ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಹಬ್ಬ ಆಚರಣೆಗೆ ದಿನಾಂಕ ನಿಗದಿ ಪಡಿಸಲಾಗಿದೆ. ಮೈಸೂರು ದಸರಾ ನಿಮಿತ್ತ ನಡೆಯುವಂತ ಜಂಬೂಸವಾರಿಯನ್ನು ಅಕ್ಟೋಬರ್ 5 ರಂದು ನಡೆಸಲು ದಿನಾಂಕ ಫಿಕ್ಸ್ ಮಾಡಲಾಗಿದ
ಈ ಬಗ್ಗೆ ದಸರಾ ಮಹೋತ್ಸವ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಿಎಂ ಬಸವರಾಜ ಬೊಮ್ಮಾಯಿ ಅವರು, ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಚಾರಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಲಾಗುತ್ತದೆ. ವಿಶ್ವದಾದ್ಯಂತ ಪ್ರಚಾರ ಆಗುವಂತೆ ನೋಡಿಕೊಳ್ಳಲಾಗುತ್ತದೆ. ದಸರಾ ಬ್ರ್ಯಾಂಡ್ ಆಗಬೇಕು. ಆ ನಿಟ್ಟಿನಲ್ಲಿ ಪ್ರಚಾರ ಮಾಡಲಾಗುತ್ತದೆ ಎಂದು ತಿಳಿಸಿದರು.
ಇನ್ನೂ ಸೆಪ್ಟೆಂಬರ್ 26ರಿಂದ ನವರಾತ್ರಿ ಉತ್ಸವ ಆರಂಭಗೊಳ್ಳಲಿದೆ. ಅಕ್ಟೋಬರ್ 5ರಂದು ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆ ನಡೆಯಲಿದೆ ಎಂದು ಹೇಳಿದರು.
[t4b-ticker]
+ There are no comments
Add yours