ಮಂಗಳೂರು, ಜು. 22: ದ.ಕ.ಜಿಲ್ಲಾ ನೂತನ ಖಾಝಿಯಾಗಿ ಪಾಣಕ್ಕಾಡ್ ಸೈಯದ್ ನಾಸಿರ್ ಅಬ್ದುಲ್ ಹಯ್ಯಾ ಶಿಹಾಬುದ್ದೀನ್ ಬಾಅಲವಿ ನಗರದ ಬಂದರ್ ಅನ್ಸಾರಿ ರಸ್ತೆಯಲ್ಲಿರುವ ಝೀನತ್ ಬಕ್ಷ್ ಯತೀಂ ಖಾನಾ ಹಾಲ್ನಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಿದರು.

ಮಸ್ಜಿದ್ ಝೀನತ್ ಬಕ್ಷ್ ಮತ್ತು ಈದ್ಗಾ ಜುಮಾ ಮಸ್ಜಿದ್ ಅಧ್ಯಕ್ಷ ಡಾ.ಹಾಜಿ ಯೆನೆಪೊಯ ಅಬ್ದುಲ್ಲಾ ಕುಂಞಿ ಅಧ್ಯಕ್ಷತೆವಹಿಸಿ ಮಾತನಾಡಿದರು. ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಮಸ್ತ ವಿದ್ಯಾಭ್ಯಾಸ ಬೋರ್ಡ್ ಕೋಶಾಧಿಕಾರಿ, ಕೇರಳ ಮುಸ್ಲಿಂ ಲೀಗ್ ಅಧ್ಯಕ್ಷ, ಸೈಯದ್ ಸ್ವಾದಿಕ್ ಅಲಿ ಶಿಹಾಬ್ ತಂಙಳ್ ಮಂಗಳೂರು ತನ್ನದೇ ಆದ ಇಸ್ಲಾಮಿಕ್ ಚರಿತ್ರೆಯನ್ನು ಹೊಂದಿದೆ. ನಮ್ಮ ಹಿರಿಯರು ಧರ್ಮ ಪ್ರಚಾರಕ್ಕೆ ಇಲ್ಲಿಗೆ ಬಂದಾಗ ಇಲ್ಲಿನ ಸಹೋದರ ಧರ್ಮೀಯರು ಅತ್ಯಂತ ಆದರದಿಂದ ಸ್ವಾಗತಿಸಿದ್ದರು.ಅಂತಹ ಮಂಗಳೂರನ್ನು ಕೇಂದ್ರೀಕರಿಸಿಕೊಂಡು ದ.ಕ.ಜಿಲ್ಲೆಯ ಖಾಝಿಯಾಗಿ ಅಧಿಕಾರ ಸ್ವೀಕರಿಸಿರುವ ಸೈಯದ್ ನಾಸಿರ್ ಶಿಹಾಬುದ್ದೀನ್ ಬಾಅಲವಿ ಅವರಿಗೆ ಹೊಣೆಗಾರಿಕೆ ನಿರ್ವಹಿಸಲು ಅಲ್ಲಾಹನು ಅನುಗ್ರಹಿಸಲಿ ಎಂದರು.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸಮಸ್ತದ ಪ್ರಧಾನ ಕಾರ್ಯದರ್ಶಿ ಶೈಖುನಾ ಎಂ.ಟಿ. ಅಬ್ದುಲ್ಲಾ ಮುಸ್ಲಿಯಾ್, ಸಮಸ್ತ ಕೋಶಾಧಿಕಾರಿ ಶೈಖುನಾ ಕೊಯ್ಯೋಡ್ ಉಮರ್ ಮುಸ್ಲಿಯಾರ್, ಎಸ್ವೈಎಸ್ ಕೇಂದ್ರ ಕಾರ್ಯದರ್ಶಿ ಅಬ್ದುಸ್ಸಮದ್ ಪುಕೋಟೂರು, ಆರೋಗ್ಯ ಸಚಿವ ಯು.ಟಿ. ಖಾದರ್ ಶುಭ ಹಾರೈಸಿದರು.
ಮುಖ್ಯ ಅತಿಥಿಯಾಗಿ ಸೈಯದ್ ಆಟಕೋಯ ತಂಙಳ್ ಕುಂಬೋಳ್, ಕವರತ್ತಿ (ಲಕ್ಷದ್ವೀಪ) ಖಾಝಿ ಸೈಯದ್ ಇ.ಪಿ. ಸೈದಾಲಿ ತಂಙಳ್, ಕರ್ನಾಟಕ ಹಜ್ ಸಮಿತಿಯ ಸದಸ್ಯ ಸೈಯದ್ ಅಶ್ರಫ್ ತಂಙಳ್ ಆದೂರು, ಸೈಯದ್ ಝೈನುಲ್ ಆಬಿದಿನ್ ತಂಙಳ್ ದುಗ್ಗಲಡ್ಕ, ಕಾಂಞಂಗಾಡ್ ಸಂಯುಕ್ತ ಜಮಾಅತ್ ಕಾರ್ಯದರ್ಶಿ ಬಶೀರ್ ವೆಳ್ಳಿಕೋತ್, ಸಿ.ಎಂ. ಉಸ್ತಾದ್ರ ಪುತ್ರ ಶಾಫಿ ತಳಂಗರೆ, ತ್ವಾಖಾ ಉಸ್ತಾದರ ಪುತ್ರ ಹುಸೈನ್ ರಹ್ಮಾನಿ, ಸಹೋದರ ಯೂಸುಫ್ ಹಾಜಿ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್, ಅನಿವಾಸಿ ಉದ್ಯಮಿ ಝಕರಿಯ ಜೋಕಟ್ಟೆ ಕಾಸರಗೋಡು ಶಾಸಕ ಮಾಹಿನ್ ಹಾಜಿ, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್, ಉಳ್ಳಾಲ ದರ್ಗಾ ಸಮಿತಿಯ ಅಧ್ಯಕ್ಷ ಹನೀಫ್ ಹಾಜಿ, ಮಾಜಿ ಅಧ್ಯಕ್ಷ ರಶೀದ್ ಹಾಜಿ ಉಳ್ಳಾಲ, ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿಯ ಖತೀಬ್ ಶರೀಫ್ ಅಶ್ರಫಿ, ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಮಾಜಿ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ದ.ಕ. ಜಿಲ್ಲಾ ಮದ್ರಸ ಮ್ಯಾನೇಜ್ಮೆಂಟ್ ಅಧ್ಯಕ್ಷ ಎಂ.ಎ್. ಮೊಯ್ದಿನ್ ಹಾಜಿ ಅಡ್ಡೂರು, ಎಸ್.ಬಿ. ಮುಹಮ್ಮದ್ ದಾರಿಮಿ, ಹಾಜಿ ಅಬ್ದುಲ್ ಸಮದ್, ಕೇಂದ್ರ ಜುಮಾ ಮಸೀದಿಯ ಆಡಳಿತ ಸಮಿತಿಯ ಸದಸ್ಯರಾದ ಮುಹಮ್ಮದ್ ಅಶ್ರಫ್ ಹಳೆಮನೆ, ಮಕ್ಬೂಲ್ ಅಹ್ಮದ್ ಭಾಗವಹಿಸಿದ್ದರು.
ಮಸ್ಜಿದ್ ಝೀನತ್ ಬಕ್ಷ್ ಮತ್ತು ಈದ್ಗಾ ಜುಮಾ ಮಸ್ಜಿದ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಹಾಜಿ ನೂತನ ಖಾಝಿಯ ಪರಿಚಯಸಿದರು.ಮಸ್ಜಿದ್ ಝೀನತ್ ಬಕ್ಷ್ ಮತ್ತು ಈದ್ಗಾ ಜುಮಾ ಮಸ್ಜಿದ್ ಕೋಶಾಧಿಕಾರಿ ಹಾಜಿ ಎಸ್.ಎಂ. ರಶೀದ್ ಸ್ವಾಗತಿಸಿದರು. ಹನೀಫ್ ಹುದವಿ ದೇಲಂಪಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಸ್ಜಿದ್ ಝೀನತ್ ಬಕ್ಷ್ ಮತ್ತು ಈದ್ಗಾ ಜುಮಾ ಮಸ್ಜಿದ್ ಉಪಾಧ್ಯಕ್ಷ, ಮಾಜಿ ಮೇಯರ್ ಕೆ. ಅಶ್ರಫ್ ವಂದಿಸಿದರು. ವಿದ್ಯಾರ್ಥಿ ನಜ್ಮುದ್ದೀನ್ ಕಿರಾಅತ್ ಪಠಿಸಿದರು. ದ.ಕ.ಜಿಲ್ಲಾ ಖಾಝಿಯಾಗಿದ್ದ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಝರಿಯ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಪಾಣಕ್ಕಾಡ್ ಸೈಯ್ ನಾಸಿರ್ ಶಿಹಾಬುದ್ದೀನ್ ಬಾಅಲವಿ ನೇಮಕ ಗೊಂಡಿದ್ದರು.1966ರ ಮೇ 2ರಂದು ಕೇರಳದ ಮಲಪ್ಪುರಂ ಜಿಲ್ಲೆಯ ಪಾಣಕ್ಕಾಡ್ ಸಮೀಪದ ಪೂವಾಡ್ ಎಂಬಲ್ಲಿ ಜನಿಸಿದ್ದ ಇವರು ಸನದು ಪಡೆದ ಬಳಿಕ ಹಲವು ಮಸೀದಿಗಳು ಮತ್ತು ಇಸ್ಲಾಮಿಕ್ ಸಂಸ್ಥೆಗಳಲ್ಲಿ ಖತೀಬ್ ಮತ್ತು ಮುದರ್ರಿಸ್ ಆಗಿ ಕಾರ್ಯನಿರ್ವಹಿಸಿದ್ದರು. ತನ್ನ ತಂದೆಯ ನಿಧನದ ಬಳಿಕ ಅಂಡಮಾನ್ ದ್ವೀಪಗಳಲ್ಲಿ ಖಾಝಿಯಾಗಿ ಹೊಣೆಗಾರಿಕೆ ವಹಿಸಿಕೊಂಡರು. 2009ರಲ್ಲಿ ಕಲ್ಲಿಕೋಟೆಯ ಗ್ರಾಂಡ್ ಖಾಝಿಯಾಗಿ ನಿಯುಕ್ತಿಗೊಂಡಿದ್ದರು. ಬಳಿಕ ಮಲಪ್ಪುರಂ, ಪಾಲಕ್ಕಾಡ್, ತ್ರಿಶೂರ್ ಜಿಲ್ಲೆಗಳಲ್ಲಿರುವ ಸುಮಾರು 300ಕ್ಕೂ ಅಧಿಕ ಮೊಹಲ್ಲಾಗಳ ಖಾಝಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ವಯನಾಡಿನ ಇಮಾಮ್ ಗಝಾಲಿ ಅಕಾಡಮಿ ಮತ್ತು ರಶೀದಿಯಾ ಅರಬಿಕ್ ಕಾಲೇಜಿನ ಪ್ರಾಂಶುಪಾಲ ಹಾಗೂ ವಯನಾಡಿನ ಸೈನ್ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಲೀಡರ್ಶಿಪ್ನ ಪೋಷಕರಾಗಿದ್ದಾರೆ. ಸುನ್ನಿ ಮಹಲ್ ಫೆಡರೇಶನ್ ಮಲಪ್ಪುರಂ ಜಿಲ್ಲಾ ಮಸ್ಲಹತ್ ಸಮಿತಿಯ ಅಧ್ಯಕ್ಷರಾಗಿ, ಸುನ್ನಿ ಯುವಜನ ಸಂಘ ಕೇರಳ ರಾಜ್ಯ ಸಮಿತಿಯ ಸದಸ್ಯರಾಗಿ, ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ತಿರೂರಙ್ಙಾಡಿ ತಾಲೂಕು ಸಮಿತಿಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.



