ವೇಣೂರು, ಡಿಸೆಂಬರ್ 1: ಬಂಗಾಳ ಕೊಲ್ಲಿಯಲ್ಲಿ ಚೆನ್ನೈನಿಂದ ಸುಮಾರು 50 ಕಿಲೋಮೀಟರ್ ದೂರದಲ್ಲಿ ರೂಪುಗೊಂಡಿದ್ದ ದಿತ್ವಾ ಚಂಡಮಾರುತದ ಪರಿಣಾಮ ಸದಸ್ಯದ ಮಾಹಿತಿ ಪ್ರಕಾರ ಇದೀಗ ವೇಣೂರು ಪರಿಸರದಲ್ಲಿ ಮಳೆಯಾಗಿದೆ.
ಹಠಾತ್ ಸುರಿದ ಮಳೆಯಿಂದ ದ್ವಿಚಕ್ರ ವಾಹನ ಸವಾರರು ಪರದಾಡುವಂತಾಯಿತು. ಡಿಸೆಂಬರ್ 1 ರಿಂದ ಡಿಸೆಂಬರ್ 4 ರವರೆಗೆ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರ ಮಳೆಯ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಇದೀಗ ಬೆಳ್ತಂಗಡಿ ತಾಲೂಕಿನ ವೇಣೂರು ಪರಿಸರದಲ್ಲಿ ಮಳೆಯಾಗಿದೆ.
ಕಳೆದ ನಾಲ್ಕೈದು ದಿನಗಳಿಂದ ರಾಜ್ಯಾದ್ಯಂತ ಗರಿಷ್ಠ ಉಷ್ಣಾಂಶದಲ್ಲಿ ಭಾರಿ ಇಳಿಮುಖ ಕಂಡುಬಂದಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 21 ಡಿಗ್ರಿ ಸೆಂಟಿಗ್ರೇಡ್ಗೆ ಕುಸಿದಿದ್ದು, ಹಗಲಿನ ಹೊತ್ತಿನಲ್ಲಿ ಈ ಪ್ರಮಾಣದ ತಾಪಮಾನ ಕುಸಿತ ಅಪರೂಪ ಎಂದು ಅವರು ಹೇಳಿದ್ದಾರೆ. ರಾತ್ರಿ ಮತ್ತು ಹಗಲಿನ ನಡುವಿನ ತಾಪಮಾನ ವ್ಯತ್ಯಾಸ ಕೇವಲ 2-3 ಡಿಗ್ರಿ ಸೆಂಟಿಗ್ರೇಡ್ಗೆ ಇಳಿದಿರುವುದು ಚಳಿಯ ಅನುಭವವನ್ನು ಹೆಚ್ಚಿಸಿದೆ. ಬೆಂಗಳೂರಿನಲ್ಲಿ ಇಂದಿಂದ ಮೂರನೇ ತಾರೀಖಿನವರೆಗೆ ಚಳಿಯ ವಾತಾವರಣ ಮುಂದುವರಿದು, ನಂತರ ಬಿಸಿಲು ಮೂಡುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.





