ದಾವಣಗೆರೆ ವಿಶ್ವವಿದ್ಯಾಲಯದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

 

ದಾವಣಗೆರೆ ವಿಶ್ವವಿದ್ಯಾಲಯದಲ್ಲಿ (Davangere University) ವಿವಿಧ ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ದರ್ಜೆ ಸಹಾಯಕ, ಕಚೇರಿ ಅಧೀಕ್ಷಕರು ಸೇರಿದಂತೆ ಒಟ್ಟು 10 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಪದವೀಧರರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆಫ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 10 ಆಗಿದೆ.

ವಿಶ್ವವಿದ್ಯಾಲಯದಲ್ಲಿ ಲಭ್ಯವಿರುವ ಕಲ್ಯಾಣ ಕರ್ನಾಟಕ ವೃಂದ ಮತ್ತು ಮಿಕ್ಕುಳಿದ ವೃಂದದಲ್ಲಿನ ಹುದ್ದೆಗಳು ಇವಾಗಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಯ ಹೆಸರು: ಬೋಧಕೇತರ

ಹುದ್ದೆಗಳ ಸಂಖ್ಯೆ: 10

ಉದ್ಯೋಗ ಸ್ಥಳ: ದಾವಣಗೆರೆ

ವೇತನ: 30350-97100 ರೂ. ಪ್ರತಿ ತಿಂಗಳು

ಹುದ್ದೆ ಹುದ್ದೆ ಸಂಖ್ಯೆ ವಿದ್ಯಾರ್ಹತೆ ವೇತನ
ಸಹಾಯಕ ರಿಜಿಸ್ಟ್ರಾರ್ 2 ಸ್ನಾತಕೋತ್ತರ ಪದವಿ 52650- 97100 ರೂ ಮಾಸಿಕ
ಕಚೇರಿ ಅಧೀಕ್ಷಕರು 2 ಪದವಿ 43100-83900 ರೂ ಮಾಸಿಕ
ಪ್ರಥಮ ದರ್ಜೆ ಸಹಾಯಕ (FDA) 6 ಪದವಿ 30350-58250 ರೂ ಮಾಸಿಕ

ವಯೋಮಿತಿ: ದಾವಣಗೆರೆ ವಿಶ್ವವಿದ್ಯಾನಿಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:

ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳು: 5 ವರ್ಷಗಳು

ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 3 ವರ್ಷಗಳು

ಅರ್ಜಿ ಸಲ್ಲಿಕೆ: ಆಫ್​ಲೈನ್​

ಅರ್ಜಿ ಶುಲ್ಕ

ವಿಕಲಚೇತನ ದೃಷ್ಟಿದೋಷವುಳ್ಳ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ

ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳು: 500 ರೂ.

ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳು: 1000 ರೂ.

ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್

ಆಯ್ಕೆ ಪ್ರಕ್ರಿಯೆ

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಸಲ್ಲಿಕೆ ವಿಳಾಸ

ರಿಜಿಸ್ಟ್ರಾರ್, ದಾವಣಗೆರೆ ವಿಶ್ವವಿದ್ಯಾಲಯ, ಶಿವಗಂಗೋತ್ರಿ, ದಾವಣಗೆರೆ- 577007, ಕರ್ನಾಟಕ

ಪ್ರಮುಖ ದಿನಾಂಕಗಳು:

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19 ಸೆಪ್ಟೆಂಬರ್​ 2022

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18 ಅಕ್ಟೋಬರ್ 2022

ಅಧಿಸೂಚನೆ ಪ್ರಮುಖ ಲಿಂಕ್‌ಗಳು

ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್‌ಸೈಟ್: davangereuniversity.ac.in

ಅರ್ಜಿ ಸಲ್ಲಿಕೆ ಪ್ರಕ್ರಿಯೆ

-ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ

[t4b-ticker]

You May Also Like

More From Author

+ There are no comments

Add yours