ಬೆಂಗಳೂರು, ಮೇ. 30: ಡಿಕೆ ಶಿವಕುಮಾರ್ ಅವರ ಪದಗ್ರಹಣಕ್ಕೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಬುಧವಾರ (ಜೂ.3) ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬುಧವಾರ ಸಂಜೆ 4 ಗಂಟೆಯ ನಂತರ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂದೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಡಿ.ಕೆಶಿ ಜೊತೆಗೆ ಕೆಲವು ಸಚಿವರು ಪ್ರಮಾಣವಚನ ಸ್ವೀಕಾರಿಸಲಿದ್ದಾರೆ.ಕಳೆದ ಗುರುವಾರ ಸಿದ್ದರಾಮಯ್ಯ ಸಿಎಂಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಶನಿವಾರ ಸಂಜೆ ಶಾಸಕಾಂಗ ಸಭೆ ಕರೆಯಲಾಗಿದ್ದು, ಅಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಯಾಗಿ ಅಧಿಕೃತ ಫೋಷಣೆ ಮಾಡಲಾಗುತ್ತದೆ.





