತ್ರೆ

ಚಳ್ಳಕೆರೆ ಹೆಚ್.ಪಿ.ಸಿ.ಸಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ.ಆರ್.ರಂಗಪ್ಪ ಮಾತನಾಡಿ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಮುಖ್ಯ. ವಿದ್ಯಾರ್ಥಿಗಳು ಮೊಬೈಲ್‍ನಲ್ಲಿ ತಲ್ಲೀನರಾಗುವುದೇ ಕ್ರೀಡೆ ಎಂದುಕೊಂಡಿರುವುದರಿಂದ ಕ್ರೀಡಾ ಮನೋಭಾವ ಕಡಿಮೆಯಾಗುತ್ತಿದೆ. ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.


ಪುರುಷರ ವಿಭಾಗದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಾವಣಗೆರೆ ಚಾಂಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡಿತು. ಮಹಿಳೆಯರ ವಿಭಾಗದಲ್ಲಿ ಹೊನ್ನಾಳಿಯ ಎಸ್.ಎಂ.ಎಸ್. ಪ್ರಥಮ ದರ್ಜೆ ಕಾಲೇಜು ಚಾಂಪಿಯನ್ ಆಗಿ ಹೊರಹೊಮ್ಮಿತು. ಸಮಗ್ರ ಚಾಂಪಿಯನ್ ಪ್ರಶಸ್ತಿಯನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಾವಣಗೆರೆ ತಂಡ ತನ್ನದಾಗಿಸಿಕೊಂಡಿತು.

ದಾವಣಗೆರೆ ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ಕ್ರೀಡಾಧಿಕಾರಿ ಡಾ.ವೀರಪ್ಪ, ಕ್ರೀಡಾಕೂಟದ ಕಾರ್ಯದರ್ಶಿ ಹೆಚ್.ತಿಪ್ಪೇಸ್ವಾಮಿ, ರಾಷ್ಟ್ರ ಮಟ್ಟದ ತೀರ್ಪುಗಾರ ಅರುಣ್, ಅನಿಲ್‍ಕುಮಾರ್, ಗಂಗಾಧರ್, ಡಾ.ವೀರೇಂದ್ರ, ಡಾ.ಪಾಪಣ್ಣ, ರಘುನಾಥ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾಬುರೆಡ್ಡಿ, ಇತಿಹಾಸ ಉಪನ್ಯಾಸಕಿ ಜಯಮ್ಮ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours