ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ನ.02:
ಡಿ.ದೇವರಾಜ ಅರಸು  ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ 2022-23ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯ ಬಯಸುವವರಿಗೆ ಅರ್ಜಿ ಸಲ್ಲಿಸಲು ನಿಗಧಿ ಪಡಿಸಿದ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.
ಅರಿವು ಶೈಕ್ಷಣಿಕ ಸಾಲ ಯೋಜನೆ ಹಾಗೂ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣಕ್ಕೆ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಡಿಸೆಂಬರ್ 12 ರವರೆಗೆ ವಿಸ್ತರಿಸಲಾಗಿದೆ. ಗಂಗಾ ಕಲ್ಯಾಣ ಯೋಜನೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ನವೆಂಬರ್ 5 ರವರೆಗೆ ವಿಸ್ತರಿಸಲಾಗಿದೆ.
ಈಗಾಗಲೇ ಗ್ರಾಮ ಒನ್, ಕರ್ನಾಟಕ ಒನ್ ನಾಗರಿಕ ಸೇವಾ ಕೇಂದ್ರಗಳಲ್ಲಿ ಅಗತ್ಯ  ದಾಖಲೆಗಳೊಂದಿಗೆ ಸೇವಾಸಿಂಧು ಫೋರ್ಟಲ್‍ನಲ್ಲಿ ಅರ್ಜಿಗಳನ್ನು ಆಹ್ವಾನಿಸಿ ಅಂತಿಮ ದಿನಾಂಕವನ್ನು ನಿಗಧಿಪಡಿಸಲಾಗಿತ್ತು. ಯೋಜನೆಗಳಲ್ಲಿ ನಿಗಧಿತ ಗುರಿಯನ್ವಯ ಅರ್ಜಿಗಳು ಸ್ವೀಕೃತವಾಗದ ಕಾರಣ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.
ಈ ಯೋಜನೆಗಳಡಿ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗದ ಫಲಾಪೇಕ್ಷಿಗಳು ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ 08194-220882 ಗೆ ಸಂಪರ್ಕಿಸಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಬಿ.ವಿ.ವೆಂಕಟರಾಜು ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours