ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರು ಸುಪ್ರೀಂಕೋರ್ಟ್ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಸಾಕ್ಷ್ಯಗಳ ವಿಚಾರಣೆಯಲ್ಲಿ ವಿಳಂಬ, ಜೈಲಿನಲ್ಲಿ ಸೌಲಭ್ಯಗಳ ಕೊರತೆ, ಕುಟುಂಬವನ್ನು ಭೇಟಿ ಮಾಡಲು ಜೈಲಧಿಕಾರಿಗಳಿಂದ ಅವಕಾಶ ನಿರಾಕರಣೆ, ಆರೋಗ್ಯ ಸಮಸ್ಯೆ, ಸಹ ಕೈದಿಗಳಿಂದ ಕಿರುಕುಳ, ಬೆದರಿಕೆ, ಇನ್ನೂ ಕ್ವಾರಂಟೈನ್ ಸೆಲ್ನಲಿ ಇಟ್ಟಿರುವುದು ಹೀಗೆ ಹಲವು ಕಾರಣಗಳನ್ನು ನೀಡಿ ದರ್ಶನ್ ಅವರು ಜಾಮೀನಿಗಾಗಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ದರ್ಶನ್ ಪರ ವಕೀಲರು ಹಾಗೂ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವಾದ ಆಲಿಸಿದ ಸುಪ್ರೀಂ ಕೋರ್ಟ್ ದರ್ಶನ್ರ ಜಾಮೀನು ಅರ್ಜಿಯನ್ನು ಪುರಸ್ಕರಿಸಿಲ್ಲ. ಬದಲಿಗೆ ಒಂದು ವರ್ಷದ ಕಾಲಾವಕಾಶವನ್ನು ನೀಡಿದೆ.
ಜಾಮೀನು ಅರ್ಜಿಯ ವಿಚಾರಣೆ ಆಲಿಸಿದ ಸುಪ್ರೀಂಕೋರ್ಟ್, ಪ್ರಕರಣದ ವಿಚಾರಣೆಗೆ ಒಂದು ವರ್ಷದ ಕಾಲಾವಧಿ ನೀಡಿದ್ದು, ಅಷ್ಟರಲ್ಲಿ ಸಾಕ್ಷ್ಯಗಳ ವಿಚಾರಣೆ ಮುಗಿಯದಿದ್ದಲ್ಲಿ, ಜಾಮೀನು ಅರ್ಜಿಯನ್ನು ಪರಿಗಣಿಸುವುದಾಗಿ ಹೇಳಿದೆ. ಅಲ್ಲಿಗೆ, ದರ್ಶನ್ಗೆ ಕನಿಷ್ಟ ಒಂದು ವರ್ಷ ಜೈಲು ವಾಸ ಖಾಯಂ ಆದಂತಾಗಿದೆ. ಒಂದು ವರ್ಷದ ಬಳಿಕವಷ್ಟೆ ಅವರು ಜಾಮೀನಿಗೆ ಅರ್ಜಿ ಸಲ್ಲಿಸಬಹುದಾಗಿದೆ.





