ರೈತರ ನಿತ್ಯ 7 ಗಂಟೆ ತ್ರಿಫೇಸ್ ಕರೆಂಟ್ ಪೂರೈಕೆ:ಸಚಿವ ಕೆ.ಜೆ.ಜಾರ್ಜ್ 

 

 

 

 

ಬೆಂಗಳೂರು : ರಾಜ್ಯದ ರೈತರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಪ್ರತಿನಿತ್ಯ 7 ಗಂಟೆ ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡುವುದಾಗಿ ತಿಳಿಸಿದೆ.

ಈ ಕುರಿತು ಇಂಧನ ಸಚಿವ ಕೆ.ಜೆ ಜಾರ್ಜ್ (K.J.George) ಮಾತನಾಡಿದ್ದು, ಈಗ ಕೆಲವೆಡೆ ಮಳೆ ಆಗಿದ್ದು, ಬೇಡಿಕೆ ಕಡಿಮೆಯಾಗಿದೆ.

ಇದನ್ನೂ ಓದಿ:ವಿವಿಧ ನಿಗಮಗಳ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

 

 

ಜಲ ವಿದ್ಯುತ್, ಉಷ್ಣ, ಪವನ ಮತ್ತು ಸೌರ ವಿದ್ಯುತ್ ಉತ್ಪಾದನೆ ಹೆಚ್ಚಾಗಿದೆ. ಪಂಜಾಬ್ ಮತ್ತು ಉತ್ತರ ಪ್ರದೇಶದಿಂದ ವಿದ್ಯುತ್ ಖರೀದಿಸಲಾಗುತ್ತಿದೆ. ಆದ್ದರಿಂದ ಕೃಷಿಗೆ ಕಡಿತ ಮಾಡಿರುವ ವಿದ್ಯುತ್ ಪೂರೈಕೆಯನ್ನು ಮತ್ತೆ ನೀಡಲಾಗುವುದು. , ಶೀಘ್ರವೇ ಪ್ರತಿನಿತ್ಯ 7 ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ. ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಒಂದೆರಡು ದಿನಗಳಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿದ್ದು, ಅಲ್ಲಿ ಈ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

ಕೃಷಿಗೆ ನಿತ್ಯ 5 ಗಂಟೆ ತ್ರಿಫೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ನಿತ್ಯ 7 ಗಂಟೆ ವಿದ್ಯುತ್ ಪೂರೈಸುವ ನಿರ್ಧಾವನ್ನು ಶೀಘ್ರವೇ ಕೈಗೊಳ್ಳಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

[t4b-ticker]

You May Also Like

More From Author

+ There are no comments

Add yours